Rahul Gandhi: ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ, ಅಪ್ಪು ಪತ್ನಿಗೆ ಸಾಂತ್ವಾನ
ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ 5 ತಿಂಗಳುಗಳೇ ಆಗಿವೆ. ಅಪ್ಪು ಕುಟುಂಬದ ಜೊತೆ ಇಡೀ ಕನ್ನಡ ಚಿತ್ರರಂಗ ಅಪ್ಪು ಕಳೆದುಕೊಂಡು ನೋವುಣ್ಣುತ್ತಿದೆ. ಪುನೀತ್ ನಿಧನದ ಹಿನ್ನೆಲೆ ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಮನೆ ಆಗಮಿಸಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಸಮಾಧಾನದ ಮಾತುಗಳನ್ನು ಆಡುತ್ತಿದ್ದಾರೆ.
Recommended Video

ಇಂದು( ಮಾರ್ಚ್ 31) ಎಐಸಿಸಿ ಉಪಾದ್ಯಕ್ಷ ರಾಹುಲ್ ಗಾಂಧಿ ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದರು. ಕೆಲವು ಸಮಯ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ದು:ಖದಲ್ಲಿರುವ ಅಪ್ಪು ಕುಟುಂಬಕ್ಕೆ ಸಮಾಧಾನದ ಮಾತುಗಳನ್ನಾಡಿದ್ದಾರೆ.
ಅಪ್ಪು ಮನೆಗೆ ರಾಹುಲ್ ಗಾಂಧಿ ಭೇಟಿ
ಪುನೀತ್ ರಾಜ್‌ಕುಮಾರ್ ರಾಹುಲ್ ಗಾಂಧಿ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಅಪ್ಪು ಮನೆಯ ಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ತುಮಕೂರಿನಿಂದ ನೇರವಾಗಿ ಬೆಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ, ಪುನೀತ್ ಮನೆಗೆ ಭೇಟಿ ನೀಡಿದ್ದರು.

ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ಏಪ್ರಿಲ್ 1ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಆಗಮಿಸಿದ್ದರು. ಈ ವೇಳೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದು, ಶಿವಕುಮಾರ ಶ್ರೀ ಗಳ ಗದ್ದುಗೆ ದರ್ಶನ ಪಡೆದು ಹಿಂತಿರುಗಿದ್ದಾರೆ. ಇಲ್ಲಿಂದ ನೇರವಾಗಿ ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ಬಂದು ಕುಟುಂಬಕ್ಕೆ ರಾಹುಲ್ ಗಾಂಧಿ ಸಾಂತ್ವಾನ ಹೇಳಿದ್ದಾರೆ.
ರಾಹುಲ್ ಗಾಂಧಿ ಭೇಟಿಯಿಂದ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಖುಷಿಯಾಗಿದ್ದಾರೆ. ಇತ್ತೀಚೆಗಷ್ಟೇ ಅಭಿಮಾನಿಗಳು ಅಪ್ಪು ಹುಟ್ಟುಹಬ್ಬವನ್ನು ಆಚರಿಸಿದ್ದರು. ಕೊನೆಯ ಸಿನಿಮಾ ಬಿಡುಗಡೆಯಾದಾಗ 'ಜೇಮ್ಸ್' ಜಾತ್ರೆಯನ್ನು ಮಾಡಿದ್ದರು.

'ಜೇಮ್ಸ್' ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿ ಮೂರನೇ ವಾರದತ್ತ ಮುನ್ನುಗ್ಗುತ್ತಿದೆ. ಅಪ್ಪು ಸಿನಿಮಾ ಈಗಾಗ್ಲೇ 100 ಕೋಟಿ ಗಳಿಕೆ ಕಂಡಿದ್ದು, ಬಾಕ್ಸಾಫೀಸ್‌ನಲ್ಲಿ ಮತ್ತಷ್ಟು ಗಳಿಕೆ ಕಾಣುವ ಸಾಧ್ಯತೆ ಇದೆ. ಇದೇ ವೇಳೆ ಏಪ್ರಿಲ್ 14ಕ್ಕೆ 'ಜೇಮ್ಸ್' ಒಟಿಟಿಗೂ ಲಗ್ಗೆ ಇಡುತ್ತಿದೆ.
"ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮತ್ತು ಕುಟುಂಬವನ್ನು ಭೇಟಿ ಮಾಡಿ ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ. ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ." ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಭೇಟಿಯಿಂದ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಖುಷಿಯಾಗಿದ್ದಾರೆ. ಇತ್ತೀಚೆಗಷ್ಟೇ ಅಭಿಮಾನಿಗಳು ಅಪ್ಪು ಹುಟ್ಟುಹಬ್ಬವನ್ನು ಆಚರಿಸಿದ್ದರು. ಕೊನೆಯ ಸಿನಿಮಾ ಬಿಡುಗಡೆಯಾದಾಗ 'ಜೇಮ್ಸ್' ಜಾತ್ರೆಯನ್ನು ಮಾಡಿದ್ದರು.
'ಜೇಮ್ಸ್' ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿ ಮೂರನೇ ವಾರದತ್ತ ಮುನ್ನುಗ್ಗುತ್ತಿದೆ. ಅಪ್ಪು ಸಿನಿಮಾ ಈಗಾಗ್ಲೇ 100 ಕೋಟಿ ಗಳಿಕೆ ಕಂಡಿದ್ದು, ಬಾಕ್ಸಾಫೀಸ್‌ನಲ್ಲಿ ಮತ್ತಷ್ಟು ಗಳಿಕೆ ಕಾಣುವ ಸಾಧ್ಯತೆ ಇದೆ. ಇದೇ ವೇಳೆ ಏಪ್ರಿಲ್ 14ಕ್ಕೆ 'ಜೇಮ್ಸ್' ಒಟಿಟಿಗೂ ಲಗ್ಗೆ ಇಡುತ್ತಿದೆ.

Click it and Unblock the Notifications