For Quick Alerts
  ALLOW NOTIFICATIONS  
  For Daily Alerts

  ಐದು ಸ್ನೇಹಿತರ ಭಾವನಾತ್ಮಕ 'ಹೊಂದಿಸಿ ಬರೆಯಿರಿ': ರಿಲೀಸ್‌ಗೆ ಮುಹೂರ್ತ ಫಿಕ್ಸ್!

  |

  ಸ್ಯಾಂಡಲ್‌ವುಡ್‌ ನಟಿ ಐಶಾನಿ ಶೆಟ್ಟಿ ಸಿನಿಮಾ ಬಹಳ ದಿನಗಳ ಬಳಿಕ ರಿಲೀಸ್ ಆಗುತ್ತಿದೆ. ಅಂದ್ಹಾಗೆ ಐಶಾನಿ ಶೆಟ್ಟಿ ಅಭಿನಯದ ಈ ಸಿನಿಮಾದ ಹೆಸರು 'ಹೊಂದಿಸಿ ಬರೆಯಿರಿ'. ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಬದುಕಿನ ಪಯಣ ಸಾಗಬೇಕು ಎನ್ನುವ ಎಳೆಯೇ ಈ ಸಿನಿಮಾದ ಕಥೆ.

  ಬೇರೆ ಸ್ಥರದ ಬದುಕಿನ ಸುತ್ತ ಹೆಣೆಯಲಾದ ಕಥಾಹಂದರವೇ 'ಹೊಂದಿಸಿ ಬರೆಯಿರಿ' ಸಿನಿಮಾ. ಈ ಸಿನಿಮಾದಲ್ಲಿ ಐದು ಮಂದಿ ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಸನ್ನಿವೇಶಗಳಿವೆ.

  ಈಗಾಗಲೇ 'ಹೊಂದಿಸಿ ಬರೆಯಿರಿ' ಸಿನಿಮಾ ತುಣುಕುಗಳು ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಅಂದ್ಹಾಗೆ ಈ ಸಿನಿಮಾ ನವೆಂಬರ್ 18ಕ್ಕೆ ರಾಜ್ಯಾದ್ಯಂತ ಚಿತ್ರ ಬಿಡುಗಡೆ ಮಾಡಲು ಮುಹೂರ್ತ ಫಿಕ್ಸ್ ಮಾಡಾಗಿದೆ.

  'ಹೊಂದಿಸಿ ಬರೆಯಿರಿ' ಸಿನಿಮಾವನ್ನು ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನ ಮಾಡಿದ್ದಾರೆ. ಐಶಾನಿ ಜೊತೆ ಸ್ಯಾಂಡಲ್‌ವುಡ್‌ನ ಯುವತಾರಾಗಣವೇ ಇದೆ. ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀ ಮಹದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

  'ಹೊಂದಿಸಿ ಬರೆಯಿರಿ' ಸಿನಿಮಾದಲ್ಲಿ ಒಟ್ಟು ಎಂಟು ಹಾಡುಗಳಿದ್ದು ಈಗಾಗಲೇ ಒಂದು ಸಾಂಗ್ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಕ್ಟೋಬರ್‌ನಲ್ಲಿ ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ನಿರ್ದೇಶಕ ಜಗನ್ನಾಥ್‌ಗೆ ಇದು ಮೊದಲ ಸಿನಿಮಾ. ರಾಕ್ ಲೈನ್ ಪ್ರೊಡಕ್ಷನ್‌ನಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. 'ಹೊಂದಿಸಿ ಬರೆಯಿರಿ' ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ.

  Aishani Shetty Praveen Tej Starrer Hondisi Bareyiri Movie Will Be Releasing On November 18

  ಶಾಂತಿ ಸಾಗರ್ ಹೆಚ್.ಜಿ ಕ್ಯಾಮೆರಾ , ಜೋ ಕೋಸ್ಟ ಸಂಗೀತ ನಿರ್ದೇಶನವಿದೆ. ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ಜಗನ್ನಾಥ್ ಮೂವರೂ ಸಂಭಾಷಣೆ ಬರೆದಿದ್ದಾರೆ. ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್ , ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

  English summary
  Aishani Shetty Praveen Tej Starrer Hondisi Bareyiri Movie Will Be Releasing On November 18, Know More.
  Thursday, September 22, 2022, 23:47
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X