For Quick Alerts
  ALLOW NOTIFICATIONS  
  For Daily Alerts

  ದರ್ಶನ್ 'ಒಡೆಯ' ಮುಹೂರ್ತಕ್ಕೆ ಬರುವ ಗಣ್ಯರಿವರು

  By Pavithra
  |
  ದರ್ಶನ್ ಒಡೆಯ ಆಗಲು ಇವರು ಸಾಥ್ ನೀಡಲಿದ್ದಾರೆ..! | Filmibeat Kannada

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಒಡೆಯ' ಸಿನಿಮಾ ಮುಹೂರ್ತಕ್ಕೆ ಭರ್ಜರಿ ತಯಾರಿ ನಡೆದಿದೆ. ಡಿ ಬಾಸ್ ಅಭಿನಯದ 52ನೇ ಸಿನಿಮಾ ಇದಾಗಿದ್ದು ಚಿತ್ರ ಸೆಟ್ಟೇರುವ ಮುಂಚೆಯೇ ಹಲವು ವಿಚಾರಗಳಿಂದ ಸುದ್ದಿಯಲ್ಲಿದೆ.

  'ಬುಲ್ ಬುಲ್' ಸಿನಿಮಾದ ನಂತರ ನಿರ್ದೇಶಕ ಎಂ ಡಿ ಶ್ರೀಧರ್ ಮತ್ತೆ ದರ್ಶನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತರು ಹಾಗೂ ನಿರ್ಮಾಪಕರಾದ ಸಂದೇಶ್ ನಾಗರಾಜ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

  ಆಗಸ್ಟ್ 16 ರಂದು ಸಿನಿಮಾ ಮೈಸೂರಿನಲ್ಲಿ ಸೆಟ್ಟೇರುತ್ತಿದೆ. ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಹುಟ್ಟುಹಬ್ಬದಂದೇ ಸಿನಿಮಾ ಮುಹೂರ್ತ ಮಾಡಲು ಸಿದ್ದತೆ ಮಾಡಿಕೊಂಡಿದ್ದು ಸತ್ಯನಾರಾಯಣ ಪೂಜೆ ಮೂಲಕ ಸಿನಿಮಾ ಮುಹೂರ್ತಕ್ಕೆ ಚಾಲನೆ ನೀಡಲಾಗುತ್ತಿದೆ.

  'ಒಡೆಯ' ಚಿತ್ರದ ಮುಹೂರ್ತ ಸಮಾರಂಭಕ್ಕೆ ಗಣ್ಯರಾಗಿ ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಗಮಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಮುಹೂರ್ತ ಸಮಾರಂಭದ ಆಹ್ವಾನ ಪತ್ರಿಕೆ ಪ್ರಿಂಟ್ ಆಗಿದ್ದು ಸಮಾಜಿಕ ಜಾಲತಾಣದಲ್ಲಿ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.

  English summary
  Kannada actor Darshan starter Wadeya movie pooja will be held on August 16th. Rebel star Ambareesh and Yeddyurappa are special guest for Wadiya movieRebel star Ambareesh and Yeddyurappa are special guest for Wadiya movie pooja pooja

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X