twitter
    For Quick Alerts
    ALLOW NOTIFICATIONS  
    For Daily Alerts

    ವಸತಿ ಸಚಿವ ಅಂಬರೀಶ್ ಗೆ ಹೆಚ್ಚುವರಿ ಹೊಣೆ

    |

    ambareesh
    ಬೆಂಗಳೂರು, ಜೂ.21: ನಿಗಮ ಮಂಡಳಿಗಳ ಅಧ್ಯಕ್ಷರ ಸ್ಥಾನಗಳಿಗೆ ಪಕ್ಷದ ನಾಯಕರನ್ನು ನೇಮಕ ಮಾಡುವ ಕಾರ್ಯುಕ್ಕೆ ಸರ್ಕಾರ ಚಾಲನೆ ನೀಡಿದೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಅಂಬರೀಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ಅಂಬರೀಶ್ ಈಗಾಗಲೇ ವಸತಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದರ ಜೊತೆಗೆ ಅವರಿಗೆ ಕೊಳಗೇರಿ ಅಭಿವೃದ್ಧಿ ಮಂಡಳಿ ಸ್ಥಾನ ನೀಡಿರುವುದು ಹೆಚ್ಚುವರಿ ಜವಾಬ್ದಾರಿ ನೀಡಿದಂತಾಗಿದೆ.

    ಬಿಜೆಪಿ ಸರ್ಕಾರ ಅವಧಿಯಲ್ಲಿ ಜೆ.ನರಸಿಂಹಸ್ವಾಮಿ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿದ್ದರು. ಅವರ ಜಾಗಕ್ಕೆ ಶಾಸಕ ಹಾಗೂ ವಸತಿ ಸಚಿವ ಅಂಬರೀಶ್ ಅವರನ್ನು ಸರ್ಕಾರ ನೇಮಕ ಮಾಡಿದೆ.

    ಗುರುವಾರ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅಂಬರೀಶ್ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಕೊಳೆಗೇರಿ ಮುಕ್ತವಾಗಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದರು.

    ಕೊಳಗೇರಿ ನಿವಾಸಿಗಳು ಇರುವ ಸ್ಥಳದಲ್ಲಿಯೇ ಅವರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ. ಅವರನ್ನು ಒಕ್ಕಲೆಬ್ಬಿಸಲಾಗುವುದಿಲ್ಲ ಎಂದು ಅಂಬರೀಶ್ ಭರವಸೆ ನೀಡಿದರು.

    ರಾಜ್ಯದ ಕೊಳಗೇರಿಗಳಲ್ಲಿ ಉನ್ನತ ಗುಣಮಟ್ಟದ ಮನೆಗಳನ್ನು ನಿರ್ಮಿಸಲು ಸರ್ಕಾರ ಯೋಜನೆ ತಯಾರಿಸುತ್ತಿದೆ. ಇದಕ್ಕಾಗಿ 2 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಹೇಳಿದರು.

    English summary
    Karnataka Government appointed Housing Minister M.H.Ambareesh as Chairman of Karnataka Slum Development Board. BJP MLA J.Narashimaswamy worked as Chairman KSCB till Wednesday, June 19.
    Friday, June 21, 2013, 8:39
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X