ಮಂಡ್ಯದಿಂದ ಚುನಾವಣಾ ಕಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ರೆಬೆಲ್ ಸ್ಟಾರ್ ಅಂಬರೀಶ್.!
Recommended Video

ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮತದಾನಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಇರುವಾಗ, ಕಾಂಗ್ರೆಸ್ ಇಂದು ತನ್ನ 218 ಚುನಾವಣಾ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮಂಡ್ಯದಿಂದ ರೆಬೆಲ್ ಸ್ಟಾರ್ ಅಂಬರೀಶ್ ಕಣಕ್ಕೆ ಇಳಿಯಲಿದ್ದಾರೆ. ಚುನಾವಣೆಯಲ್ಲಿ ನಿಲ್ಲಲು ಮಂಡ್ಯ ಕ್ಷೇತ್ರದಿಂದ ಅಂಬರೀಶ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
''ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ'' ಎಂದು ಅಂಬರೀಶ್ ಇತ್ತೀಚೆಗಷ್ಟೇ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದರು. ಆದ್ರೆ, ಅದೇ ಅಂಬರೀಶ್ ಗೆ ಇಂದು ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ.

'ಕೈ' ನಾಯಕರು ಹಾಗೂ ಅಂಬರೀಶ್ ನಡುವೆ ಎಲ್ಲವೂ ಸರಿಯಿಲ್ಲ. ಹೀಗಾಗಿ, ಅಂಬರೀಶ್ ಕಾಂಗ್ರೆಸ್ ಗೆ ಕೈಕೊಟ್ಟು ಬಿಜೆಪಿ ಸೇರ್ತಾರೆ ಎಂಬ ಮಾತುಗಳು ಕೂಡ ಕೇಳಿಬರುತ್ತಿದ್ದವು. ಆದ್ರೆ, ಈ ಎಲ್ಲ ಊಹಾಪೋಹಗಳಿಗೆ ಇಂದು ತೆರೆಬಿದ್ದಿದೆ. ಕಾಂಗ್ರೆಸ್ ನಿಂದಲೇ ಮತ್ತೊಂದು ಬಾರಿ ಮಂಡ್ಯದಲ್ಲಿ ಅಂಬರೀಶ್ ಅದೃಷ್ಟ ಪರೀಕ್ಷೆ ಮಾಡಲಿದ್ದಾರೆ.
'ಮಂಡ್ಯದ ಗಂಡು' ಮತ್ತೊಮ್ಮೆ 'ನಿಮ್ಮೂರ ಬಂಧು' ಆಗಿ ಚುನಾವಣೆಯಲ್ಲಿ ಗೆಲುವಿನ ನಗೆ ಬೀರ್ತಾರಾ ಅಂತ ಕಾದು ನೋಡಬೇಕು.


Click it and Unblock the Notifications











