ತರುಣ್- ಸೋನಲ್ ಮದುವೆ ಫಿಕ್ಸ್? ಅಷ್ಟಕ್ಕೂ ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

By ಫಿಲ್ಮಿಬೀಟ್ ಡೆಸ್ಕ್

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ತಾರಾ ಜೋಡಿ ಕಲ್ಯಾಣಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂಥೆರೋ ಹಸೆಮಣೆ ಏರುತ್ತಾರೆ ಎನ್ನುವ ಸುದ್ದಿ ಗುಲ್ಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಶೀಘ್ರದಲ್ಲೇ ಜೋಡಿ ಈ ವಿಚಾರವನ್ನು ಮಾಧ್ಯಮಗಳ ಮುಂದೆ ಹೇಳಿಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಖ್ಯಾತ ಖಳನಟ ಸುಧೀರ್ ಪುತ್ರ ತರುಣ್ ಸುಧೀರ್ ತಂದೆ ಹಾದಿಯಲ್ಲೇ ಚಿತ್ರರಂಗಕ್ಕೆ ಬಂದವರು. ಸಹೋದರ ನಂದ ಕಿಶೋರ್ ಕೂಡ ಬಣ್ಣದ ಲೋಕದಲ್ಲಿ ಗುರ್ತಿಸಿಕೊಂಡಿದ್ದಾರೆ. ತರುಣ್ ಬ್ಯಾಕ್ ಟು ಬ್ಯಾಕ್ 3 ಹಿಟ್ ಸಿನಿಮಾಗಳನ್ನು ಕೊಟ್ಟು ಹ್ಯಾಟ್ರಿಕ್ ಡೈರೆಕ್ಟರ್ ಎನಿಸಿಕೊಂಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಸಿಂಧೂರ ಲಕ್ಷ್ಮಣನ ಜೀವನಾಧರಿತ ಸಿನಿಮಾ ತೆರೆಗೆ ತರುವ ಸನ್ನಾಹದಲ್ಲಿದ್ದಾರೆ. ಇದೆಲ್ಲದರ ನಡುವೆ ತರುಣ್ ಸುಧೀರ್ ಮದುವೆ ವಿಚಾರ ಕೇಳಿ ಬರ್ತಿದೆ.

Amid speculations of Tharun sudhir and Sonal Monteiro s marriage here is a look back at their love story

ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಈ ಮದುವೆ ವಿಚಾರವನ್ನು ಖಚಿತಪಡಿಸಿದ್ದಾರೆ ಎಂದು ವರದಿಯಾಗಿದೆ. ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಇಬ್ಬರೂ ಈ ವಿಚಾರ ಹಂಚಿಕೊಳ್ಳುತ್ತಾರೆ ಎನ್ನಲಾಗ್ತಿದೆ. ಇನ್ನು ತರುಣ್- ಸೋನಲ್ ಇಬ್ಬರ ಲವ್ ಸ್ಟೋರಿ ಆರಂಭವಾಗಿದ್ದು ಹೇಗೆ? ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ತರುಣ್ ನಿರ್ದೇಶನದ 'ರಾಬರ್ಟ್' ಚಿತ್ರದಲ್ಲಿ ಸೋನಲ್ ನಟಿಸಿದ್ದರು.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ್ದರು. ಮಿಸ್ ಬ್ಯೂಟಿಫುಲ್ ಸ್ಮೈಲ್ 2013 ಹಾಗೂ ಮಿಸ್ ಕೊಂಕನ್ 2015 ಸ್ಪರ್ಧೆಗಳಲ್ಲಿ ಗೆದ್ದಿದ್ದರು. 'ಎಕ್ಕಾ ಸಕ್ಕಾ' ಎನ್ನುವ ತುಳು ಚಿತ್ರದಲ್ಲಿ ಮೊದಲಿಗೆ ನಟಿಸಿದರು. ಬಳಿಕ ಮತ್ತೆರಡು ತುಳು ಸಿನಿಮಾ ಅವಕಾಶ ಸಿಕ್ಕಿತ್ತು. ನಂತರ 'ಅಭಿಸಾರಿಕ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

Amid speculations of Tharun sudhir and Sonal Monteiro s marriage here is a look back at their love story

'ಎಂಎಲ್‌ಎ', 'ಮದುವೆ ದಿಬ್ಬಣ', 'ಪಂಚತಂತ್ರ', 'ಡೆಮೊ ಪೀಸ್' ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಸೋನಲ್ ಮಿಂಚಿದರು. ಬಳಿಕ 'ರಾಬರ್ಟ್' ಚಿತ್ರದಲ್ಲಿ ವಿನೋದ್ ಪ್ರಭಾಕರ್(ರಾಘವ) ಜೋಡಿ ತನು ಆಗಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಅವರ ಆಪ್ತರು ಹೇಳುತ್ತಿದ್ದಾರೆ.

ತರುಣ್ ಸುಧೀರ್‌ಗೆ ಮದುವೆ ಮಾಡಿಸಬೇಕು ಎಂದು ನಟ ದರ್ಶನ್ ಹೇಳುತ್ತಿದ್ದರು. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗ್ತಿದೆ. ಇದೀಗ ಇಬ್ಬರೂ ಪೋಷಕರ ಒಪ್ಪಿಗೆ ಪಡೆದು ಮದುವೆಗೆ ಮುಂದಾಗಿದ್ದಾರೆ. ಆಗಸ್ಟ್ 10ಕ್ಕೆ ತರುಣ್- ಸೋನಲ್ ಮದುವೆ ಎನ್ನುವ ಮಾತುಗಳು ಕೇಳಿಬರ್ತಿದೆ.

'ರಾಬರ್ಟ್' ಬಳಿಕ 'ಶಂಭೋ ಶಿವ ಶಂಕರ', 'ಗರಡಿ', 'ಶುಗರ್ ಫ್ಯಾಕ್ಟರಿ' ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ. 'ಬುದ್ಧಿವಂತ-2' ಹಾಗೂ 'ಮಾರ್ಗರೆಟ್ ಲವರ್ ಆಫ್ ರಾಮಾಚಾರಿ' ಸಿನಿಮಾಗಳಲ್ಲಿ ನಟಿಸಿದ್ದು ಇನ್ನಷ್ಟೇ ಈ ಸಿನಿಮಾಗಳು ತೆರೆಗೆ ಬರಬೇಕಿದೆ. ಸಿನಿಮಾಗಳ ಜೊತೆ ಜೊತೆಗೆ ಬ್ಯೂಟಿ ಕಾಂಟೆಸ್ಟ್‌ ತೀರ್ಪುಗಾರರಾಗಿ ಸೋನಲ್ ಗುರ್ತಿಸಿಕೊಂಡಿದ್ದಾರೆ. ಸೋನಾಲ್ ಎಬಿಸಿಡಿ ಫ್ಯಾಶನ್ ಈವೆಂಟ್ & ಸೆಲೆಬ್ರಿಟಿ ಮ್ಯಾನೇಜ್‌ಮೆಂಟ್ ಕಂಪನಿಯ ಡೈರೆಕ್ಟರ್ ಆಗಿದ್ದಾರೆ.

ಇನ್ನು ತರುಣ್ ಮೊದಲಿಗೆ ಒಂದಷ್ಟು ಸಿನಿಮಾಗಳಲ್ಲಿ ಸಣ್ಣ, ಪುಟ್ಟ ಪಾತ್ರ ಮಾಡಿದರು. ಹೀರೊ ಆಗಿಯೂ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದರು. ಬಳಿಕ 'ರ್ಯಾಂಬೊ' ಚಿತ್ರಕ್ಕೆ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದರು. ಆ ನಂತರ 'ಚೌಕ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ಕ್ರಿಯೇಟಿವ್ಜ್ ಬ್ಯಾನರ್ ಮೂಲಕ 'ಗುರು-ಶಿಷ್ಯರು' ಚಿತ್ರವನ್ನು ನಿರ್ಮಿಸಿದ್ದರು.

More from Filmibeat

English summary
Here's how Tharun sudhir and Sonal Monteiro's love story started;
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X