ಪುನೀತ್ ನಿಧನ ಕರಾಳ ದಿನ ಎಂದ ಅಮಿತಾಬ್ ಬಚ್ಚನ್!
ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಠಾತ್ ನಿಧನ ಇಂಡಸ್ಟ್ರಿಗೆ ಆಘಾತವನ್ನುಂಟುಮಾಡಿದೆ. ಸಿನಿಮಾ ತಾರೆಯರು ಪುನೀತ್ ಅವರಿಗೆ ತಮ್ಮ ಸಂತಾಪ ಸೂಚಿಸುತ್ತಿದ್ದಾರೆ. ನಟ ಪುನೀತ್ ರಾಜಕುಮಾರ್ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯ ಉಸಿರೆಳಿದ್ದಾರೆ. 46ನೇ ವಯಸ್ಸಿನಲ್ಲಿ ಅಪ್ಪು ತಮ್ಮ ಜೀವನದ ಪಯಣ ಮುಗಿಸಿದ್ದಾರೆ.
ಪುನೀತ್ ರಾಜಕುಮಾರ್ ಅವರ ಹಠಾತ್ ನಿಧನದಿಂದ ದೇಶಾದ್ಯಂತ ಕಂಬನಿ ಮಿಡಿಯುವಂತೆ ಮಾಡಿದೆ. ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಅಪ್ಪು ನಿಧಕ್ಕೆ ಸಂತಾಪ ಸೂಚಿಸಿದ್ದಾರೆ. 'ಇದು ತುಂಬಾ ದೊಡ್ಡ ಕತ್ತಲೆ' ಎಂದಿದ್ದಾರೆ. ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಹಲವಾರು ಬಾಲಿವುಡ್ ತಾರೆಯರು ಕೂಡ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ದುಃಖವನ್ನು ಹೊರಹಾಕಿದ್ದಾರೆ. ಈಗ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಪುನೀತ್ ರಾಜಕುಮಾರ್ ಅವರ ಹಠಾತ್ ನಿಧನದಿಂದ ಆಘಾತವಾಗಿದೆ ಎಂದು ಬರೆದುಕೊಂಡಿದ್ದಾರೆ.
ತಮ್ಮ ಟ್ವಿಟರ್ ಖಾತೆಯ ಮೂಲಕ ಪುನೀತ್ ಸಾವಿಗೆ ಅಮಿತಾಬ್ ಸಂತಾಪ ಸೂಚಿಸಿದ್ದಾರೆ. 'ಇದು ಸಂತಾಪ ಮತ್ತು ಪ್ರಾರ್ಥನೆಯ ದಿನ. ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರವಾಗಿದ್ದ ವ್ಯಕ್ತಿ ಅಗಲಿದ್ದಾರೆ. ಇದೊಂದು ಕರಾಳ ದಿನ' ಎಂದು ಅಂದು ಅಮಿತಾಬ್ ಬಚ್ಚನ್ ಟ್ವಿಟ್ಟರ್‌ನಲ್ಲಿ ನೋವು ಹೊರ ಹಾಕಿದ್ದಾರೆ.

ಕನ್ನಡ ಚಿತ್ರರಂಗದ ದಿಗ್ಗಜ ನಟ ರಾಜಕುಮಾರ್ ಅವರ ಕಿರಿಯ ಪುತ್ರ ಪುನೀತ್ ರಾಜಕುಮಾರ್. ಎಲ್ಲರಿಗೂ ಅಚ್ಚು ಮೆಚ್ಚಾಗಿದ್ದ ಅಪ್ಪು 46ನೇ ವರ್ಷಕ್ಕೆ ವಿಧಿವಶರಾಗಿದ್ದಾರೆ. ಇದು ಎಲ್ಲರಿಗೂ ತೀವ್ರ ಆಘಾತವನ್ನು ಉಂಟು ಮಾಡಿದೆ.


Click it and Unblock the Notifications











