ಮೋದಿಯಿಂದ ಅನಂತ್ ನಾಗ್ ನಿರೀಕ್ಷೆ ಮಾಡ್ತಿರೋದು ಇದೆ.!

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯಿಂದ 49 ಜನ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಹೃದಯಹೀನ ಘಟನೆಗೆ ವಿಶ್ವದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಶತ್ರುರಾಷ್ಟ್ರ ಪಾಕಿಸ್ತಾನಕ್ಕೆ ಬುದ್ದಿಕಲಿಸಬೇಕು ಎಂಬ ಒತ್ತಾಯ ಕೇಳಿಬರ್ತಿದೆ.

ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ದೇಶದೆಲ್ಲೆಡೆ ಶ್ರದ್ಧಾಂಜಲಿ ಸಲ್ಲಿಸಿ, ಅಂತ್ಯಕ್ರಿಯೆಯೂ ನೆರವೇರಿಸಲಾಗಿದೆ. ಈ ನಡುವೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಗೆ ಬೇಡಿಕೆ ಹೆಚ್ಚಿದೆ.

ಪಾಕಿಸ್ತಾನದ ಆಸ್ಪತ್ರೆಯಿಂದ ಪುಲ್ವಾಮಾ ದಾಳಿಗೆ ಆದೇಶ ನೀಡಿದ್ದ ಅಜರ್

ಈ ಘಟನೆ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಖ್ಯಾತ ನಟ ಅನಂತ ನಾಗ್ ಈ ಘಟನೆ ಅತ್ಯಂತ ಭೀಕರವಾಗಿದೆ. ಇದು ದೇಶದ ಜನರ ಮನಸ್ಸನ್ನು ಅಲ್ಲೋಲ ಕಲ್ಲೋಲವಾಗಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದಿಟ್ಟ ಪ್ರತಿಕ್ರಿಯೆಯನ್ನು ಜನರು ನಿರೀಕ್ಷಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅನಂತ್ ನಾಗ್ ಅವರು ಏನಂದ್ರು?

ಶಾಸ್ತ್ರಿ, ಇಂದಿರಾ ನಂತರ ಮೋದಿ

ಶಾಸ್ತ್ರಿ, ಇಂದಿರಾ ನಂತರ ಮೋದಿ

''ಧರ್ಮದ ಆಧಾರದಲ್ಲಿ ಭಾರತ ವಿಭಜನೆಯಾದ ಬಳಿಕವೂ ಇಂತಹ ಘಟನೆಗಳು ಮುಂದುವರಿದಿವೆ. 1955ರಲ್ಲಿ ಲಾಲ್ ಬಹದ್ದೂರ್ ಶಾಸ್ತ್ರೀಯವರು, 1971ರಲ್ಲಿ ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಇಂತಹ ಕೃತ್ಯಕ್ಕೆ ತಕ್ಕ ಉತ್ತರ ನೀಡಿದ್ದರು. ಈಗ ದೇಶದ ಜನರು ಅಂತಹುದೇ ದಿಟ್ಟ ನಿಲುವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದ ನಿರಿಕ್ಷೀಸುತ್ತಿದ್ದಾರೆ ''

ಪುಲ್ವಾಮಾ ದಾಳಿಯಲ್ಲಿ ಪಾಕ್ ಕೈವಾಡ; ಎಫ್ ಎಟಿಎಫ್ ಗೆ ದಾಖಲೆ, ಮುಂದೇನು?

ಪ್ರಧಾನಿ ಇತಿಹಾಸ ಸೃಷ್ಟಿಸಬೇಕಿದೆ

ಪ್ರಧಾನಿ ಇತಿಹಾಸ ಸೃಷ್ಟಿಸಬೇಕಿದೆ

''ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಯಾಗಬೇಕಿದೆ. ವಿವಾದಿತ ಪ್ರದೇಶವನ್ನು ಸಂಪೂರ್ಣವಾಗಿ ಸೇನೆಯ ಸುಪರ್ದಿಗೆ ವಹಿಸುವ ಅಗತ್ಯವಿದ್ದು, ಅಲ್ಲಿ ಸೇನೆಯವರ ಮೇಲೆ ಕಲ್ಲು ತೂರಾಟ ಮಾಡುವವರನ್ನು ಬೆಂಬಲಿಸುವ ಕಾರ್ಯ ನಿಲ್ಲಬೇಕಿದೆ''

ಪುಲ್ವಾಮಾ ಘಟನೆ: ಇನ್ನಷ್ಟು ಆತ್ಮಹತ್ಯಾ ದಾಳಿಗಳ ಅಪಾಯದ ಮುನ್ಸೂಚನೆಯೇ?

ಶಾಶ್ವತ ಪರಿಹಾರ ಬೇಕು

ಶಾಶ್ವತ ಪರಿಹಾರ ಬೇಕು

''ಯೋಧರನ್ನು ಅನ್ಯಾಯವಾಗಿ ಸಾಯಲು ಬಿಡುವ ಬದಲು ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವುದು ಅತೀ ಅಗತ್ಯ'' ಎಂದು ಅನಂತ ನಾಗ್ ತಿಳಿಸಿದರು. ಮಂಗಳೂರಿನಲ್ಲಿ ತುಳು ಚಿತ್ರ ' ಇಂಗ್ಲಿಷ್' ನಲ್ಲಿ ಅನಂತ್ ಅಭಿನಯಿಸಿದ್ದು, ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಗುರು ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಪ್ರಕಾಶ್ ರೈ ವಿರುದ್ಧವೇ ಘೋಷಣೆ

ದೇಶದ ಒತ್ತಾಯವೂ ಇದೆ

ದೇಶದ ಒತ್ತಾಯವೂ ಇದೆ

ಈ ದಾಳಿಯನ್ನ ಖಂಡಿಸಿ ದೇಶದ ಜನತೆ ಕೂಡ ಮೋದಿ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಸಲ ಶತ್ರುಗಳಿಗೆ ಬುದ್ದಿಕಲಿಸಲೇಬೇಕು ಎಂದು ಒತ್ತಾಯ ಮಾಡ್ತಿದ್ದಾರೆ.

ಹುತಾತ್ಮ ಯೋಧರ ಕುಟುಂಬದ ಹೃದಯ ಹಿಂಡುವ ಚಿತ್ರಗಳು

More from Filmibeat

English summary
Speaking to media persons Renowned actor Ananth Nag in Mangaluru condemned terrorist suicide attack on CRPF convoy in Jammu. He said now PM Modi should take daring action like Shashriji and Indira Gandhi.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X