ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್
ಚಂದನವನದ ನಟಿ ಅನು ಪ್ರಭಾಕರ್‌ಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಬಗ್ಗೆ ಅನು ಪ್ರಭಾಕರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತುಂಬಾ ಸುರಕ್ಷಿತವಾಗಿ, ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡರೂ ಕೊರೊನಾ ಸೋಂಕು ತಗುಲಿದೆ ಎಂದು ಅನು ಪ್ರಭಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.
Recommended Video
ಕೊರೊನಾ ಪಾಸಿಟಿವ್ ಬಂದರೂ ಕೋವಿಡ್ ವಾರ್ ವೆಬ್‌ಸೈಟ್‌ನಲ್ಲಿ ಹೆಸರಿಲ್ಲ ಮತ್ತು ಬಿ ಯೂ ಸಂಖ್ಯೆ ಸಿಕ್ಕಿಲ್ಲ ಎಂದು ಟ್ಟೀಟ್ ಮಾಡಿ ಆರೋಗ್ಯ ಸಚಿವ ಸುಧಾಕರ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ.
'ಎಷ್ಟೇ ಸುರಕ್ಷಿತವಾಗಿ, ಮುನ್ನೆಚ್ಚರಿಕೆಯಿಂದ ಇದ್ದರೂ ಕೊರೊನಾ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು' ಹೇಳಿದ್ದಾರೆ.

ಜೊತೆಗೆ ಸುಧಾಕರ್ ಅವರಿಗೆ ಟ್ವೀಟ್ ಮಾಡಿ, 'ಕೊರೊನಾ ಪಾಸಿಟಿವ್ ಬಂದಿದೆ. ಆದರೆ ನನ್ನ ವರದಿ ಇನ್ನೂ ಕೋವಿಡ್ ವಾರ್ ವೆಬ್‌ಸೈಟ್‌ನಲ್ಲಿ ಅಪ್ ಲೋಡ್ ಆಗಿಲ್ಲ. ಜೊತೆಗೆ ನನಗೆ ಬಿ ಯೂ ನಂಬರ್ ಕೂಡ ಬಂದಿಲ್ಲ. ಬಿಬಿಎಂಪಿ ಕಡೆಯಿಂದ ಯಾವುದೇ ಕರೆ ಬಂದಿಲ್ಲ. ನಿಮ್ಮ ಗಮನಕ್ಕೆ ತರುತ್ತೀದ್ದೇನೆ' ಎಂದು ಸುಧಾಕರ್ ಅವರಿಗೆ ತಿಳಿಸಿದ್ದಾರೆ.
ಅನುಪ್ರಭಾಕರ್ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. 2016ರಲ್ಲಿ ನಟ ರಘು ಮುಖರ್ಜಿ ಜೊತೆ ಅನು ಪ್ರಭಾಕರ್ ಎರಡನೇ ಮದುವೆಯಾಗಿದ್ದಾರೆ. ಇಬ್ಬರಿಗೆ ನಂದನಾ ಎನ್ನುವ ಮುದ್ದಾದ ಮಗಳಿದ್ದಾಳೆ. ಅನು ಪ್ರಭಾಕರ್ ಸದ್ಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ಸಾಕಷ್ಟು ಮಂದಿ ಸೆಲೆಬ್ರಿಟಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಯ ಕಲಾವಿದರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ.


Click it and Unblock the Notifications











