For Quick Alerts
  ALLOW NOTIFICATIONS  
  For Daily Alerts

  ಪುನೀತ್ ನಾಯಕಿ ಈಗ ಸಹಾಯಕ ನಿರ್ದೇಶಕಿ

  |

  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ನಟಸಾರ್ವಭೌಮ' ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದ ಮಲಯಾಳಿ ಬೆಡಗಿ ಅನುಪಮಾ ಪರಮೇಶ್ವರನ್ ಈಗ ನಟನೆಯ ಜೊತೆಗೆ ಹೊಸ ಕೆಲಸ ಶುರು ಮಾಡಿಕೊಂಡಿದ್ದಾರೆ.

  ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಭಾರಿ ಬೇಡಿಕೆಯ ನಟಿಯಾಗಿರುವ ಅನುಪಮಾ ಈಗ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಇರುವ ಅನುಪಮಾ ಅವರೆ ನಟಿಸುತ್ತಿರುವ ಹೊಸ ಚಿತ್ರಕ್ಕೆ ಸಹಾಯಕ ನಿರ್ದೇಶಕಿಯಾಗಿ ದುಡಿಯುತ್ತಿದ್ದಾರೆ.

  ಶ್ರುತಿ ಪಾತ್ರ ನೀಡಿದಕ್ಕೆ ಧನ್ಯವಾದ ತಿಳಿಸಿದ ಅನುಪಮ ಶ್ರುತಿ ಪಾತ್ರ ನೀಡಿದಕ್ಕೆ ಧನ್ಯವಾದ ತಿಳಿಸಿದ ಅನುಪಮ

  ಮಾಲಿವುಡ್ ಖ್ಯಾತ ನಟ ದುಲ್ಕರ್ ಸಲ್ಮಾನ್ ಮೊದಲ ಬಾರಿಗೆ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಈ ಚಿತ್ರದಲ್ಲಿ ಅನುಪಮಾ ಸೇರಿದಂತೆ ಮೂವರು ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. ಆದ್ರೆ ಈ ಚಿತ್ರಕ್ಕೆ ನಾಯಕ ಮತ್ತು ಟೈಟಲ್ ಇನ್ನು ಫೈನಲ್ ಆಗಿಲ್ಲ. ಆದ್ರೆ ಆಗಲೆ ಚಿತ್ರೀಕರಣ ಪ್ರಾರಂಭವಾಗಿದೆ.

  ಈ ಚಿತ್ರಕ್ಕೆ ಯುವ ಪ್ರತಿಭೆ ಶಂಸು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅವರಿಗೆ ಅನುಪಮಾ ಸಹಾಯಕ ನಿರ್ದೇಶಕಿಯಾಗಿ ಅನುಪಮಾ ಕ್ಯಾಮರಾ ಮುಂದೆ ದುಡಿಯುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ನಾಯಕಿಯರು ಅಭಿನಯದ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಆದ್ರೆ ಅನುಪಮಾ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿರುವುದು ವಿಶೇಷ.

  ಈ ಬಗ್ಗೆ ಸ್ವತಹ ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಸಹಾಯಕ ನಿರ್ದೇಶಕಿಯಾಗಿ ನನಗೆ ಇದು ಹೊಸ ಅನುಭವ. ಈ ತಂಡದ ಜತೆ ಕೆಲಸ ಮಾಡುತ್ತಿರುವುದಕ್ಕೆ ಖುಷಿ ಇದೆ. ದುಲ್ಕರ್ ಸಲ್ಮಾನ್ ನಿರ್ಮಾಣದ ಮೊದಲ ಚಿತ್ರ. ಚಿತ್ರದ ಬಗ್ಗೆ ನಿಮ್ಮೊಡನೆ ಹಂಚಿಕೊಳ್ಳಲು ಇನ್ನಷ್ಟು ವಿಷಯ ಇದೆ. ಶೀಘ್ರದಲ್ಲೇ ಅವುಗಳ ಬಗ್ಗೆ ಹೇಳುತ್ತೇನೆ. ನಿಮ್ಮ ಪ್ರೀತಿ ಮತ್ತು ಹಾರೈಕೆ ಸದಾ ನನಗಿರಲಿ' ಎಂದು ಬರೆದುಕೊಂಡಿದ್ದಾರೆ.

  English summary
  Malayalam actress Anupama Parameswaran becomes an assistant director. This movie is produced by Malayalam actor dulquer salmaan.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X