ಕೊರೊನಾ ನಿಯಮ ಉಲ್ಲಂಘನೆ: ದರ್ಶನ್ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ

By ಮೈಸೂರು ಪ್ರತಿನಿಧಿ

ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದಾರೆಂದು ನಟ ದರ್ಶನ್ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಿಸಲಾಗಿದ್ದು, ವಿಚಾರಣೆ ಇನ್ನಷ್ಟೆ ನಡೆಯಬೇಕಿದೆ.

Recommended Video

D Boss ಮೇಲೆ ಕೇಸ್ ಹಾಕಿದ ಗೀತಾ | Darshan | Filmibeat Kannada

ದರ್ಶನ್ ಅವರು ಆಷಾಢದ ಮೂರನೇ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಅಸಲಿಗೆ ದೇವಾಲಯದ ಪ್ರವೇಶವನ್ನು ಕೊರೊನಾ ಕಾರಣಕ್ಕೆ ನಿರ್ಭಂಧಿಸಲಾಗಿತ್ತು. ಆ ಸಮಯದಲ್ಲಿ ದರ್ಶನ್ ನಿಯಮ ಉಲ್ಲಂಘನೆ ಮಾಡಿದ್ದರು. ಆಗಲೇ ಈ ವಿಷಯ ಚರ್ಚೆಯಾಗಿತ್ತು.

ಇದೀಗ ದರ್ಶನ್ ಅವರೂ ಸೇರಿದಂತೆ ಕೆಲವು ಕೆಲವು ರಾಜಕೀಯ ಗಣ್ಯರ ಮೇಲೆ ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದಾರೆಂದು ವಕೀಲೆ ಗೀತಾ ಮಿಶ್ರಾ ಎಂಬುವರು ಹೈಕೋರ್ಟ್‌ನಲ್ಲಿ ಅರ್ಜಿ ಹೂಡಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಇವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ವಕೀಲೆ ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.

ಹಲವರ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ

ಹಲವರ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ

ದರ್ಶನ್, ಸಂಸದೆ ಶೋಭಾ ಕರಂದ್ಲಾಜೆ, ಅಬಕಾರಿ ಸಚಿವ ನಾಗೇಶ್, ಶಾಸಕ ಎಂ.ಕೆ.ಸೋಮಶೇಖರ್ ಇನ್ನೂ ಹಲವರು ಕೊರೊನಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂದು ವಕೀಲೆ ಗೀತಾ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿದ್ದಾರೆ.

ಶೋಭಾ ಕರಂದ್ಲಾಜೆ ಸಹ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿದ್ದರು

ಶೋಭಾ ಕರಂದ್ಲಾಜೆ ಸಹ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿದ್ದರು

ದರ್ಶನ್ ಚಾಮುಂಡೇಶ್ವರಿ ದೇವಾಲಯಕ್ಕೆ ಹೋದ ಬಳಿಕ ಶೋಭಾ ಕರಂದ್ಲಾಜೆ ಸಹ ಚಾಮೆಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ಬಗ್ಗೆ ಕೆಲವು ಸ್ಥಳೀಯ ಕಾರ್ಪೊರೇಟರ್‌ಗಳು ಸಹ ಆಕ್ಷೇಪ ವ್ಯಕ್ತಪಡಿಸಿದ್ದರು.

ಸಚಿವ ನಾಗೇಶ್ ಪಾರ್ಟಿ ಮಾಡಿದ್ದರು: ಆರೋಪ

ಸಚಿವ ನಾಗೇಶ್ ಪಾರ್ಟಿ ಮಾಡಿದ್ದರು: ಆರೋಪ

ಇನ್ನು ಸಚಿವ ನಾಗೇಶ್, ತಮ್ಮ ಬೆಂಬಲಿಗನ ಅಂಗಡಿ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಲ್ಲದೆ, ಜನರನ್ನು ಸೇರಿಸಿಕೊಂಡು ಸಾಮಾಜಿಕ ಅಂತರ ಮರೆತು ಪಾರ್ಟಿ ಮಾಡಿದ್ದಾರೆ ಎಂದು ಗೀತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ನಿಯಮಗಳ ಅನುಸಾರ ಕ್ರಮ

ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ನಿಯಮಗಳ ಅನುಸಾರ ಕ್ರಮ

ಜನ ಸಾಮಾನ್ಯರಿಗೊಂದು ನಿಯಮ ಹಾಗೂ ಪ್ರಭಾವಿಗಳಿಗೊಂದು ನಿಯಮ ಎಂಬಂತೆ ಭಾವಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ನಿಯಮಗಳ ಅನುಸಾರ ಕ್ರಮ ಕೈಗೊಳ್ಳುವಂತೆ ಅರ್ಜಿದಾರರ ಮನವಿ ಮಾಡಿದ್ದಾರೆ.

More from Filmibeat

English summary
Application filed by lawyer Geetha Mishra in high court against Darshan and many other politicians for violating coronavirus control rules.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X