»   » 2017ನೇ ಚಲನಚಿತ್ರ ಪ್ರಶಸ್ತಿ ಹಾಗೂ ಸಹಾಯಧನಕ್ಕೆ ಅರ್ಜಿ ಆಹ್ವಾನ

2017ನೇ ಚಲನಚಿತ್ರ ಪ್ರಶಸ್ತಿ ಹಾಗೂ ಸಹಾಯಧನಕ್ಕೆ ಅರ್ಜಿ ಆಹ್ವಾನ

Written By:
Subscribe to Filmibeat Kannada

2017 ನೇ ಸಾಲಿನ ಕನ್ನಡ ಹಾಗೂ ಪ್ರಾದೇಶಿಕ ಭಾಷಾ ಕಥಾನಕ ಚಲನಚಿತ್ರ, ಮಕ್ಕಳ ಚಿತ್ರ ಪ್ರಶಸ್ತಿ, ಕಿರುಚಿತ್ರ ಪ್ರಶಸ್ತಿ, ಚಲನಚಿತ್ರ ಸಾಹಿತ್ಯ ಪ್ರಶಸ್ತಿ ಹಾಗೂ ಸಹಾಯಧನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2017 ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಸಿ.ಬಿ.ಎಫ್.ಸಿ (ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸೆನ್ಸಾರ್) ನಿಂದ ಪ್ರಮಾಣ ಪತ್ರ ಪಡೆದಿರುವ ಚಲನಚಿತ್ರಗಳು, ಮಕ್ಕಳ ಕಥಾನಕ ಚಿತ್ರಗಳು, ಪ್ರಶಸ್ತಿಗೆ ಮತ್ತು ಸಹಾಯಧನಕ್ಕೆ ಅರ್ಹವಾಗಿರುತ್ತವೆ.

2017 ನೇ ಸಾಲಿನಲ್ಲಿ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಪ್ರಕಟವಾಗಿರುವ ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದ ಕನ್ನಡ ಹಾಗೂ ಆಂಗ್ಲ ಭಾಷೆ ಪುಸ್ತಕಗಳು ಸಾಹಿತ್ಯ ವಾರ್ಷಿಕ ಪ್ರಶಸ್ತಿಗೆ ಅರ್ಹವಾಗಿರುತ್ತವೆ. ಕನ್ನಡ ಚಿತ್ರರಂಗದ ಸಮಗ್ರ ಬೆಳವಣಿಗೆ ಅಪೂರ್ವ ಕೊಡುಗೆ ನೀಡಿದ ಸಾಧಕರಿಗೆ 'ಡಾ. ರಾಜ್ಕುಮಾರ್ ಪ್ರಶಸ್ತಿ', ನಿರ್ದೇಶನ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ನಿರ್ದೇಶಕರನ್ನು ಗುರುತಿಸಿ 'ಪುಟ್ಟಣ್ಣ ಕಣಗಾಲ್ ಪ್ರಶಸ್ತಿ' ಮತ್ತು ಕನ್ನಡ ಚಲನಚಿತ್ರದ ವಿವಿಧ ವಲಯಗಳಲ್ಲಿ ಅಪೂರ್ವ ಸಾಧನೆ ಮಾಡಿದ ಹಿರಿಯ ಚೇತನಗಳಿಗೆ 'ಡಾ. ವಿಷ್ಣುವರ್ಧನ್ ಪ್ರಶಸ್ತಿ' ನೀಡಲಾಗುತ್ತದೆ.

Application for Kannada Film Awards 2017

2016 ನೇ ವರ್ಷದ ಜೀವಿತಾವಧಿ ಸಾಧನೆ ವಾರ್ಷಿಕ ಪ್ರಶಸ್ತಿಗಳಿಗೆ ಆಯ್ಕೆ ಮಾಡಲು ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ನಾಮ ನಿರ್ದೇಶನ ಮಾಡುವವರ ಹೆಸರು, ಸಾಧನೆ, ಕೊಡುಗೆಗಳುಳ್ಳ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನೀಡಬಹುದಾಗಿದೆ. ಅರ್ಜಿ ಹಾಗೂ ನಾಮ ನಿರ್ದೇಶನಗಳನ್ನು ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು ಇವರಿಗೆ ದಿನಾಂಕ: 31-01-2018 ರೊಳಗೆ ತಲುಪುವಂತೆ ಕಳುಹಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಜೊತೆಗೆ ಅರ್ಜಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವೆಬ್‍ಸೈಟ್ karnatakainformation.gov.in ಮತ್ತು ಇಲಾಖೆಯ ಚಲನಚಿತ್ರ ಶಾಖೆಯಿಂದ ಪಡೆಯಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಾ. ಪಿ.ಎಸ್. ಹರ್ಷ ತಿಳಿಸಿದ್ದಾರೆ.

English summary
Karnataka Vartha Ilake opens application for Kannada Film Awards 2017.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X