twitter
    For Quick Alerts
    ALLOW NOTIFICATIONS  
    For Daily Alerts

    ಚಲನಚಿತ್ರ ಪ್ರಶಸ್ತಿ, ಸಹಾಯ ಧನಕ್ಕೆ ಅರ್ಜಿ ಆಹ್ವಾನ

    |

    2018 ನೇ ಕ್ಯಾಲೆಂಡರ್ ವರ್ಷದ ಕನ್ನಡ ಚಲನಚಿತ್ರ ರಂಗದ ಜೀವಮಾನ ಸಾಧನೆ ವಾರ್ಷಿಕ ಪ್ರಶಸ್ತಿಗಳಾದ 'ಡಾ.ರಾಜ್ ಕುಮಾರ್ ಪ್ರಶಸ್ತಿ', 'ಪುಟ್ಟಣ್ಣ ಕಣಗಾಲ್ ಪ್ರಶಸ್ತಿ' ಹಾಗೂ 'ಡಾ.ವಿಷ್ಣುವರ್ಧನ್ ಪ್ರಶಸ್ತಿ'ಗೆ ಆಯ್ಕೆ ಮಾಡಲು ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರು ನಾಮ ನಿರ್ದೇಶನಗಳನ್ನು ಕಳುಹಿಸಬಹುದಾಗಿದೆ.

    2018 ನೇ ಕ್ಯಾಲೆಂಡರ್ ವರ್ಷದಲ್ಲಿ ಅಂದರೆ ದಿನಾಂಕ 01-01-2018 ರಿಂದ 31-12-2018 ರ ಅವಧಿಯೊಳಗೆ ಸೆನ್ಸಾರ್ ಪ್ರಮಾಣಪತ್ರ ಪಡೆದಂತಹ (ರಿಮೇಕ್ ಮತ್ತು ಡಬ್ಬಿಂಗ್ ಆದ ಕನ್ನಡ ಹಾಗೂ ಪ್ರಾದೇಶಿಕ ಭಾಷಾ ಚಲನಚಿತ್ರಗಳನ್ನು ಹೊರತುಪಡಿಸಿ) ಕನ್ನಡ ಹಾಗೂ ಕರ್ನಾಟಕದ ಇತರೆ ಪ್ರಾದೇಶಿಕ ಭಾಷೆ (ತುಳು, ಕೊಡವ, ಕೊಂಕಣಿ, ಬಂಜಾರ, ಬ್ಯಾರಿ ಭಾಷೆಗಳು) ಚಲನಚಿತ್ರಗಳಿಗೆ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಹಾಗೂ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    2018 ನೇ ಕ್ಯಾಲೆಂಡರ್ ವರ್ಷದಲ್ಲಿ ಅಂದರೆ ದಿನಾಂಕ 01-01-2018 ರಿಂದ 31-12-2018 ರ ಅವಧಿಯೊಳಗೆ ಸೆನ್ಸಾರ್ ಪ್ರಮಾಣಪತ್ರ ಪಡೆದಂತಹ ಕನ್ನಡ ಕಿರುಚಿತ್ರಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಿರುಚಿತ್ರಗಳ ಅವಧಿ ಗರಿಷ್ಟ 30 ನಿಮಿಷಗಳು.

    Applications invited for Film related awards by Information Department

    2018 ನೇ ಕ್ಯಾಲೆಂಡರ್ ವರ್ಷದಲ್ಲಿ ಅಂದರೆ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಕಟವಾಗಿರುವ ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದ ಪುಸ್ತಕಗಳಿಗೆ 2018 ನೇ ಕ್ಯಾಲೆಂಡರ್ ವರ್ಷದ 'ಕರ್ನಾಟಕ ರಾಜ್ಯ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ'ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ರಾಜ್ಯ ಚಲನಚಿತ್ರ ಪ್ರಶಸ್ತಿ ಹಾಗೂ ಸಹಾಯಧನಕ್ಕಾಗಿ ಅರ್ಜಿಗಳನ್ನು ನೇರವಾಗಿ ಅಥವಾ ಆನ್ಲೈನ್ ಮೂಲಕ ಸಲ್ಲಿಸಬಹುದು.

    ಅರ್ಜಿ ನಮೂನೆಗಳಿಗೆ, ಅರ್ಜಿ ಶುಲ್ಕ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರು, ಚಲನಚಿತ್ರ ಶಾಖೆ ಅಥವಾ ವೆಬ್ ಸೈಟ್ ವಿಳಾಸಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

    English summary
    Applications invited for Film related awards by Information Department.
    Wednesday, January 9, 2019, 19:18
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X