For Quick Alerts
  ALLOW NOTIFICATIONS  
  For Daily Alerts

  ಮೊದಲ ಬಾರಿಗೆ ಮೇಷ್ಟ್ರು ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ

  By Naveen
  |
  ಮೊದಲ ಬಾರಿಗೆ ಮೇಷ್ಟ್ರು ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ | Filmibeat Kannada

  ಕನ್ನಡದ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಈಗಾಗಲೇ ಅನೇಕ ಸ್ಟಾರ್ ನಿರ್ದೇಶಕರ ಜೊತೆಗೆ ಕೆಲಸ ಮಾಡಿದ್ದಾರೆ. ಈಗ ಮತ್ತೊಬ್ಬ ದೊಡ್ಡ ನಿರ್ದೇಶಕರ ಜೊತೆಗೆ ಕೆಲಸ ಮಾಡುವ ಅವಕಾಶವನ್ನು ಅವರು ಪಡೆದಿದ್ದಾರೆ.

  ನಾಗತಿಹಳ್ಳಿ ಚಂದ್ರಶೇಖರ್ ಅವರ ಹೊಸ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಈ ಸಂತಸದ ವಿಷಯವನ್ನು ಅವರೇ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಲೆಜೆಂಡರಿ ಡೈರೆಕ್ಟರ್ ನಾಗತಿಹಳ್ಳಿ ಚಂದ್ರಶೇಖರ್ ಅವರ ಜೊತೆಗೆ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

  'ಇಷ್ಟಕಾಮ್ಯ' ಚಿತ್ರದ ಬಳಿಕ ಮತ್ತೆ ನಾಗತಿಹಳ್ಳಿ ಮರಳಿ ಬಂದಿದ್ದಾರೆ. ಅವರ ಹೊಸ ಸಿನಿಮಾದಲ್ಲಿ ಮಾನ್ವಿತಾ ಹರೀಶ್ ಮತ್ತು ವಸಿಷ್ಟ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳು ಇದ್ದು, ಅರ್ಜುನ್ ಜನ್ಯ ಸಂಗೀತದ ಸಾರಥ್ಯ ವಹಿಸಿಕೊಂಡಿದ್ದಾರೆ.

  ನಾಗತಿಹಳ್ಳಿ ಅವರ ಸಿನಿಮಾಗಳಲ್ಲಿ ಹಾಡುಗಳಿಗೆ ವಿಶೇಷ ಆದ್ಯತೆ ನೀಡಲಾಗಿರುತ್ತದೆ. ಮೊದಲ ಬಾರಿಗೆ ಅವರ ಸಿನಿಮಾಗೆ ಅರ್ಜುನ್ ಜನ್ಯ ಸಂಗಿತ ನೀಡುತ್ತಿದ್ದು, ಚಿತ್ರದ ಹಾಡುಗಳ ಮೇಲೆ ನಿರೀಕ್ಷೆ ಹೆಚ್ಚಿದೆ.

  English summary
  Kannada music director Arjun Janya will compose music for Nagathihalli Chandrashekar new movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X