For Quick Alerts
  ALLOW NOTIFICATIONS  
  For Daily Alerts

  ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾಗೂ ಕೊರೊನಾ ಪಾಸಿಟಿವ್

  |

  ಸರ್ಜಾ ಕುಟುಂಬಕ್ಕೆ ಮತ್ತೊಂದು ಆಘಾತವುಂಟಾಗಿದೆ. ನಟಿ ಮತ್ತು ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾಗೂ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಖಚಿತಪಡಿಸಿದ್ದಾರೆ. ಇತ್ತೀಚಿಗಷ್ಟೆ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾ ವೈರಸ್ ಅಂಟಿದೆ. ಧ್ರುವ ಮತ್ತು ಪ್ರೇರಣ ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಇದರ ಬೆನ್ನಲ್ಲೆ ಇದೀಗ ಧ್ರುವ ಸರ್ಜಾ ಮಾವನ ಮಗಳು ಐಶ್ವರ್ಯ ಸರ್ಜಾಗೂ ಕೊರೊನಾ ಪಾಸಿಟಿವ್ ಬಂದಿದೆ.

  Jogi Prem : ಅಮ್ಮನನ್ನು ನೆನೆದು ಭಾವುಕರಾದ ಪ್ರೇಮ್ | Filmibeat Kannada

  ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ನಟಿ ಐಶ್ವರ್ಯ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. "ಇತ್ತೀಚಿಗೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದೆ. ಕೊರೊನಾ ಪಾಸಿಟಿವ್ ಬಂದಿದೆ. ನಾನೀಗ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೀನಿ. ವೈದ್ಯರ ಸಲಹೆ ಮೇರೆಗೆ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೀನಿ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ. ಮನೆಯಲ್ಲಿಯೆ ಇರಿ. ಮಾಸ್ಕ್ ಧರಿಸಿ" ಎಂದು ಐಶ್ವರ್ಯ ಸರ್ಜಾ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

  ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್

  ಐಶ್ವರ್ಯ ಇತ್ತೀಚಿಗೆ ಹೆಚ್ಚು ಜನರ ಸಂಪರ್ಕಕ್ಕೆ ಬಂದಿದ್ದರು. ಚಿರು ಸರ್ಜಾ ಅವರ ನಿಧನ ಸಮಯದಲ್ಲಿ, ಅಂತ್ಯಕ್ರಿಯೆ ವೇಳೆ ಹಾಗೂ ಆ ನಂತರ ಚಿರಂಜೀವಿ ಸರ್ಜಾ ಕಾರ್ಯಗಳಲ್ಲಿ ಭಾಗಿಯಾಗಿದ್ದರು. ಅಲ್ಲದೆ ಇತ್ತೀಚಿಗೆ ಅರ್ಜುನ್ ಸರ್ಜಾ ಮನೆಯಲ್ಲಿ ಪೂಜೆ ಕೂಡ ಮಾಡಿಸಲಾಗಿತ್ತು. ಈ ಸಮಯದಲ್ಲಿ ಕುಟುಂಬದವರೆಲ್ಲರು ಭಾಗಿಯಾಗಿದ್ದರು.

  ಧ್ರುವ ಸರ್ಜಾ ಜುಲೈ 15ರಂದು ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಖಚಿತ ಪಡಿಸಿಸಿದ್ದರು. ಕೊರೊನಾ ಲಕ್ಷಣಗಳು ಕಂಡುಬಂದ ಕಾರಣ ಪರೀಕ್ಷೆಗೆ ಒಳಪಟ್ಟಿದ್ದೆವು. ಪ್ರೇರಣಾ ಮತ್ತು ಧ್ರುವ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿರುವುದಾಗಿ ಹೇಳಿದ್ದರು. ಇದೀಗ ಐಶ್ವರ್ಯ ಸರ್ಜಾಗೂ ಕೊರೊನಾ ಬಂದಿರುವುದು ಕುಟುಂಬದಲ್ಲಿ ಮತ್ತಷ್ಟು ಆತಂಕ ಮೂಡಿದೆ.

  English summary
  Arjun Sarja daughter Aishwarya Sarja Tests positive for Covid-19.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X