For Quick Alerts
  ALLOW NOTIFICATIONS  
  For Daily Alerts

  ರಾಯರ ಹೆಸರಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಗ್ಗೇಶ್

  |

  ಕಳೆದ ತಿಂಗಳು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿರುವ ಜಗ್ಗೇಶ್ ಇಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

  ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಇಂದು ನಡೆದ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಜಗ್ಗೇಶ್ ಕನ್ನಡದಲ್ಲಿಯೇ ರಾಘವೇಂದ್ರ ರಾಯರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ವಿಶೇಷವಾಗಿತ್ತು.

  ಜಗ್ಗೇಶ್ ಅವರು ಮೇಲ್ಮನೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ನಟ ಜಗ್ಗೇಶ್ ಸಹ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

  ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಗ್ಗೇಶ್

  ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಗ್ಗೇಶ್

  ''ಜಗ್ಗೇಶ್ ಎಂಬ ಹೆಸರಿನವನಾದ ನಾನು, ರಾಜ್ಯಸಭೆಯ ಸದಸ್ಯನಾಗಿ ಚುನಾಯಿತನವನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆಯನ್ನು ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆ ಎಂದು ಭಾರತದ ಸಾರ್ವಭೌಮತ್ವವವನ್ನು ಮತ್ತು ಅಂಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಈಗ ನಾನು ಕೈಗೊಳ್ಳುತ್ತಿರುವ ಕರ್ತವ್ಯವವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆಂದು ರಾಘವೇಂದ್ರ ಸ್ವಾಮಿಗಳ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ'' ಎಂದು ಜಗ್ಗೇಶ್ ಇಂದು ರಾಜ್ಯಸಭೆಯಲ್ಲಿ, ಉಪರಾಷ್ಟ್ರಪತಿಗಳ ಎದುರು ಪ್ರಮಾಣ ವಚನ ಸ್ವೀಕರಿಸಿದರು.

  ಪಕ್ಷದ ಹಿರಿಯರಿಗೆ ಧನ್ಯವಾದ ಹೇಳಿರುವ ಜಗ್ಗೇಶ್

  ಪಕ್ಷದ ಹಿರಿಯರಿಗೆ ಧನ್ಯವಾದ ಹೇಳಿರುವ ಜಗ್ಗೇಶ್

  ತಾವು ಪ್ರಮಾಣ ವಚನ ಸ್ವೀಕಾರ ಮಾಡಿದ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಜಗ್ಗೇಶ್, ''ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ ಪ್ರಮಾಣವಚನ ಸಿರಿಗನ್ನಡದಲ್ಲಿ ರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠಕ್ಷಣ, ಹೃದಯಪೂರ್ವಕ ಧನ್ಯವಾದ'' ಎಂದು ಬರೆದುಕೊಂಡಿದ್ದಾರೆ ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಕರ್ನಾಟಕ, ಮಾಜಿ ಸಿಎಂ ಬಿಎಸ್‌ಎಸ್ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಕಾರ್ಯದರ್ಶಿ ಬಿಎಲ್ ಸಂತೋಶ್, ರಾಜ್ಯಾಧ್ಯಕ್ಷ ನಳೀನ್ ಕಟೀಲ್ ಮತ್ತು ಅರುಣ್ ಬಿಜೆಪಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

  ಬಿಜೆಪಿಯಿಂದ ಆಯ್ಕೆಯಾಗಿದ್ದ ಜಗ್ಗೇಶ್

  ಬಿಜೆಪಿಯಿಂದ ಆಯ್ಕೆಯಾಗಿದ್ದ ಜಗ್ಗೇಶ್

  ಕಳೆದ ಜೂನ್ 10ರಂದು ಭಾರತದ 15 ರಾಜ್ಯಗಳ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಅದೇ ದಿನ ಫಲಿತಾಂಶ ಹೊರ ಬಿದ್ದಿತು. ಮತದಾನಕ್ಕೂ ಪೂರ್ವದಲ್ಲಿಯೇ 11 ರಾಜ್ಯಗಳ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿತ್ತು. ಇದರ ಹೊರತಾಗಿ ಬಾಕಿ ಉಳಿದ 4 ರಾಜ್ಯಗಳ 16 ಸದಸ್ಯರ ಸ್ಥಾನಗಳಿಗೆ ಚುನಾವಣೆಯನ್ನು ನಡೆಸಲಾಗಿತ್ತು. ಕರ್ನಾಟಕದಲ್ಲಿ ಬಿಜೆಪಿ ಮೂರು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದುಕೊಳ್ಳುವುದರಲ್ಲಿ ಯಶಸ್ವಿಯಾಗಿದೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್, ಲೆಹರ್ ಸಿಂಗ್ ಸಿರೋಯಾ ಬಿಜೆಪಿಯಿಂದ ಆಯ್ಕೆಯಾದರೆ, ಕಾಂಗ್ರೆಸ್‌ನಿಂದ ಜೈರಾಮ್ ರಮೇಶ್ ಆಯ್ಕೆ ಆದರು.

  ಮೂರು ಸಿನಿಮಾಗಳು ಬಿಡುಗಡೆ ಹಾದಿಯಲ್ಲಿವೆ

  ಮೂರು ಸಿನಿಮಾಗಳು ಬಿಡುಗಡೆ ಹಾದಿಯಲ್ಲಿವೆ

  ನಟನೆ ಹಾಗೂ ರಾಜಕಾರಣ ಎರಡರಲ್ಲೂ ಜಗ್ಗೇಶ್ ಸಕ್ರಿಯರಾಗಿರುವವರು. ಆದರೆ ಈಗ ರಾಜ್ಯಸಭೆ ಸದಸ್ಯರಾಗಿರುವ ಕಾರಣ ನಟನಾ ವೃತ್ತಿ ಹಿಂದಿನ ಸೀಟು ಹಿಡಿಯುವ ಸಾಧ್ಯತೆ ಇದೆ. ಪ್ರಸ್ತುತ ಜಗ್ಗೇಶ್ ನಟನೆಯ ಎರಡು ಪ್ರಮುಖ ಸಿನಿಮಾಗಳು ಬಿಡುಗಡೆ ಹಂತದಲ್ಲಿವೆ. ಸಂತೋಶ್ ಆನಂದ್‌ರಾಮ್ ನಿರ್ದೇಶನದ 'ರಾಘವೇಂದ್ರ ಸ್ಟೋರ್ಸ್' ಹಾಗೂ ವಿಜಯಪ್ರಕಾಶ್ ನಿರ್ದೇಶನದ 'ತೋತಾಪುರಿ' ಸಿನಿಮಾಗಳು ಶೀಘ್ರದಲ್ಲಿಯೇ ಬಿಡುಗಡೆ ಆಗಲಿದೆ. ಇದರ ಜೊತೆಗೆ ಗುರುಪ್ರಸಾದ್ ನಿರ್ದೇಶನದ 'ರಂಗನಾಯಕ' ಸಿನಿಮಾದಲ್ಲಿಯೂ ಜಗ್ಗೇಶ್ ನಟಿಸುತ್ತಿದ್ದಾರೆ.

  English summary
  Actor Jaggesh today took oath as Rajya Sabha MP in Kannada in the name of Raghavendra Swamy. He elected from BJP last month.
  Friday, July 8, 2022, 14:21
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X