For Quick Alerts
  ALLOW NOTIFICATIONS  
  For Daily Alerts

  ಚಲನಚಿತ್ರ ಕಾರ್ಮಿಕ ಒಕ್ಕೂಟ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ರಾಜೀನಾಮೆ

  |

  ಹಲವು ವರ್ಷಗಳಿಂದ ಚಲನಚಿತ್ರ ಕಾರ್ಮಿಕ ಒಕ್ಕೂಟ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಹಿರಿಯ ನಟ ಅಶೋಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

  ಚಲನಚಿತ್ರ ಕಾರ್ಮಿಕ ಒಕ್ಕೂಟದ ಸ್ಥಾಪಕರೂ ಆಗಿದ್ದ ಅಶೋಕ್ ಹಲವು ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈಗ ಹಠಾತ್ತನೆ ರಾಜೀನಾಮೆ ಸಲ್ಲಿಸಿದ್ದು, ವೈಯಕ್ತಿಕ ಕಾರಣದಿಂದ ರಾಜೀನಾಮೆ ಸಲ್ಲಿಸುತ್ತಿರುವಾಗಿ ತಿಳಿಸಿದ್ದಾರೆ.

  'ನಿಮ್ಮೆಲ್ಲರ ಸಹಕಾರ, ಪ್ರೋತ್ಸಾಹದಿಂದ ದೀರ್ಘಸಮಯದಿಂದ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಇದೀಗ ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷನಾಗಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕು ಎಂದು ಕೋರುತ್ತೇನೆ. ನಿಮ್ಮೆಲ್ಲರ ಸಹಕಾರ, ಸೌಹಾರ್ದವನ್ನು ಸದಾಕಾಲ ನೆನೆಯುತ್ತೇನೆ' ಎಂದಿದ್ದಾರೆ ಅಶೋಕ್.

  ವಜ್ರೇಶ್ವರಿ ಸಂಸ್ಥೆಯಿಂದ ಅಪ್ಪು, ಶಿವಣ್ಣ, ರಾಘಣ್ಣನ ಸಿನಿಮಾ ಬರುತ್ತೆ | Raghavendra Rajkumar | Part 02

  ಕೊರೊನಾ ಸಮಯದಲ್ಲಿ ಚಲನಚಿತ್ರ ಕಾರ್ಮಿಕರ ಒಳಿತಿಗಾಗಿ ಅಶೋಕ್ ಕೆಲಸ ಮಾಡಿದ್ದರು. ಇದೀಗ ಆರೋಗ್ಯ ಸಮಸ್ಯೆಯಿಂದ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರಬಹುದು ಎಂದು ಅಂದಾಜಿಸಲಾಗುತ್ತಿದೆ.

  English summary
  Kannada Movie Labour Organization president actor Ashok resigned to his post due to personal reasons.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X