twitter
    For Quick Alerts
    ALLOW NOTIFICATIONS  
    For Daily Alerts

    Ashwini Puneeth Rajkumar: ನೋವಿನಲ್ಲೂ ಸಾರ್ಥಕತೆ ಮೆರೆದ ಅಶ್ವಿನಿ ಪುನೀತ್ ರಾಜ್‌ಕುಮಾರ್, ಮಕ್ಕಳಿಗೆ ಚಿನ್ನದ ಪದಕ ಘೋಷಣೆ!

    |

    ಕರ್ನಾಟಕ ರತ್ನ ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

    ಮಂಗಳವಾರ(ಮಾರ್ಚ್ 22) ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

    Ashwini Puneeth Rajkumar: ಭಾವುಕ ಸ್ಥಿತಿಯಲ್ಲಿ ಪುನೀತ್‌ ಪರವಾಗಿ ಗೌರವ ಸ್ವೀಕರಿಸಿದ ಅಶ್ವಿನಿAshwini Puneeth Rajkumar: ಭಾವುಕ ಸ್ಥಿತಿಯಲ್ಲಿ ಪುನೀತ್‌ ಪರವಾಗಿ ಗೌರವ ಸ್ವೀಕರಿಸಿದ ಅಶ್ವಿನಿ

    ಪುನೀತ್ ರಾಜ್‌ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದ್ದಾರೆ. ಈ ವೇಳೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕೆಲಕಾಲ ಭಾವುಕರಾಗಿದ್ದು ಕಂಡು ಬಂತು. ಈ ನೋವಿನಲ್ಲೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ಅದೇನು ಅಂತ ಮುಂದೆ ಓದಿ.

    James Vs RRR: ರಾಜಮೌಳಿ ಸಿನಿಮಾ 'ಜೇಮ್ಸ್' ಎತ್ತಂಗಡಿ ಆಯ್ತಾ? ಏನಂತಾರೆ ಫ್ಯಾನ್ಸ್? James Vs RRR: ರಾಜಮೌಳಿ ಸಿನಿಮಾ 'ಜೇಮ್ಸ್' ಎತ್ತಂಗಡಿ ಆಯ್ತಾ? ಏನಂತಾರೆ ಫ್ಯಾನ್ಸ್?

    ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ 102ನೇ ಘಟಿಕೋತ್ಸವ

    ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ 102ನೇ ಘಟಿಕೋತ್ಸವ

    ಮೈಸೂರು ವಿಶ್ವವಿದ್ಯಾನಿಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದ್ದು, ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ 102ನೇ ಘಟಿಕೋತ್ಸವದಲ್ಲಿ ಪುನೀತ್ ರಾಜ್‌ಕುಮಾರ್ ಪರವಾಗಿ ಅವರ ಪತ್ನಿ ಅಶ್ವಿನಿ ಅವರು ಗೌರವ ಡಾಕ್ಟರೇಟ್ ಅನ್ನು ಸ್ವೀಕಾರ ಮಾಡಿದ್ದಾರೆ. ಈ ಸಮಾರಂಭದಲ್ಲಿ ಮಾತನಾಡಿದ ಅಶ್ವಿನಿ ಅವರು ಪುನೀತ್ ರಾಜ್​ಕುಮಾರ್ ಮತ್ತು ಪಾರ್ವತಮ್ಮ ರಾಜ್​ಕುಮಾರ್ ಪರವಾಗಿ ವಿಶ್ವವಿದ್ಯಾನಿಲಯಕ್ಕೆ ಪ್ರತಿ ವರ್ಷ ಎರಡು ಚಿನ್ನದ ಪದಕ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

    ಮುಂದಿನ ವರ್ಷದಿಂದ ಪದಕ ವಿತರಣೆ ಮಾಡಲಾಗುವುದು

    ಮುಂದಿನ ವರ್ಷದಿಂದ ಪದಕ ವಿತರಣೆ ಮಾಡಲಾಗುವುದು

    ಪಾರ್ವತಮ್ಮ ರಾಜಕುಮಾರ್ ಅವರ ಹೆಸರಿನಲ್ಲಿ, ಬ್ಯೂಸಿನೇಸ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಬಂಗಾರದ ಪದಕ ಮತ್ತು ಪುನೀತ್ ರಾಜಕುಮಾರ್ ಹೆಸರಿನಲ್ಲಿ ಲಲಿತಾ ಕಲೆಗಳ ವಿಷಯದಲ್ಲಿ ಬಂಗಾರದ ಪದಕ ನೀಡುವುದಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಘೋಷಣೆ ಆಯಿತು. ಮುಂದಿನ ವರ್ಷದಿಂದ ಪದಕ ವಿತರಣೆ ಮಾಡಲಾಗುವುದು ಎಂದಿದೆ ಡಾ.ರಾಜ್ ಕುಟುಂಬ.

    ಅಪ್ಪುಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದೆ

    ಅಪ್ಪುಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದೆ

    ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದ ರಾಘವೇಂದ್ರ ರಾಜ್ ಕುಮಾರ್ ಮಾತನಾಡಿ "ಜೀವನ ಒಂದು ಚಕ್ರ ಇದ್ದಂತೆ. ನಮ್ಮ ತಂದೆಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಿದ್ರು. ಇಂದು ನನ್ನ ತಮ್ಮನಿಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದೆ. ನನಗೆ ಇದು ವೇದಿಕೆ ರೀತಿ ಕಾಣುಸ್ತಿಲ್ಲ. ಸರಸ್ವತಿಯ ಮಂದಿರ ತರ ಕಾಣ್ತಿದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿದ್ರೆ ಪ್ರಶಸ್ತಿಗಳು ಹುಡುಕಿ ಬರುತ್ತವೇ ಅಂತ ಪುನೀತ್ ಯಾವಾಗಲೂ ಹೇಳ್ತಿದ್ದ. ಹೂವಿನಿಂದ ನಾರು ಸ್ವರ್ಗ ಸೇರಿದಂತೆ ನನ್ನ ತಮ್ಮನಿಂದ ನಾನು ಸ್ವರ್ಗ ನೋಡುತ್ತಿದ್ದೇನೆ. ಈ ಗೌರವ ಡಾಕ್ಟರೇಟ್‌ ನಮ್ಮ ಕುಟುಂಬದ ಜವಾಬ್ದಾರಿಯನ್ನು ಹೆಚ್ಚಿಸಿದೆ. ಅಶ್ವಿನಿ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಮಾಜಿಕ ಸೇವೆ ಮುಂದುವರೆಸುತ್ತೇವೆ" ಎಂದಿದ್ದಾರೆ.

    ಗೌರವ ಡಾಕ್ಟರೇಟ್ ಗೌರವ ಸ್ವೀಕರಿಸಿರುವುದು ಖುಷಿಯಾಗಿದೆ

    ಗೌರವ ಡಾಕ್ಟರೇಟ್ ಗೌರವ ಸ್ವೀಕರಿಸಿರುವುದು ಖುಷಿಯಾಗಿದೆ

    ಗೌರವ ಡಾಕ್ಟರೇಟ್ ಸ್ವೀಕರಿಸಿದ ಬಳಿಕ ಅದರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅಶ್ವಿನಿ ಪುನೀತ ರಾಜ್‌ಕುಮಾರ್, ''ಕುಟುಂಬ, ಗೆಳೆಯರು ಹಾಗೂ ಅವರ ಅಭಿಮಾನಿಗಳ ಪರವಾಗಿ ಪುನೀತ್ ರಾಜ್‌ಕುಮಾರ್ ಪರವಾಗಿ ಗೌರವ ಡಾಕ್ಟರೇಟ್ ಗೌರವ ಸ್ವೀಕರಿಸಿರುವುದು ಖುಷಿಯಾಗಿದೆ. ಈ ಗೌರವವನ್ನು ಪ್ರೀತಿಪೂರ್ವಕವಾಗಿ ನೀಡಿದ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಧನ್ಯವಾದಗಳು ಎಂದು ಬರೆದಿದ್ದಾರೆ.

    English summary
    Ashwini Puneeth Rajkumar announced 2 gold medals for students at Mysore university in the name of Parvathamma Raj Kumar and Puneeth Rajkumar.
    Tuesday, March 22, 2022, 17:25
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X