For Quick Alerts
  ALLOW NOTIFICATIONS  
  For Daily Alerts

  ಯುವ ದಸರೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್‌ಗೆ ಆಹ್ವಾನ

  By ಮೈಸೂರು ಪ್ರತಿನಿಧಿ
  |

  ಯುವ ಸಮೂಹವನ್ನು ಪ್ರಮುಖವಾಗಿ ಆಕರ್ಷಿಸುವ ಯುವ ದಸರೆ ಉದ್ಘಾಟನೆಗೆ ಸುದೀಪ್ ಬಾರದ ಹಿನ್ನೆಲೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಆಹ್ವಾನ‌ ನೀಡಲಾಗಿದೆ.

  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಯುವ ದಸರಾ ಕಾರ್ಯಕ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಮಾತನಾಡಿ ಈ ವಿಷಯ ಸ್ಪಷ್ಟಪಡಿಸಿದರು.

  ಸೆ.28ಕ್ಕೆ "ಅಪ್ಪು ನಮನ" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಸರಾಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ಯುವ ದಸರಾದಲ್ಲಿ ಗೋಲ್ಡ್ ಪಾಸ್ ಹೊರತುಪಡಿಸಿ ಯಾವುದೇ ಪಾಸ್ ಇರುವುದಿಲ್ಲ ಎಂದರು.

  ಯುವ ಸಂಭ್ರಮ/ಯುವ ದಸರಾ ಉಪ ಸಮಿತಿ ವತಿಯಿಂದ ನಾಳೆಯಿಂದ ಅ.3ರವರೆಗೆ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

  ಯುವ ದಸರಾ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ದಿ.ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಹಾಗೂ ನಟ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ನಾಳೆ (ಸೆಪ್ಟೆಂಬರ್ 28) ಸಂಜೆ 7ಗಂಟೆಯಿಂದ ಅಪ್ಪು ನಮನ ಕಾರ್ಯಕ್ರಮ ನಡೆಯಲಿದ್ದು ಖ್ಯಾತ ಹಿನ್ನೆಲೆ ಗಾಯಕರಾದ ಗುರುಕಿರಣ್, ವಿಜಯ್ ಪ್ರಕಾಶ್, ಕುನಾಲ್ ಗಾಂಜಾವಾಲ ಕಾರ್ಯಕ್ರಮ ನೀಡಲಿದ್ದಾರೆ.

  ಸೆಪ್ಟೆಂಬರ್ 29ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ನೃತ್ಯ ತಂಡದಿಂದ ನೃತ್ಯ ಪ್ರದರ್ಶನ, ಪವನ್ ಡ್ಯಾನ್ಸರ್ ಹಾಗೂ ಇತರರಿಂದ ನೃತ್ಯ ರೂಪಕ, ಹಿನ್ನೆಲೆ ಗಾಯಕಿ ಕನ್ನಿಕಾ ಕಪೂರ್ ರವರಿಂದ ಸಂಗೀತ ರಸಸಂಜೆ ನಡೆಯಲಿದೆ.

  ಸೆ.30ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ಕಲಾವಿದರಿಂದ ಕಾರ್ಯಕ್ರಮ, ಲೇಸರ್ ಆಕ್ಟ್ & ಸಿಗ್ನೇಚರ್ ಗ್ರೂಪ್ ನೃತ್ಯ ತಂಡದಿಂದ ನೃತ್ಯ ರೂಪಕ, ಸ್ಯಾಂಡಲ್ ವುಡ್ ನೈಟ್ ನಡೆಯಲಿದೆ. ಅಕ್ಟೊಬರ್ 1ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಹಿನ್ನೆಲೆ ಗಾಯಕ ಸೋನು ನಿಗಮ್, ಗಾಯಕಿ ಡಾ.ಶಮಿತಾ ಮಲ್ನಾಡ್ ರಿಂದ ಸಂಗೀತ ರಸಮಂಜರಿ ಇರಲಿದೆ.

  ಅ.2ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಖ್ಯಾತ ಚಿತ್ರತಾರೆಯರಾದ ಹರ್ಷಿಕಾ ಪೂಣಚ್ಚ, ವಿಜಯರಾಘವೇಂದ್ರ ಅವರಿಂದ ಕನ್ನಡ ಸಸ್ಟಾರ್ ನೈಟ್, ಗಾಯಕಿ ಮಂಗ್ಲಿ ಅವರಿಂದ ಸಂಗೀತ ರಸಮಂಜರಿ, ಗಾಯಕ ಅಮಿತ್ ತ್ರಿವೇದಿ ಅವರಿಂದ ಸಂಗೀತ ರಸಮಂಜರಿ ನಡೆಯಲಿದೆ.

  ಅ.3ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸುಪ್ರಿಯಾ ರಾಮ್ &ಮಹಿಳಾ ಬ್ಯಾಂಡ್ ತಂಡದವರಿಂದ ಪ್ರದರ್ಶನ, ಫ್ಯಾಷನ್ ಶೋ, ಗಾಯಕಿ ಸುನಿಧಿ ಚೌಹಾಣ್ ರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಯುವ ದಸರಾ ಉಪ ಸಮಿತಿ ವಿಶೇಷಾಧಿಕಾರಿ ಆರ್.ಚೇತನ್ ಇದೇ ವೇಳೆ ತಿಳಿಸಿದರು.

  ಭಿತ್ರಿ ಪತ್ರ ಬಿಡುಗಡೆ ಸಮಾರಂಭದಲ್ಲಿ ಸಂಸದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಸಮಿತಿಯ ಕಾರ್ಯಾಧ್ಯಕ್ಷ ವೆಂಕಟರಾಜು ಎನ್ ಸಿ, ಅಧ್ಯಕ್ಷ ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಎಂ.ಬದರೀಶ್, ಸಂತೋಷ್ ಕುಮಾರ್, ಎಂ.ಮಹೇಂದ್ರ, ಕಾರ್ಯದರ್ಶಿ ಆಶಾದ್ ರೆಹಮಾನ್ ಷರೀಫ್, ಡಾ.ನಿಂಗರಾಜು ಆರ್ ಮತ್ತಿತರರು ಉಪಸ್ಥಿತರಿದ್ದರು.

  English summary
  ST Somashekhar gave information about Yuva Dasara 2022. He said Sudeep is not coming to the program. Ashwini Puneeth Rajkumar invited for Yuva Dasara.
  Tuesday, September 27, 2022, 18:10
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X