ಆರಾಮ್ ಅರವಿಂದ್ ಸ್ವಾಮಿ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್
ಮಾಸ್ ಸಿನಿಮಾಗಳಲ್ಲಿಯೇ ಹೆಚ್ಚಾಗಿ ನಟಿಸಿರೋ ಅನೀಶ್ ತೇಜೇಶ್ವರ್ ಈ ಬಾರಿ ರೊಮ್ಯಾಂಟಿಕ್ ಕಾಮಿಡಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದುವೇ 'ಆರಾಮ್ ಅರವಿಂದ್ ಸ್ವಾಮಿ'. ಇದೇ ಸಿನಿಮಾ ಫಸ್ಟ್ ಲುಕ್ ಈಗ ರಿಲೀಸ್ ಆಗಿದೆ.
ಅನೀಶ್ ತೇಜೇಶ್ವರ್ ಹಾಗೂ ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ.'ಆರಾಮ್ ಅರವಿಂದ್ ಸ್ವಾಮಿ' ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಸೆಟ್ಟೇರಿದ್ದ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈಗ್ಯಾಪ್‌ನಲ್ಲೇ ಸಿನಿಮಾ ಫಸ್ಟ್ ಲುಕ್ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಈ ಲುಕ್‌ನಲ್ಲಿ ಅನೀಶ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದು, ಸಿನಿಪ್ರಿಯರ ಗಮನ ಸೆಳೆಯುತ್ತಿದ್ದಾರೆ.
ಅಂದ್ಹಾಗೆ, 'ನಮ್ ಗಣಿ ಬಿಕಾಂ ಪಾಸ್', 'ಗಜಾನನ ಅಂಡ್ ಗ್ಯಾಂಗ್' ಅಂತಹ ಸಿನಿಮಾಗಳನ್ನು ನಿರ್ದೇಶಿಸಿರೋ ಅಭಿಷೇಕ್ ಶೆಟ್ಟಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇಲ್ಲಿ ಅನೀಶ್‌ಗೆ ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಇಬ್ಬರು ನಾಯಕಿಯರು.
'ಆರಾಮ್ ಅರವಿಂದ್ ಸ್ವಾಮಿ' ಸಿನಿಮಾಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಟ್ಯೂನ್ ಹಾಕುತ್ತಿದ್ದಾರೆ. ಹೀಗಾಗಿ ಸಂಗೀತ ಪ್ರಿಯರ ಕಿವಿಗಳಿಗಂತೂ ಒಳ್ಳೊಳ್ಳೆ ಹಾಡುಗಳನ್ನು ನಿರೀಕ್ಷೆ ಮಾಡಬಹುದು.
'ಅಕಿರ' ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ 'ಗುಳ್ಟು' ಸಿನಿಮಾ ನಿರ್ಮಾಪಕ ಪ್ರಶಾಂತ್ ರೆಡ್ಡಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಈಗಾಗಲೇ ಎರಡು ಹಂತದ ಚಿತ್ರೀಕರಣ ಮುಗಿದಿದೆ. ಇನ್ನು ಮೂರನೇ ಹಂತದ ಶೂಟಿಂಗ್ ಅನ್ನು ಕೇರಳದಲ್ಲಿ ಪ್ಲ್ಯಾನ್ ಮಾಡಿದೆ ಚಿತ್ರತಂಡ.


Click it and Unblock the Notifications











