»   » 'ಅವನೇ ಶ್ರೀಮನ್ನಾರಾಯಣ' ಚಿತ್ರದ ರಿಲೀಸ್ ಡೇಟ್ ಫಿಕ್ಸ್

'ಅವನೇ ಶ್ರೀಮನ್ನಾರಾಯಣ' ಚಿತ್ರದ ರಿಲೀಸ್ ಡೇಟ್ ಫಿಕ್ಸ್

Posted By:
Subscribe to Filmibeat Kannada

ರಕ್ಷಿತ್ ಶೆಟ್ಟಿ ನಟನೆಯ 'ಅವನೇ ಶ್ರೀಮನ್ನಾರಾಯಣ' ಸಿನಿಮಾದ ಚಿತ್ರೀಕರಣ ಇನ್ನು ಶುರುವಾಗಿಲ್ಲ. ಆದರೆ ಅದಕ್ಕೂ ಮುಂಚೆಯೇ ಸಿನಿಮಾದ ಬಿಡುಗಡೆಯ ದಿನಾಂಕ ನಿಗದಿ ಆಗಿದೆ. 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಡಿಸೆಂಬರ್ 28ಕ್ಕೆ ತೆರೆಗೆ ಬರಲಿದೆ.

ಡಿಸೆಂಬರ್ 30ಕ್ಕೆ ಸರಿಯಾಗಿ 'ಕಿರಿಕ್ ಪಾರ್ಟಿ' ಸಿನಿಮಾ ಕೂಡ ರಿಲೀಸ್ ಆಗಿತ್ತು. ಈಗ ಡಿಸೆಂಬರ್ ತಿಂಗಳಿನಲ್ಲಿಯೇ ರಕ್ಷಿತ್ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ. ಅಂದಹಾಗೆ, ಈ ಚಿತ್ರದಲ್ಲಿ ರಕ್ಷಿತ್ ನಟನೆ ಜೊತೆಗೆ ನಿರ್ಮಾಣ ಕೂಡ ಮಾಡಿದ್ದಾರೆ. ಪುಷ್ಕರ ಮಲ್ಲಿಕಾರ್ಜುನಯ್ಯ ಮತ್ತು 'ರಂಗಿತರಂಗ' ಖ್ಯಾತಿಯ ಪ್ರಕಾಶ್ ಜೊತೆ ಸೇರಿ ರಕ್ಷಿತ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

'777 ಚಾರ್ಲಿ' ಸಿನಿಮಾದಿಂದ ಔಟ್ ಆದ ಅರವಿಂದ್ ಅಯ್ಯರ್

ಇತ್ತೀಚಿಗಷ್ಟೆ '777 ಚಾರ್ಲಿ' ಸಿನಿಮಾದಲ್ಲಿ ರಕ್ಷಿತ್ ನಟಿಸುತ್ತಾರೆ ಎಂಬ ಸುದ್ದಿ ಹೊರಬಂದಿತ್ತು. 'ಅವನೇ ಶ್ರೀಮನ್ನಾರಾಯಣ' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದ ನಂತರ '777 ಚಾರ್ಲಿ' ಸಿನಿಮಾದ ಶೂಟಿಂಗ್ ಶುರು ಆಗಲಿದೆಯಂತೆ.

Avane Srimannarayana kannada movie release date fixed.

ಅಂದಹಾಗೆ, ರಕ್ಷಿತ್ ಶೆಟ್ಟಿ ಜೊತೆಗೆ ಈ ಸಿನಿಮಾದಲ್ಲ ಶಾನ್ವಿ ಶ್ರೀವತ್ಸವ್ ನಟಿಸಿದ್ದಾರೆ. ರಕ್ಷಿತ್ ಸಿನಿಮಾದಲ್ಲಿ ಐದು ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದು, ಭ್ರಷ್ಟ ಪೊಲೀಸ್ ಅಧಿಕಾರಿ ಪಾತ್ರವನ್ನು ಅವರು ಮಾಡಿದ್ದಾರೆ. ಸಚಿತ್ ರವಿ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಚರಣ್ ರಾಜ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

English summary
Kannada actor Rakshith Shetty's 'Avane Srimannarayana' kannada movie release date fixed. The movie will be releasing on December 28th

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada