ನಾಳೆ ರಕ್ಷಿತ್ ಶೆಟ್ಟಿಗೆ ಸಿಗುವ ಬರ್ತ್ ಡೇ ಗಿಫ್ಟ್ ಗಳಲ್ಲಿ ಇದೂ ಒಂದು
ನಾಳೆ (ಜೂನ್ 6) ರಂದು ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ ಆಚರಣೆ ನಡೆಯಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ಅಭಿಮಾನಿಗಳು ತಮ್ಮ ಮೆಚ್ಚಿನ ನಟನಿಗಾಗಿ ಸಖತ್ ಪ್ಲಾನ್ ಗಳನ್ನು ಮಾಡಿದ್ದಾರೆ. ಅದರ ಜೊತೆಗೆ 'ಅವನೇ ಶ್ರೀಮನ್ನಾರಾಯಣ' ಚಿತ್ರತಂಡ ಸಹ ರಕ್ಷಿತ್ ಹುಟ್ಟುಹಬ್ಬಕ್ಕೆ ಒಂದು ಗಿಫ್ಟ್ ನೀಡಲಿದೆ.
ನಾಳೆ 'ಅವನೇ ಶ್ರೀಮನ್ನಾರಾಯಣ' ಸಿನಿಮಾದ ಮೊದಲ ಟೀಸರ್ ಬಿಡುಗಡೆಯಾಗಲಿದೆ. ಈ ಮೂಲಕ ರಕ್ಷಿತ್ ಹುಟ್ಟುಹಬ್ಬಕ್ಕೆ ಕಾಣಿಕೆ ನೀಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ. ಇನ್ನು 'ಕಿರಿಕ್ ಪಾರ್ಟಿ' ಸಿನಿಮಾದ ಬಳಿಕ ರಕ್ಷಿತ್ ಶೆಟ್ಟಿ ಈ ಸಿನಿಮಾ ಮಾಡುತ್ತಿದ್ದಾರೆ. ಸಚಿನ್ 'ಅವನೇಶ್ರೀನ್ನಾರಾಯಣ' ಸಿನಿಮಾದ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಮೊದಲ ಬಾರಿಗೆ ರಕ್ಷಿತ್ ಶೆಟ್ಟಿ ಜೊತೆಗೆ ಶಾನ್ವಿ ಶ್ರೀವತ್ಸವ್ ಕಾಣಿಸಿಕೊಳ್ಳುತ್ತಿದ್ದಾರೆ. ರಕ್ಷಿತ್ ಶೆಟ್ಟಿ,'ರಂಗಿತರಂಗ' ಖ್ಯಾತಿಯ ನಿರ್ಮಾಪಕರಾದ ಪ್ರಕಾಶ್, ಮತ್ತು ಪುಷ್ಕರ್ ಮಲ್ಲಿಕಾರ್ಜುನಯ್ಯ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. 'ಕಿರಿಕ್ ಪಾರ್ಟಿ'ಗೆ ಸಂಗೀತ ನೀಡಿದ್ದ ಅಜನೀಶ್ ಲೋಕನಾಥ್ ಅವರೇ ಈ ಚಿತ್ರಕ್ಕೆ ಮ್ಯೂಸಿಕ್ ನೀಡಲಿದ್ದಾರೆ.

'ಅವನೇಶ್ರೀನ್ನಾರಾಯಣ' ಸಿನಿಮಾ ಡಿಸೆಂಬರ್ 28ಕ್ಕೆ ಬಿಡುಗಡೆಯಾಗಲಿದೆಯಂತೆ. ವಿಶೇಷ ಅಂದರೆ 'ಕಿರಿಕ್ ಪಾರ್ಟಿ' ಸಿನಿಮಾ ಕೂಡ ಅದೇ ಸಮಯದಲ್ಲಿ ಬಿಡುಗಡೆಯಾಗಿದ್ದು, 'ಅವನೇಶ್ರೀನ್ನಾರಾಯಣ' ಚಿತ್ರ ಕೂಡ ಅದೇ ದಿನ ತೆರೆಗೆ ಬರಲಿದೆಯಂತೆ. ಇನ್ನು 'ಅವನೇಶ್ರೀನ್ನಾರಾಯಣ' ಚಿತ್ರದಲ್ಲಿ ರಕ್ಷಿತ್ ಐದು ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಬ್ಬ ಭ್ರಷ್ಟ ಪೊಲೀಸ್ ಪಾತ್ರವನ್ನು ರಕ್ಷಿತ್ ಇಲ್ಲಿ ಪ್ಲೇ ಮಾಡುತ್ತಿದ್ದಾರೆ.


Click it and Unblock the Notifications











