ಯೂಟ್ಯೂಬ್ ನಲ್ಲಿ ಶ್ರೀಮನ್ನಾರಾಯಣನ ಮಹಿಮೆ ಜೋರು
Recommended Video

ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾದ ಟೀಸರ್ ಯೂಟ್ಯೂಬ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ. ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಬಿಡುಗಡೆಯಾಗಿರುವ ಅವನೇ ಶ್ರೀಮನ್ನಾರಾಯಣ ಟೀಸರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ಕ್ರಿಯೇಟ್ ಮಾಡಿದೆ.
ನಿನ್ನೆ ಬಿಡುಗಡೆಯಾಗಿರುವ ಅವನೇ ಶ್ರೀಮನ್ನಾರಾಯಣ ಸಿನಿಮಾದ ಟೀಸರ್ ಹಿಂದಿಗೂ ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿ ಮೊದಲನೇ ಸ್ಥಾನವನ್ನು ಕಾಯ್ದುಕೊಂಡಿದೆ. ಅವನೇ ಶ್ರೀಮನ್ನಾರಾಯಣ ಚಿತ್ರದ ಟೀಸರ್ ಸಾಕಷ್ಟು ವಿಶೇಷತೆಗಳಿಂದ ಕುರಿತು ರಕ್ಷಿತ್ ಶೆಟ್ಟಿ ಪೊಲೀಸ್ ಪಾತ್ರದಲ್ಲಿ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ರಕ್ಷಿತ್ ಯಾವುದೇ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಕ್ಕಿಂತಲೂ ವಿಭಿನ್ನವಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅವನೇ ಶ್ರೀಮನ್ನಾರಾಯಣ ಚಿತ್ರವನ್ನು ಸಚಿನ್ ರವಿ ನಿರ್ದೇಶನ ಮಾಡುತ್ತಿದ್ದಾರೆ. ಹೈಬಜೆಟ್ ಸಿನಿಮಾ ಇದಾಗಿದ್ದು ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ಶಾನ್ವಿ ಶ್ರೀವಾಸ್ತವ ನಾಯಕಿಯಾಗಿ ಅಭಿನಯ ಮಾಡುತ್ತಿದ್ದಾರೆ. ಚರಣ್ ರಾಜ್ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು ರಕ್ಷಿತ್ ಶೆಟ್ಟಿಯ ಜೊತೆಯಲ್ಲಿ ಅಚ್ಯುತ್ ಕುಮಾರ್, ಬಾಲಾಜಿ ಮನೋಹರ್, ಪ್ರಮೋದ್ ಶೆಟ್ಟಿ, ಮಧುಸೂದನ್ ರಾವ್ ಇನ್ನೂ ಅನೇಕರು ಅಭಿನಯ ಚಿತ್ರದಲ್ಲಿದೆ.
ಟೀಸರ್ ನಿಂದಲೇ ಭಾರಿ ನಿರೀಕ್ಷೆಯನ್ನು ಮೂಡಿಸಿರುವ ಅವನೇ ಶ್ರೀಮನ್ನಾರಾಯಣ ಚಿತ್ರವನ್ನು ಶ್ರೀ ದೇವಿ ಎಂಟರ್ ಪ್ರೈಸಸ್ ಹಾಗೂ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣ ಮಾಡುತ್ತಿದ್ದಾರೆ. ಕುತೂಹಲ ಮೂಡಿಸುವಂಥ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡ ಪ್ರೇಕ್ಷಕರು ಕೇಳುವ ಮುಂಚೆಯೇ ಡಿಸೆಂಬರ್ ನಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.


Click it and Unblock the Notifications











