ಜೂನ್ 6ಕ್ಕೆ ರಕ್ಷಿತ್ ಶೆಟ್ಟಿ ಕಡೆಯಿಂದ ಸ್ಪೆಷಲ್ ಗಿಫ್ಟ್ ಇದೆಯಂತೆ.!

By Bharath Kumar

'ಕಿರಿಕ್ ಪಾರ್ಟಿ' ಚಿತ್ರದ ನಂತರ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯ ಸಿನಿಮಾ ಕಳೆದ ವರ್ಷ ಬಿಡುಗಡೆಯಾಗಿಲ್ಲ. ಆದ್ರೆ, ಈ ವರ್ಷ ಎರಡು ಸಿನಿಮಾದಲ್ಲಿ ನಟಿಸುತ್ತಿದ್ದು, ಬಹುಶಃ ಇವರೆಡೂ ಚಿತ್ರವೂ ಇದೇ ವರ್ಷ ತೆರೆಗೆ ಬರಲಿದೆ.

ಜೂನ್ 6 ರಂದು ರಕ್ಷಿತ್ ಕಡೆಯಿಂದ ಚಿತ್ರ ಪ್ರೇಮಿಗಳಿಗೆ ಸ್ಪೆಷಲ್ ಗಿಫ್ಟ್ ಸಿಗಲಿದೆ ಎಂಬ ಮಾತು ಗಾಂಧಿನಗರದಲ್ಲಿ ಜೋರಾಗಿ ಕೇಳಿಬರುತ್ತಿದೆ. ಅಷ್ಟಕ್ಕೂ, ಜೂನ್ 6 ರಂದು ವಿಶೇಷ ಏನು, ಆ ದಿನಕ್ಕೆ ಸಿಗಲಿರುವ ಗಿಫ್ಟ್ ಏನು.? ಎಂಬ ಕುತೂಹಲ ಕಾಡುತ್ತಿದೆ.

ಅಂದ್ಹಾಗೆ, ಜೂನ್ 6 ರಕ್ಷಿತ್ ಶೆಟ್ಟಿಯ ಬರ್ತಡೇ. 35ನೇ ವಸಂತಕ್ಕೆ ಕಾಲಿಡಲಿರುವ ರಕ್ಷಿತ್ ಗೆ ಸ್ಯಾಂಡಲ್ ವುಡ್ ಮಂದಿ ಸರ್ಪ್ರೈಸ್ ನೀಡಲು ತಯಾರಾಗುತ್ತಿದ್ದಾರೆ. ಹೌದು, ರಕ್ಷಿತ್ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ 'ಅವನೇ ಶ್ರೀಮನ್ನಾರಾಯಣ' ಮತ್ತು 'ಚಾರ್ಲಿ' ಚಿತ್ರಗಳ ಪೋಸ್ಟರ್ ಅನಾವರಣ ಮಾಡಲಾಗುವುದಂತೆ.

avne srimannarayana first look for Rakshith shetty Birthday

'777 ಚಾರ್ಲಿ' ಸಿನಿಮಾ ಶ್ವಾನ ಮತ್ತು ಮನುಷ್ಯನ ಬಾಂಡಿಂಗ್ ಹೇಳುವಂತಹ ಕಥೆಯನ್ನು ಹೊಂದಿದೆ. ಚಿತ್ರದಲ್ಲಿ ಶ್ವಾನದ ಹೆಸರು ಚಾರ್ಲಿ ಆಗಿದ್ದು, ಶ್ವಾನದ ಲೈಸನ್ಸ್ ನಂಬರ್ 777 ಅಂತೆ. ಹೀಗಾಗಿ ಚಿತ್ರಕ್ಕೆ '777 ಚಾರ್ಲಿ' ಎಂಬ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಾರಂತೆ. ರಕ್ಷಿತ್ ಶೆಟ್ಟಿ ಜೊತೆ 'ರಿಕ್ಕಿ', 'ಕಿರಿಕ್ ಪಾರ್ಟಿ' ಚಿತ್ರಗಳಿಲ್ಲಿ ಕೆಲಸ ಮಾಡಿರುವ ನಿರ್ದೇಶಕ ಕಿರಣ್ ರಾಜ್‌ ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್‌ಗೆ ಪರಿಚಿತವಾಗುತ್ತಿದ್ದಾರೆ.

'ಅವನೇ ಶ್ರೀಮನ್ನಾರಾಯಣ' ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ಶಾನ್ವಿ ಶ್ರೀವತ್ಸವ್ ನಟಿಸಿದ್ದಾರೆ. ರಕ್ಷಿತ್ ಸಿನಿಮಾದಲ್ಲಿ ಐದು ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದು, ಭ್ರಷ್ಟ ಪೊಲೀಸ್ ಅಧಿಕಾರಿ ಪಾತ್ರವನ್ನು ಅವರು ಮಾಡಿದ್ದಾರೆ. ಸಚಿತ್ ರವಿ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಚರಣ್ ರಾಜ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

More from Filmibeat

English summary
on the occasion of Rakshith shetty's Birthday the teams of 'avne srimannarayana' and 'charlie 777' are releasing their first look.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X