ರಾಮಮಂದಿರ ಉದ್ಘಾಟನೆಗೆ ನಟ ನಿಖಿಲ್‌ಗೆ ಆಹ್ವಾನ: ಲೋಕಸಭಾ ಚುನಾವಣೆ ಬಗ್ಗೆ 'ಜಾಗ್ವಾರ್' ಹೇಳಿದ್ದೇನು?
ಇಡಿ ದೇಶವೇ ಕಾತುರದಿಂದ ಕಾಯುತ್ತಿರುವ ದೊಡ್ಡ ದಿನ ಜನವರಿ 22. ಈ ಬಾರಿಯ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಗಣ್ಯರು, ರಾಜಕಾರಣಿಗಳು ಸೇರಿದಂತೆ ಚಿತ್ರರಂಗದವರು ಭಾಗಿಯಾಗಲಿದ್ದಾರೆ.
ಈಗಾಗಲೇ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದಕ್ಷಿಣದ ಕೆಲವೇ ಕೆಲವು ನಟರಿಗೆ ಆಹ್ವಾನ ಸಿಕ್ಕಿದೆ. ಕನ್ನಡದ ನಟ ರಿಷಬ್ ಶೆಟ್ಟಿ ಮತ್ತು ಯಶ್ ಅವರಿಗೆ ಆಹ್ವಾನ ಬಂದಿದೆ. ಇದರ ಜೊತೆಗೆ ನಟ ರಜನಿಕಾಂತ್, ಪ್ರಣಾಸ್ ಸೇರಿದಂತೆ ಈಗಾಗಗಲೇ ಸಾಕಷ್ಟು ನಟರಿಗೆ ಆಹ್ವಾನ ಸಿಕ್ಕಿದೆ ಅನ್ನೋ ಸುದ್ದಿ ಕೇಳಿ ಬರುತ್ತಿದೆ. ಬುಧವಾರ ಜಾಗ್ವಾರ್ ನಟ ನಿಖಿಲ್ ಕುಮಾರ್ ಅವರಿಗೆ ರಾಮ ಲಲ್ಲನ ಪ್ರಾಣ ಪ್ರತಿಷ್ಠಾನಕ್ಕೆ ಅಧಿಕೃತ ಆಹ್ವಾನ ಸಿಕ್ಕಿದೆ.

ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ನಿಖಿಲ್‌ಗೆ ಆಹ್ವಾನ
ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಇಡೀ ಕುಟುಂಬಕ್ಕೆ ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ಪತ್ರಿಕೆ ಬಂದಿದೆ. ಜನವರಿ 22ರಂದು ನಡೆಯಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಕುಟುಂಬಸ್ಥರು ಭಾಗಿಯಾಗಲಿದ್ದಾರೆ ಎಂಬ ಮಾಹಿತಿಯಿದೆ.
ಇಲ್ಲಿ ಇನ್ನೊಂದು ವಿಶೇಷ ಏನೆಂದರೆ ಜನವರಿ 22 ರಂದು ನಟ ನಿಖಿಲ್ ಕುಮಾರಸ್ವಾಮಿ ತಮ್ಮ ಹುಟ್ಟುಹಬ್ಬವನ್ನ ಆಚರಣೆ ಮಾಡಿಕೊಳ್ಳಲಿದ್ದಾರೆ. ಹಾಗಾಗಿ ಈ ಬಾರಿಯ ಹುಟ್ಟುಹಬ್ಬ ಮತ್ತಷ್ಟು ವಿಶೇಷವಾಗಲಿದೆ. ಅಯೋದ್ಯೆಯ ಶ್ರೀ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಹುಟ್ಟುಹಬ್ಬವನ್ನ ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಳ್ಳಲಿದ್ದಾರೆ.
ಶ್ರೀ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿರುವ ವಿಚಾರವನ್ನು ನಟ ನಿಖಿಲ್ ಕುಮಾರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. "ಕೋಟ್ಯಾಂತರ ಹಿಂದೂಗಳ ಕನಸು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಶ್ರೀ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ನನಗೂ ಹಾಗೂ ನಮ್ಮ ಕುಟುಂಬಕ್ಕೂ ಆಹ್ವಾನ ಪತ್ರಿಕೆ ಜೊತೆಗೆ ಆಹ್ವಾನ ನೀಡಿದಕ್ಕಾಗಿ ಧನ್ಯವಾದಗಳು.. ಶ್ರೀ ರಾಮರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಹಾಗೂ ಶ್ರೀರಾಮ ಸೇವಾ ಕೈಂಕರ್ಯದಲ್ಲಿ ಕುಟುಂಬ ಸಮೇತರಾಗಿ ಭಾಗಿಯಾಗುತ್ತೇನೆ" ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ದೇಶದಲ್ಲಿ ರಾಮಮಂದಿರದ ಜೊತೆಗೆ ಬಿಸಿ ಬಿಸಿ ಚರ್ಚೆಯಾಗುತ್ತಿರುವುದು ಲೋಕಸಭಾ ಚುನಾವಣೆ. ಈ ವರ್ಷ ಸಾರ್ವರ್ತಿಕ ಚುನಾವಣೆ ನಡೆಯಲಿದ್ದು, ದೊಡ್ಡ ಎಲೆಕ್ಷನ್‌ಗೆ ಭಾರತ ಸಾಕ್ಷಿಯಾಗಲಿದೆ. ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಸರ್ಕಾರವಿದ್ದು, ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಕಾಂಗ್ರೆಸ್ ವಿರುದ್ಧ ಹೋರಾಟಲು ಸಜ್ಜಾಗಿವೆ. ಎರಡು ಪಕ್ಷಗಳು ಒಂದಾಗಿ ತಮ್ಮ ಸ್ಥಾನಗಳ್ನು ಉಳಿಸಿಕೊಳ್ಳಲು ಪಣ ತೊಟ್ಟಿವೆ. ಬಿಜೆಪಿ ಕೂಡ ತನ್ನ ಸ್ಥಾನಗಳನ್ನು ಉಳಿಸಿಕೊಲ್ಳಲು ಸಕತ್ ಪ್ಲ್ಯಾನ್ ಮಾಡುತ್ತಿದೆ. ಈಗೀರುವ ಸಂಸದರನ್ನೇ ಕಣಕ್ಕೆ ಇಳಿಸಬೇಕೋ ಅಥವಾ ಬೇರೆಯವರನ್ನು ಕಣಕ್ಕೆ ಇಳಿಸಬೇಕೋ ಎಂಬ ಲೆಕ್ಕಾಚಾರದಲ್ಲಿದೆ.

ಇದೆ ಬೆನ್ನಲ್ಲೇ ತಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, "ಲೋಕಸಭೆಗೆ ನಾನು ಸ್ಪರ್ಧಿಸುವುದಿಲ್ಲ.
ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಸಹ ನಾನಲ್ಲ. ಈಗಾಗಲೇ ಸಾಕಷ್ಟು ಬಾರಿ ಈ ಬಗ್ಗೆ ಹೇಳಿದ್ದೇನೆ. ಮಂಡ್ಯ ಜಿಲ್ಲೆಯಿಂದಲೂ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಅಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.


Click it and Unblock the Notifications











