For Quick Alerts
  ALLOW NOTIFICATIONS  
  For Daily Alerts

  ಶಿವರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಕಾದಿದೆ ಬಿಗ್ ಗಿಫ್ಟ್

  |

  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬ ಹತ್ತಿರ ಬರುತ್ತಿದೆ. ಅಭಿಮಾನಿಗಳ ಸಂಭ್ರಮಕ್ಕೆ ಇನ್ನೊಂದೆ ತಿಂಗಳು ಬಾಕಿಯಿದೆ. ಪ್ರತೀವರ್ಷ ಶಿವಣ್ಣ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಬ್ಬದ್ದಂತೆ ಆಚರಿಸುತ್ತಿದ್ದರು. ಆದರೆ ಈ ವರ್ಷ ಅದ್ದೂರಿ ಸಂಭ್ರಮ, ಆಚರಣೆಗೆ ಬ್ರೇಕ್ ಬಿದ್ದಿದೆ.

  ಮಗು ವಿಚಾರದಲ್ಲಿ ಚಿರು ಕಟ್ಟಿಕೊಂಡಿದ್ದ ಕನಸು ಎಂಥದ್ದು | Chiranjeevi Sarja | Meghana Raj

  ಕೊರೊನಾ ಹಾವಳಿಯ ಪರಿಣಾಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಾಧ್ಯವಿಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಈಗಾಗಲೆ ಸಂಭ್ರಮಿಸುತ್ತಿದ್ದಾರೆ. ಅಲ್ಲದೆ ಹ್ಯಾಟ್ರಿಕ್ ಹೀರೋ ಜನ್ಮದಿನದ ದಿನ ಏನೆಲ್ಲ ಉಡುಗೊರೆಗಳು ಸಿಗಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

  ಅಭಿಮಾನಿಗಳ ಆಸೆಯಂತೆ ಶಿವಣ್ಣ ಹುಟ್ಟುಹಬ್ಬಕ್ಕೆ ಭಜರಂಗಿ-2 ಸಿನಿಮಾದಿಂದ ಭರ್ಜರಿ ಗಿಫ್ಟ್ ಸಿಗುತ್ತಿದೆ. ಈಗಾಗಲೆ ಭಜರಂಗಿ-2 ಸಿನಿಮಾದಿಂದ ಫಸ್ಟ್ ಲುಕ್ ರಿಲೀಸ್ ಆಗಿದೆ. ಆದರೀಗ ಶಿವಣ್ಣ ಹುಟ್ಟುಹಬ್ಬಕ್ಕೆ ಚಿತ್ರದಿಂದ ವಿಶೇಷವಾದ ಉಡುಗೊರೆ ನೀಡಲು ಚಿತ್ರತಂಡ ಮುಂದಾಗಿದೆ. ಆದರೆ ಏನು ಎನ್ನುವುದನ್ನು ಬಹಿರಂಗ ಪಡಿಸಿಲ್ಲ.

  ಚಿತ್ರಕ್ಕೆ ಹರ್ಷ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಶಿವಣ್ಣ ಜೊತೆ ನಾಯಕಿಯಾಗಿ ಭಾವನಾ ಕಾಣಿಸಿಕೊಳ್ಳುತ್ತಿದ್ದಾರೆ. ಟಗರು ಸಿನಿಮಾದ ನಂತರ ಭಾವನಾ ಮತ್ತು ಶಿವಣ್ಣ ಎರಡನೇ ಬಾರಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ನಿರೀಕ್ಷೆ ಮೂಡಿಸಿರುವ ಸಿನಿಮಾದಿಂದ ಹುಟ್ಟುಹಬ್ಬಕ್ಕೆ ಯಾವ ಉಡುಗೊರೆ ಸಿಗಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

  English summary
  Bajrangi-2 film team will ready to give special Birthday gift for Shivarajkumar fans.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X