'ಬಾಲಾಜಿ ಫೋಟೋ ಸ್ಟುಡಿಯೋ' ತೆರೆಗೆ ಬರುತ್ತಿದೆ ಫೋಟೋಗ್ರಾಫರ್‌ಗಳ ಜೀವನ ಕುರಿತಾದ ಸಿನಿಮಾ

By ದಾವಣಗೆರೆ ಪ್ರತಿನಿಧಿ

ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಸಿನಿಮಾ ಜನವರಿ 6ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದ್ದು, ಸುಮಾರು 100 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ಚಿತ್ರ ಛಾಯಾಗ್ರಾಹಕರ ಬದುಕಿನ ಬಗ್ಗೆ ಬೆಳಕು ಚೆಲ್ಲುವ ಕಥಾ ಹಂದರ ಹೊಂದಿರುವ ಸಿನಿಮಾ. ಹಾಸ್ಯದ ಜೊತೆಗೆ ಕೌಟುಂಬಿಕ ವಿಚಾರಗಳೂ ಈ ಚಿತ್ರದಲ್ಲಿವೆ ಎಂದು ಚಿತ್ರದ ನಿರ್ದೇಶಕ, ನಟ, ಅಗ್ನಿ ನಕ್ಷತ್ರ ಧಾರಾವಾಹಿ ಖ್ಯಾತಿಯ ರಾಜೇಶ್ ಧ್ರುವ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೋಟೋಗ್ರಾಫರ್ ಗಳ ಕಾಯಕ, ನೋವು, ಅವರದೇ ಆದ ವ್ಯಥೆಗಳ ಕುರಿತು ಈ ಚಿತ್ರದಲ್ಲಿ ತೆರೆದಿಡಲಾಗಿದೆ. ಹಳ್ಳಿಯಲ್ಲಿ ಇದ್ದರೆ ಜೀವನದಲ್ಲಿ ಮುಂದೆ ಬರಲು ಆಗದು. ಅದೇ ನಗರಕ್ಕೆ ಹೋದರೆ ಕೈತುಂಬಾ ಹಣ ದುಡಿಯಬಹುದು. ಉತ್ತಮ ಸಾಧನೆ ಮಾಡಬಹುದು ಎಂಬ ಕನಸು ಹೊತ್ತ ಫೋಟೋಗ್ರಾಫರ್ ಕುರಿತಾದ ಸಿನಿಮಾ. ಆತ ಕೊನೆಗೆ ಬದುಕಿನ ಯುದ್ಧದಲ್ಲಿ ಗೆಲ್ಲುತ್ತಾನೋ ಅಥವಾ ಸೋಲುತ್ತಾನೋ ಎಂಬುದು ಸಸ್ಪೆನ್ಸ್ ಎಂದು ಹೇಳಿದರು.

ಹೊಸ ವರ್ಷದಲ್ಲಿ ತೆರೆ ಕಾಣುತ್ತಿರುವ ಈ ಸಿನಿಮಾದಲ್ಲಿ ನಟಿಸಿರುವವರೆಲ್ಲರೂ ಹೊಸ ಕಲಾವಿದರೇ. ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದ್ದು, ಉತ್ತರ ಕನ್ನಡ ಭಾಷೆಯನ್ನು ಮೊದಲ ಬಾರಿಗೆ ಬಳಸಿಕೊಳ್ಳಲಾಗಿದೆ. ಚಿತ್ರದ 'ಪುಕ್ಸಟ್ಟೆ' ಹಾಡು ಈಗಾಗಲೇ ಟ್ರೆಂಡ್ ಸೃಷ್ಟಿಸಿದೆ. ಚಿತ್ರದಲ್ಲಿ 5 ಹಾಡುಗಳಿದ್ದು, ಸಂಗೀತ ನಿರ್ದೇಶನ ಶ್ರೀರಾಮ್ ಗಂಧರ್ವ ಅವರದ್ದು. ಹಾಡುಗಳಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ ಎಂದರು.

Balaji Photo Studio Is A Movie About Photographers Life

ತಾರಾಗಣದಲ್ಲಿ ಪ್ರಮುಖ ಪಾತ್ರದಲ್ಲಿ ಸಂಪತ್ ಜಯರಾಮ್, ರವಿ ಸಾಲಿಯಾನ್, ರಾಧಿಕಾ ಅಚ್ಯುತ್ ರಾವ್, ಶುಭಲಕ್ಷ್ಮೀ ಸೇರಿದದಂತೆ ಇತರರಿದ್ದಾರೆ. ದಾವಣಗೆರೆ ಸಿನಿ ಸ್ಟುಡಿಯೋದ ಮನೋಜ್ ಛಾಯಾಗ್ರಹಣದ ಹೊಣೆ ಹೊತ್ತಿದ್ದಾರೆ. ಸಿನಿಮಾ ವೀಕ್ಷಿಸುವ ಮೂಲಕ ಹೊಸಬರಿಗೆ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿದರು.

ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸಂಪತ್ ಜಯರಾಂ ಮಾತನಾಡಿ, ಹೊಸ ವರ್ಷಕ್ಕೆ ಹೊಸ ತಂಡದೊಂದಿಗೆ ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ತೆರೆಕಾಣುತ್ತಿದೆ. ಎಲ್ಲರೂ ಚಿತ್ರ ವೀಕ್ಷಿಸಿ ಹರಿಸಿ, ಹಾರೈಸಿ ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ, ನಟರಾದ ರವಿ ಸಾಲಿಯಾನ್, ಶರತ್, ದಾವಣಗೆರೆ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ಹೆಚ್. ಕೆ. ಸಿ. ರಾಜು, ಪ್ರಧಾನ ಕಾರ್ಯದರ್ಶಿ ವಿಜಯ್ ಜಾಧವ್, ಪದಾಧಿಕಾರಿಗಳಾದ ತಿಪ್ಪೇಶಿ, ಶಶಿ, ನವೀನ್ ಮತ್ತಿತರರು ಹಾಜರಿದ್ದರು.

More from Filmibeat

English summary
Balaji Photo studio is a movie is about photographers life. This is a Kannada movie and movie is releasing on January 06.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X