For Quick Alerts
  ALLOW NOTIFICATIONS  
  For Daily Alerts

  ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಮಾಡಿದ ಭಾಮ ಹರೀಶ್, ಜೆಕೆ

  |

  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಕಾರ್ಯದರ್ಶಿ, ಖ್ಯಾತ ನಿರ್ಮಾಪಕ ಭಾ.ಮ ಹರೀಶ್ ಇಂದು (ಮೇ 19) ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.

  ಕೊರೊನಾದಿಂದ ಸಂಕಷ್ಟಕ್ಕೀಡಾಗಿರುವ ಕನ್ನಡ ಚಿತ್ರೋದ್ಯಮದ ಸದಸ್ಯರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜನ್ನು ಘೋಷಿಸಿ, ಅವರಿಗೆ ಹಾಗೂ ಅವರ ಕುಟುಂಬದವರಿಗೆ ನೆರವು ನೀಡಬೇಕೆಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಿತ್ರನಟರಾದ ಕಾರ್ತಿಕ್ ಜಯರಾಂ ಹಾಗೂ ನಿರ್ಮಾಪಕ, ನಿರ್ದೇಶಕರಾದ ಆಸ್ಕರ್ ಕೃಷ್ಣ ಉಪಸ್ಥಿತರಿದ್ದರು.

  ಚಿತ್ರರಂಗದವರಿಗೆ ಕೋವಿಡ್ ಲಸಿಕೆ ಒದಗಿಸಲು ಕೆಎಫ್‌ಸಿಸಿ ನಿಯೋಗದ ಮನವಿಚಿತ್ರರಂಗದವರಿಗೆ ಕೋವಿಡ್ ಲಸಿಕೆ ಒದಗಿಸಲು ಕೆಎಫ್‌ಸಿಸಿ ನಿಯೋಗದ ಮನವಿ

  ಇದಕ್ಕೂ ಮುಂಚೆಯೇ ಕಲಾವಿದರಿಗೆ ನೆರವು ನೀಡುವುದರ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಅದರಂತೆ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ ಕಲಾವಿದರಿಗೆ ಹಾಗೂ ಕಲಾತಂಡಗಳಿಗೆ ತಲಾ 3 ಸಾವಿರ ರೂಪಾಯಿ ನೀಡುವುದಾಗಿ ಪ್ರಕಟಿಸಿದರು.

  ಇತ್ತೀಚಿಗಷ್ಟೆ ಭಾಮ ಹರೀಶ್ ಅವರು ಕನ್ನಡ ಚಲನಚಿತ್ರ ಕಲಾವಿದರ ಕಟ್ಟಡ, ಕಂಠೀರವ ಸ್ಟುಡಿಯೋ ಹಾಗೂ ಬಿಗ್ ಬಾಸ್ ಮನೆಯಲ್ಲಿ ಕೋವಿಡ್ ಕೇಂದ್ರಗಳಾಗಿ ಪರಿವರ್ತಿಸಿ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.

  ಮತ್ತೊಂದೆಡೆ ಸಾರಾ ಗೋವಿಂದು, ವಾಣಿಜ್ಯ ಮಂಡಳಿ ಉಪಾಧ್ಯಕ್ಷ ನಾಗಣ್ಣ ಅವರ ನಿಯೋಗ ಸಚಿವ ಡಾ ಸುಧಾಕರ್ ಅವರನ್ನು ಭೇಟಿ ಮಾಡಿದ್ದರು. ಚಿತ್ರರಂಗದವರಿಗಾಗಿ ಕೋವಿಡ್ ಲಸಿಕೆ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದ್ದರು.

  English summary
  Bama Harish and Karthik Jayaram has Meet CM Yediyurappa and Request Special Package for Film Industry.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X