twitter
    For Quick Alerts
    ALLOW NOTIFICATIONS  
    For Daily Alerts

    ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ, ಕಾರಣವೇನು?

    |

    13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸೋವ ಈ ತಿಂಗಳ ಅಂತ್ಯದಲ್ಲಿ ನಡೆಯಬೇಕಿತ್ತು. ಅದಕ್ಕೆ ಅಗತ್ಯವಾದ ಎಲ್ಲ ತಯಾರಿಗಳು ನಡೆದಿದ್ದವು. ಆದ್ರೀಗ, ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಚಿತ್ರೋತ್ಸವವನ್ನು ಮುಂದೂಡುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

    ಸರ್ಕಾರದ ಅಧಿಸೂಚನೆಯಂತೆ ಮಾರ್ಚ್ 24 ರಿಂದ ಮಾರ್ಚ್ 31ರವರೆಗೂ ನಿಗದಿಯಾಗಿದ್ದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸೋವವನ್ನು ಕರ್ನಾಟಕದ ಚಲನಚಿತ್ರ ಅಕಾಡೆಮಿ ಮುಂದೂಡಿದೆ.

    ಸಿನಿಪ್ರಿಯರಿಗೆ ಸಿಹಿ ಸುದ್ದಿ: ಮಾರ್ಚ್ 24ರಿಂದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಸಿನಿಪ್ರಿಯರಿಗೆ ಸಿಹಿ ಸುದ್ದಿ: ಮಾರ್ಚ್ 24ರಿಂದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

    'ಕರ್ನಾಟಕ ಸರ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಂಘಟಿಸುತ್ತಿರುವ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸೋವ ಮಾರ್ಚ್ 24 ರಿಂದ ಮಾರ್ಚ್ 31ರವರೆಗೂ ನಡೆಯಬೇಕಿತ್ತು. ಅದರ ಕುರಿತಾಗಿ ಸಕಲ ಸಿದ್ಧತೆಗಳು ಎಲ್ಲಾ ಹಂತದಲ್ಲೂ ಭರದಿಂದ ಸಾಗಿತ್ತು. ಆದರೆ, ಕೆಲವು ದಿನಗಳಿಂದ ಕೊರೊನಾ ಸೋಂಕು ಹೆಚ್ಚುತ್ತಲೇ ಇದ್ದು, ತಕ್ಷಣವೇ ಸರಿಯಾದ ಕ್ರಮ ಕೈಗೊಳ್ಳದೇ ಇದ್ದರೆ ರಾಜ್ಯದಲ್ಲಿ ಕೊವಿಡ್ ಪರಿಸ್ಥಿತಿ ಕೈ ಮೀರುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಈ ಕುರಿತಂತೆ, ಕೊವಿಡ್ ನಿಯಮಗಳನ್ನು ಅನುಸರಿಸುವ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಗೆ, ಚಲನಚಿತ್ರೋತ್ಸವ ಸಂಘಟಿಸುವ ಕುರಿತು, ಸಲಹೆ ಮತ್ತು ಮಾರ್ಗದರ್ಶನಕ್ಕಾಗಿ ಪತ್ರ ಬರೆಯಲಾಗಿತ್ತು. ಅವರ ಸೂಚನಾ ಅನ್ವಯ, ಹೆಚ್ಚುತ್ತಿರುವ ಕೊವಿಡ್ ಸೋಂಕು ದಿನದಿಂದ ದಿನಕ್ಕೆ ಆತಂಕಕ್ಕೆ ಕಾರಣವಾಗಿದ್ದು, ಈ ಚಲನಚಿತ್ರೋತ್ಸವವನ್ನು ನಡೆಸಲು ಸೂಕ್ತವಾದ ವಾತಾವರಣವಿಲ್ಲವೆಂದು, ಈ ಕೂಡಲೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಅನಿರ್ಧಿಷ್ಟಾವಧಿಗೆ, ಮುಂದೂಡಲು ಸೂಚಿಸಿದ್ದಾರೆ' ಎಂದು ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತಿಳಿಸಿದ್ದಾರೆ.

    Bangalore international film festival 2021 postponed

    ವಿಶ್ವದ ಖ್ಯಾತ ಚಿತ್ರೋತ್ಸವಗಳಲ್ಲಿ ಬೆಂಗಳೂರು ಚಲನಚಿತ್ರೋತ್ಸವವೂ ಒಂದಾಗಿದ್ದು, ಸುಮಾರು 50 ದೇಶದಿಂದ ಪ್ರತಿನಿಧಿಗಳು ಆಗಮಿಸುವ ನಿರೀಕ್ಷೆ ಇತ್ತು. 200ಕ್ಕೂ ಅಧಿಕ ಚಿತ್ರಗಳು ಈ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿತ್ತು.

    ಹೆಚ್ಚಿನ ಸಂಖ್ಯೆಯಲ್ಲಿ ಜನರು ಹಾಗೂ ಅಂತಾರಾಷ್ಟ್ರೀಯ ಅತಿಥಿಗಳು ಭಾಗವಹಿಸುವುದರಿಂದ ಮುಂಜಾಗ್ರತೆಯ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವೂ ಅಧಿಸೂಚನೆಯಲ್ಲಿ ತಿಳಿಸಿದೆ.

    Recommended Video

    ಇದು ಕಿಚ್ಚನ ಮೇಲೆ ಕರ್ನಾಟಕ ಇಟ್ಟಿರೊ ಪ್ರೀತಿ | Kichcha Sudeep Silver Jubilee Celebration|Filmibeat Kannada

    ಅಂದ್ಹಾಗೆ, ಫೆಬ್ರವರಿ 19 ರಂದು 13ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿದ್ದನ್ನು ಸ್ಮರಿಸಬಹುದು. ಸದ್ಯಕ್ಕೆ ಮುಂದಿನ ದಿನಾಂಕದ ಬಗ್ಗೆ ಸ್ಪಷ್ಟತೆ ಇಲ್ಲ. ಮುಂದಿನ ಪರಿಸ್ಥಿತಿ ಮತ್ತು ಬೆಳವಣಿಗೆಯ ನಿರ್ಧರಿಸಿ ತೀರ್ಮಾನ ಕೈಗೊಳ್ಳಲಾಗುವುದು.

    English summary
    Bangalore international film festival 2021 postponed due to coronavirus case increase.
    Monday, March 15, 2021, 20:03
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X