ದುನಿಯಾ ವಿಜಯ್ ಮನೆಗೆ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ನಟ ದುನಿಯಾ ವಿಜಯ್ ಅವರನ್ನು ಭೇಟಿ ಮಾಡಿದ್ದು, ಸಲಗ ಚಿತ್ರವನ್ನ ನೋಡಲು ಕುತೂಹಲ ವ್ಯಕ್ತಪಡಿಸಿದ್ದಾರೆ.

Recommended Video

ದುನಿಯಾ ವಿಜಯ್ ಮನೆಗೆ ಭೇಟಿ ನೀಡಿದ ತೇಜಸ್ವಿ ಸೂರ್ಯ | Filmibeat Kannada

ಇತ್ತೀಚಿಗಷ್ಟೆ ದುನಿಯಾ ವಿಜಯ್ ಅವರ ಮನೆಗೆ ಭೇಟಿ ನೀಡಿದ್ದ ತೇಜಸ್ವಿ ಸೂರ್ಯ 'ವಿಜಿ ಅವರ ಚೊಚ್ಚಲ ನಿರ್ದೇಶನದ ಸಲಗ ಚಿತ್ರಕ್ಕೆ ಒಳ್ಳೆಯದಾಗಲಿ'' ಎಂದು ಶುಭಹಾರೈಸಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ವಿವಿಧ ಕಡೆ ತೇಜಸ್ವಿ ಸೂರ್ಯ ಭೇಟಿ ನೀಡಿದ ಸಂದರ್ಭದಲ್ಲಿ ನಟ ದುನಿಯಾ ವಿಜಯ್ ಅವರ ಮನೆಗೆ ಸಹಜವಾಗಿ ತೆರಳಿದ್ದರು. ನಿರ್ಮಾಪಕ ಕೆ.ಪಿ ಶ್ರೀಕಾಂತ್ ಅವರ ಜೊತೆ ತೇಜಸ್ವಿ ಸೂರ್ಯ ಬಹಳ‌ ಆತ್ಮೀಯ ಒಡನಾಟ ಹೊಂದಿರುವ ಕಾರಣ ಹಾಗೆ ವಿಜಯ್ ಅವರ ಮನೆಗೆ ಭೇಟಿ ನೀಡಿದರು.

Bangalore south mp tejasvi surya visit to Duniya vijay home

ಈ ವೇಳೆ ದುನಿಯಾ ವಿಜಯ್ ಅವರು ನಟಿಸಿ, ನಿರ್ದೇಶನ ಮಾಡಿರುವ ಸಲಗ ಸಿನಿಮಾದ ಬಗ್ಗೆ ಚರ್ಚಿಸಿದ್ದಾರೆ. ಸಲಗ ಸಿನಿಮಾದ ಹಾಡು, ಟ್ರೈಲರ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿನಿಮಾಗೂ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

ಸಲಗ ಚಿತ್ರಕ್ಕೆ ಕೆಪಿ ಶ್ರೀಕಾಂತ್ ಬಂಡವಾಳ ಹಾಕಿದ್ದಾರೆ. ದುನಿಯಾ ವಿಜಯ್ ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿದ್ದು, ಜೊತೆಗೆ ನಾಯಕನಟನಾಗಿ ಅಭಿನಯಿಸಿದ್ದಾರೆ.

ಸಲಗ ಚಿತ್ರದಲ್ಲಿ ಧನಂಜಯ್, ಸಂಜನಾ ಆನಂದ್ ಸಹ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನವಿದ್ದು, ಈಗಾಗಲೇ ಹಾಡುಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ.

ಏಪ್ರಿಲ್ 15 ರಂದು ಸಲಗ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ.

More from Filmibeat

English summary
Recently, Bangalore south mp tejasvi surya visit to kannada actor Duniya vijay home.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X