For Quick Alerts
  ALLOW NOTIFICATIONS  
  For Daily Alerts

  ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

  |

  ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರಕ್ಕೆ ಅಮೆರಿಕದ ಅಟ್ಲಾಂಟದಲ್ಲಿ ನಡೆದ 'ಅಟ್ಲಾಂಟ ಪ್ರಶಸ್ತಿ ಅರ್ಹತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಪಡೆದಿದೆ.

  ಅಮೃತಮತಿ ಈಗಾಗಲೇ 5 ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ. ನೋಯ್ಡಾದ 4ನೇ ಭಾರತೀಯ ವಿಶ್ವ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು. ಈ ಚಲನಚಿತ್ರೋತ್ಸವದಲ್ಲಿ ಅಮೃತಮತಿ ಪಾತ್ರಧಾರಿ ಹರಿಪ್ರಿಯ ಶ್ರೇಷ್ಠನಟಿ ಪ್ರಶಸ್ತಿಗೆ ಭಾಜನರಾಗಿದ್ದರು.

  ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ 'ಅಮೃತಮತಿ' ಆಯ್ಕೆ

  ಅಮೃತಮತಿ ಸಿನಿಮಾ 13ನೇ ಶತಮಾನದ ಜನ್ನ ಕವಿಯ ಯಶೋಧರ ಚರಿತೆನ್ನು ಆಧರಿಸಿ ಮಾಡಿರುವ ಸಿನಿಮಾವಾಗಿದೆ. ಯಶೋಧರನ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಇನ್ನೂ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ತಿಲಕ್, ಸುಪ್ರಿಯಾ ರಾವ್, ಸೇರಿದಂತೆ ಅನೇಕರು ಬಣ್ಣಹಚ್ಚಿದ್ದಾರೆ. ಚಿತ್ರಕ್ಕೆ ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮಾಡಿದ್ದಾರೆ.

  ಪೊಗರು, ರಾಬರ್ಟ್ ಬಗ್ಗೆ ಮಾತನಾಡಿದ ಪುನೀತ್ ರಾಜ್ ಕುಮಾರ್ | Filmibeat Kannada

  ಈ ಚಿತ್ರವು ಮಾರ್ಚ್ ಮೊದಲ ವಾರದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಮುಂಬೈ ಮೂಲದ ಸಿಎಆರ್ ಯು ಎಂಟರ್ ಪ್ರೈಸಸ್ ಸಂಸ್ಥೆ ಈಚಿತ್ರದ ಪ್ರದರ್ಶನದ ಹಕ್ಕು ಪಡೆದಿದೆ. ಚಿತ್ರಮಂದಿರ ಮಾತ್ರವಲ್ಲದೆ ಈ ಸಿನಿಮಾ ಒಟಿಟಿಯಲ್ಲೂ ರಿಲೀಸ್ ಆಗುವ ಸಾಧ್ಯತೆ ಇದೆ.

  Read more about: baraguru ramachandrappa
  English summary
  Amruthamathi won international award amongst the best foreign language film in atlanta award qualifying international film festival.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X