TRENDING ON ONEINDIA
-
ಪುಲ್ವಾಮಾ ದಾಳಿ: ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಭದ್ರತಾ ಸಭೆ
-
ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್ಯುವಿ300
-
ಕಡಿಮೆ ಮೆಮೊರಿ ಮತ್ತು ರ್ಯಾಮ್ ಇರುವ ಫೋನನ್ನು ಖರೀದಿಸಲೇಬಾರದು ಏಕೆ?
-
ಡಾಲಿ ಫಸ್ಟ್ ಲುಕ್: ಮತ್ತೆ ನಟರಾಕ್ಷಸನ ಆಗಮನ
-
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ: ತಿಂಗಳಿಗೆ 3000 ಪಿಂಚಣಿ
-
ಪುರುಷರಲ್ಲಿ ಫಲವತ್ತತೆ ಹೆಚ್ಚಿಸಲು ಕೆಲವು ಸಲಹೆಗಳು
-
ಐಸಿಸಿ ವಿಶ್ವಕಪ್ ಕ್ರಿಕೆಟ್ 2019 ವೇಳಾಪಟ್ಟಿ ಪ್ರಕಟ
-
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಹಾಕಿ
'ನಟ ಸಾರ್ವಭೌಮ' ಪೋಸ್ಟರ್ ಗೆ ಬಿಯರ್ ಅಭಿಷೇಕ: ಪುನೀತ್ ಏನಂತಾರೆ.?

ನೆಚ್ಚಿನ ನಟನ ಚಿತ್ರ ಬಿಡುಗಡೆಯಾದಾಗ, ಆ ಚಿತ್ರದ ಪೋಸ್ಟರ್ ಗೆ ಬೃಹತ್ ಹೂವಿನ ಹಾರ ಹಾಕುವುದು, ಹೂವಿನ ಅಭಿಷೇಕ ಮಾಡುವುದು, ಹಾಲಿನ ಅಭಿಷೇಕ ಮಾಡುವುದು ಕಾಮನ್. ಆದ್ರೆ, ಅಪ್ಪು ಅಭಿಮಾನಿಯೊಬ್ಬ ಎಲ್ಲಕ್ಕಿಂತ ಒಂದು ಹೆಜ್ಜೆ ಮುಂದಕ್ಕೆ ಹೋಗಿ 'ನಟ ಸಾರ್ವಭೌಮ'ನ ಪೋಸ್ಟರ್ ಗೆ ಬಿಯರ್ ಅಭಿಷೇಕ ಮಾಡಿದ್ದ.
ಹೌದು, ಫೆಬ್ರವರಿ 7 ರಂದು ಗ್ರ್ಯಾಂಡ್ ರಿಲೀಸ್ ಆದ 'ನಟ ಸಾರ್ವಭೌಮ' ಚಿತ್ರದ ಪೋಸ್ಟರ್ ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಫ್ಯಾನ್ ಬಿಯರ್ ಅಭಿಷೇಕ ಮಾಡಿದ್ದ. ಅದು ಮೆಜೆಸ್ಟಿಕ್ ನ ತ್ರಿವೇಣಿ ಚಿತ್ರಮಂದಿರದಲ್ಲೇ.!
ನಟಸಾರ್ವಭೌಮನ ಪೋಸ್ಟರ್ ಗೆ ಬಿಯರ್ ಅಭಿಷೇಕ
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಪುನೀತ್ ರಾಜ್ ಕುಮಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
''ಬಿಯರ್ ಅಭಿಷೇಕ ಮಾಡುವುದು ಬೇಡ. ಸಿನಿಮಾದಲ್ಲಿ ನಾವು ಏನೇನೋ ಮಾಡುತ್ತೇವೆ. ಅದನ್ನೆಲ್ಲ ನಿಜ ಜೀವನದಲ್ಲಿ ಮಾಡಲು ಸಾಧ್ಯವೇ.? ಸಮಾಜಕ್ಕೆ ನೀಡುವ ಒಳ್ಳೆಯ ಸಂದೇಶಗಳನ್ನು ಮಾತ್ರ ಸ್ವೀಕರಿಸಿ'' ಎಂದು ತಮ್ಮ ಅಭಿಮಾನಿಗಳಲ್ಲಿ ಪುನೀತ್ ರಾಜ್ ಕುಮಾರ್ ಮನವಿ ಮಾಡಿದ್ದಾರೆ.
Nata Sarvabhouma Review : ಅಪ್ಪು ಪವರ್ ಫುಲ್.. ಸಿನಿಮಾ ಸಕ್ಸಸ್ ಫುಲ್..
ಅಂದ್ಹಾಗೆ, ಪುನೀತ್ ರಾಜ್ ಕುಮಾರ್, ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸರೋಜ ದೇವಿ, ಚಿಕ್ಕಣ್ಣ, ರವಿಶಂಕರ್ ಅಭಿನಯದ ಪವನ್ ಒಡೆಯರ್ ನಿರ್ದೇಶನದ 'ನಟ ಸಾರ್ವಭೌಮ' ಚಿತ್ರ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ.