ತಿರುಪತಿಯಲ್ಲಿ ಮುಡಿಕೊಟ್ಟ ಶಿವಣ್ಣ-ಗೀತಾ ಶಿವರಾಜ್‌ಕುಮಾರ್; ಚಿಕಿತ್ಸೆಗೆ ಅಮೆರಿಕಗೆ ತೆರಳುವುದು ಯಾವಾಗ?

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟಿಸಿದ 'ಭೈರತಿ ರಣಗಲ್' ಸಿನಿಮಾ ಗೆಲ್ಲುವು ಕಂಡಿದೆ. ಈ ವರ್ಷ ಶಿವಣ್ಣನ ಹಿಟ್ ಸಿನಿಮಾ ದಾಖಲಿಸಿದ್ದಾರೆ. ಇದೇ ವೇಳೆ ತಮ್ಮ ಅನಾರೋಗ್ಯದ ಕಡೆಗೆ ಹೆಚ್ಚು ಗಮನ ಕೊಟ್ಟಿದೆ. ಈ ಹಿಂದೆನೇ ತಮ್ಮ ಆರೋಗ್ಯ ಸರಿಯಿಲ್ಲ ಎಂದು ಸ್ವತ: ಶಿವಣ್ಣನೇ ಹೇಳಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಸೆಂಚುರಿ ಸ್ಟಾರ್ ಇದೇ ತಿಂಗಳು ಅಮೆರಿಕಗೆ ತೆರಳುತ್ತಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಬೆಂಗಳೂರಿನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಆಗಬೇಕಿದೆ. ಆ ಬಳಿಕ ಒಂದು ತಿಂಗಳು ವಿಶ್ರಾಂತಿ ಪಡೆದು ನಂತರ ಮತ್ತೆ ಸಿನಿಮಾಗಳಿಗೆ ಮರಳುವುದಾಗಿ ಶಿವರಾಜ್‌ಕುಮಾರ್ ಹಲವು ಸಂದರ್ಶನಗಳಲ್ಲಿ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಅದಕ್ಕೂ ಮುನ್ನ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

Before leaving for America for treatment Shivarajkumar visited the Tirupati temple with family

ಶಿವರಾಜ್‌ಕುಮಾರ್ ತಮ್ಮ ಪತ್ನಿ ಗೀತಾ, ಮಗಳು ಹಾಗೂ ಚಿತ್ರರಂಗದ ಆಪ್ತರೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಮುಡಿಕೊಟ್ಟಿದ್ದಾರೆ. ಶಿವಣ್ಣನ ಜೊತೆ ಗೀತಾ ಶಿವರಾಜ್‌ಕುಮಾರ್ ಕೂಡ ಮುಡಿಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಓಡಾಡುತ್ತಿವೆ.

ಶಿವಣ್ಣನ ಕುಟುಂಬದ ಜೊತೆ ಕನ್ನಡ ಚಿತ್ರರಂಗದ ಆಪ್ತರು ಕೂಡ ತಿರುಪತಿ ದರ್ಶನ ಮಾಡಿದ್ದಾರೆ. ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಸೇರಿದಂತೆ ಆಪ್ತರು ವಿಸಿಟ್ ಹಾಕಿದ್ದಾರೆ. ಈ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಅಭಿಮಾನಿಗಳು ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸುತ್ತಿದ್ದಾರೆ. ಮತ್ತೆ ಇನ್ನು ಕೆಲವರು ತಿರುಪತಿ ತಿಮ್ಮಪ್ಪನ ಆಶೀರ್ವಾದ ನಿಮ್ಮ ಮೇಲೆ ಇರಲಿ ಎಂದು ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.

ಸದ್ಯ ಶಿವಣ್ಣ ತಾವು ಒಪ್ಪಿಕೊಂಡಿರುವ ಒಂದೊಂದೇ ಕಮಿಟ್ಮೆಂಟ್‌ಗಳನ್ನು ಮುಗಿಸಿದ್ದಾರೆ. ಈಗಾಗಲೇ ಗೀತಾ ಪಿಕ್ಚರ್ಸ್ ಹೋಮ್ ಬ್ಯಾನರ್‌ನಲ್ಲಿ ನಿರ್ಮಾಣಗೊಂಡಿದ್ದ 'ಭೈರತಿ ರಣಗಲ್' ರಿಲೀಸ್ ಆಗಿ ಯಶಸ್ವಿಯಾಗಿದೆ. ಇದರ ಜೊತೆಗೆ ಅವರದ್ದೇ ಹೋಮ್‌ ಬ್ಯಾನರ್‌ನಲ್ಲಿ ಮತ್ತೊಂದು ಸಿನಿಮಾ ನಿರ್ಮಾಣ ಆಗುತ್ತಿದೆ. 'ಘೋಸ್ಟ್' ಸಿನಿಮಾದ ನಿರ್ದೇಶಕ ಶ್ರೀನಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

Before leaving for America for treatment Shivarajkumar visited the Tirupati temple with family

ಈಗಾಗಲೇ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ '45' ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಸದ್ಯ ಈ ಸಿನಿಮಾವೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಅರ್ಜುನ್ ಜನ್ಯ ಇತ್ತೀಚೆಗೆ ವಿಎಫ್‌ಎಕ್ಸ್ ಮಾಡಿಸುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದರು. ಈ ಸಿನಿಮಾದಲ್ಲಿ ಶಿವಣ್ಣನ ಜೊತೆ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಇನ್ನು ಚಿಕಿತ್ಸೆಗೆಂದು ಅಮೆರಿಕಗೆ ತೆರಳುತ್ತಿರುವ ಶಿವಣ್ಣ ಅಲ್ಲೇ ಒಂದು ತಿಂಗಳು ಇರಲಿದ್ದಾರೆ. ಬಳಿಕ ಬೆಂಗಳೂರಿಗೆ ಹಿಂತಿರುಗಿ ವಿಶ್ರಾಂತಿ ಪಡೆಯುತ್ತಾರೆ. ಅದಾದ ಬಳಿಕ ಸಿನಿಮಾಗಳಲ್ಲಿ ಮತ್ತೆ ಭಾಗಿಯಾಗಲಿದ್ದಾರೆ. ಚಿಕಿತ್ಸೆ ಮುಗಿಸಿ ಬಂದ ಬಳಿಕ ಶಿವಣ್ಣ ಸೀದಾ ರಾಮ್‌ ಚರಣ್ ಸಿನಿಮಾ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆನಂತರ ಹೋಮ್ ಬ್ಯಾನರ್ ಸಿನಿಮಾದಲ್ಲಿ ನಟಿಸುವ ಸಾಧ್ಯತೆಯಿದೆ. ಶಿವಣ್ಣ ಆದಷ್ಟು ಬೇಗ ಸಂಪೂರ್ಣವಾಗಿ ಗುಣಮುಖರಾಗಿ ಬರಲಿ ಎಂದು ಅವರ ಅಭಿಮಾನಿಗಳು ಕೂಡ ಹಾರೈಸುತ್ತಿದ್ದಾರೆ.

More from Filmibeat

English summary
Before leaving for America for treatment due to health issue Shivarajkumar visited the Tirupati temple;
Read more about: shivarajkumar health tirupati
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X