For Quick Alerts
  ALLOW NOTIFICATIONS  
  For Daily Alerts

  ಹುತಾತ್ಮ ಯೋಧ ಗುರು ಕುಟುಂಬಕ್ಕೆ ಧನ ಸಹಾಯ ಮಾಡಿದ 'ಬೆಲ್ ಬಾಟಂ' ತಂಡ

  |

  ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯನ್ನ ಹುತಾತ್ಮರಾದ ಕರ್ನಾಟದ ಮೂಲದ ಯೋಧ ಗುರು ಅವರ ಕುಟುಂಬಕ್ಕೆ ಬೆಲ್ ಬಾಟಮ್ ಚಿತ್ರತಂಡ ನೆರವಾಗಿದೆ.

  ಇಂದು ಗುರು ಅವರ ಸಮಾಧಿ ಬಳಿ ಭೇಟಿ ನೀಡಿದ ಬೆಲ್ ಬಾಟಮ್ ಚಿತ್ರದ ನಾಯಕ ರಿಷಬ್ ಶೆಟ್ಟಿ, ನಾಯಕಿ ಹರಿಪ್ರಿಯಾ ಹಾಗೂ ನಿರ್ಮಾಪಕ ಸಂತೋಷ್ ಕುಮಾರ್, ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

  'ಮೋದಿ ಸರ್ಕಾರ ನಂಬಲ್ಲ' ಎಂದ ಹುತಾತ್ಮ ಯೋಧನ ದುಃಖತಪ್ತ ಪತ್ನಿ

  ಬಳಿಕ ಗುರು ಅವರ ಮನೆಗೆ ಭೇಟಿ ನೀಡಿದ ಚಿತ್ರತಂಡ ಯೋಧನ ಪತ್ನಿ ಮತ್ತು ತಂದೆ ತಾಯಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಬೆಲ್ ಬಾಟಮ್ ಚಿತ್ರತಂಡದಿಂದ 50 ಸಾವಿರ ಹಾಗೂ ನಟ, ನಿರ್ದೇಶಕ ರಿಷಬ್ ಶೆಟ್ಟಿ ವೈಯಕ್ತಿಕವಾಗಿ 25 ಸಾವಿರ ಚೆಕ್ ನೀಡಿ ಮಾನವೀಯತೆ ಮೆರೆದಿದ್ದಾರೆ.

  ನಾನೂ ಸೇನೆಗೆ ಸೇರಿ ಉಗ್ರರ ರುಂಡ ಚೆಂಡಾಡುತ್ತೇನೆ:ಹುತಾತ್ಮ ಗುರು ಪತ್ನಿ ಕಲಾವತಿ

  ಬಳಿಕ ಮಾತನಾಡಿದ ಹರಿಪ್ರಿಯಾ ''ಹುತಾತ್ಮ ಯೋಧ ಗುರು ಮನೆಯವರ ದುಃಖ ನೋಡಿ, ತಂದೆಯ ಸಾವನ್ನು ನೆನೆಪಿಸಿಕೊಂಡು ಹರಿಪ್ರಿಯಾ ಕಣ್ಣೀರು ಹಾಕಿದ್ದಾರೆ. ಒಂದು ಕುಟುಂಬದಲ್ಲಿ ಯಾರನ್ನೇ ಕಳೆದುಕೊಂಡರು ನೋವಾಗುತ್ತದೆ. ಆ ನೋವು ನಮ್ಮ ತಂದೆಯನ್ನು ಕಳೆದುಕೊಂಡಾಗ ನನಗೆ ಆಗಿದೆ. ಆದರೆ ಯೋಧ ಗುರು ಅವರ ಪತ್ನಿ, ತಾಯಿ ನೋಡಿದರೆ ತುಂಬಾ ನೋವಾಗುತ್ತದೆ''

  ಹುತಾತ್ಮ ಯೋಧ ಗುರು ಕುಟುಂಬದಲ್ಲಿ ಸ್ಮಶಾನ ಮೌನ

  ''ಇಡೀ ಭಾರತ, ಇಂತಹ ಎಲ್ಲ ತಾಯಂದಿರಿಗೆ ಸಹಾಯ ಮಾಡಲು ನಾವಿದ್ದೇವೆ. ಅವರು ತಮ್ಮ ಮಕ್ಕಳನ್ನು ದೇಶ ಕಾಯಲು ಕಳುಹಿಸಿದ್ದಕ್ಕೆ ನಾವು ಇಷ್ಟು ಆರಾಮಾಗಿದ್ದೇವೆ. ಹೀಗಾಗಿ ಅವರಿಗೆಲ್ಲ ಒಂದು ಸೆಲ್ಯೂಟ್. ನಾವೆಲ್ಲ ಅವರ ಮಕ್ಕಳು ಎಂಬಂತೆ ಹುತಾತ್ಮ ಯೋಧನ ಕುಟುಂಬದ ಜೊತೆ ಇರಬೇಕು'' ಎಂದು ಭಾವುಕರಾದರು.

  English summary
  'Bell Bottom' movie team visits soldier guru's family. haripriya breaks down seeing bereaved guru mother.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X