ಜುಲೈ 25 ರಂದು 'ಡಿಸೆಂಬರ್ 1' ಚಿತ್ರ ಪ್ರದರ್ಶನ ಸಂವಾದ
ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಾರಂಭಿಸಿರುವ 'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಕಾರ್ಯಕ್ರಮದಲ್ಲಿ ಚರ್ಚೆ ಮತ್ತು ಅನೇಕ ಚಿಂತನ ಮಂಥನಗಳು ನಡೆಯುತ್ತವೆ. ಈ ಶನಿವಾರ (ಜುಲೈ 25) 'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಕಾರ್ಯಕ್ರಮದಲ್ಲಿ ಪಿ.ಶೇಷಾದ್ರಿ ಅವರ 'ಡಿಸೆಂಬರ್ 1' ಚಲನಚಿತ್ರ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.['ಬೆಳ್ಳಿ ಸಿನೆಮಾ-ಬೆಳ್ಳಿ ಮಾತು' ಸಿನಿ ರಸಿಕರೊಡನೆ ಸಂವಾದ ]
2013ನೇ ಸಾಲಿನ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ 'ಡಿಸೆಂಬರ್ 1', ಚಿತ್ರದ ವಿಶೇಷ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಸಂಜೆ ನಾಲ್ಕು ಗಂಟೆಗೆ ನಡೆಯಲಿದೆ.ಸಾರ್ವಜನಿಕರಿಗೆ ಪ್ರವೇಶ ಉಚಿತ.[ಕನ್ನಡ ಚಿತ್ರರಂಗದ ಏಳಿಗೆ ಬಗ್ಗೆ ಗಿರೀಶ್ ಕಾಸರವಳ್ಳಿ ಮಾತು]

ಸಮಾರಂಭದ ಅಧ್ಯಕ್ಷತೆಯನ್ನು ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಹಾಗೂ ಕನ್ನಡ ಚಲನಚಿತ್ರ ರಂಗದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್.ಜಿ.ದತ್ತಾತ್ರೇಯ, ಕುಮಾರಿ ನಿವೇದಿತಾ, ಸಂತೋಷ್ ಉಪ್ಪಿನ ಹಾಗೂ ಸಿ.ಆರ್.ಶಶಿಕುಮಾರ್ ಅವರು ಪಾಲ್ಗೊಳ್ಳಲಿದ್ದಾರೆ.[ಡಿಸೆಂಬರ್ 1 ಚಿತ್ರದ ಡೌಟ್ ಪರಿಹಾರಕ್ಕೊಂದು ದಿನ]


Click it and Unblock the Notifications











