'ಹಜ್' ಜೊತೆ ಬೆಳ್ಳಿ ಮಾತು ಸಿನಿರಸಿಕರ ಸಂವಾದ

By Suneetha

ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರತಿ ಶನಿವಾರ ನಡೆಸುವ 'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಕಾರ್ಯಕ್ರಮದಲ್ಲಿ ಈ ಶನಿವಾರ (ಆಗಸ್ಟ್ 22) ಬೆಳ್ಳಿ ಸಿನಿಮಾ 'ಹಜ್' ಚಲನಚಿತ್ರ ಪದರ್ಶನಗೊಳ್ಳಲಿದೆ.

ಕಾರ್ಯಕ್ರಮದಲ್ಲಿ 'ಹಜ್' ಚಿತ್ರದ ನಿರ್ದೇಶಕ-ನಟ ನಿಖಿಲ್ ಮಂಜು ಅವರೊಂದಿಗೆ 'ಬೆಳ್ಳಿ ಮಾತು' ಸಂವಾದ ಕಾರ್ಯಕ್ರಮ ನಡೆಯಲಿದೆ.['ಗಾಂಧಿ' ಚಿತ್ರದ ಜೊತೆ ಬೆಳ್ಳಿ ಸಿನಿಮಾ-ಬೆಳ್ಳಿ ಮಾತು]

'Belli Cinema-Belli Mathu' programme organised karnataka chalanachitra academy

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಪ್ರತಿ ವರ್ಷ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸುತ್ತಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯು ಪ್ರತಿ ವಾರವು ಚಿತ್ರ ಪ್ರೇಮಿಗಳನ್ನು ಒಂದೆಡೆ ಕಲೆಹಾಕಿ ಪ್ರಬುದ್ಧ ಚಲನಚಿತ್ರ ಪ್ರೇಕ್ಷಕ ಹಾಗೂ ನಿರ್ಮಾಪಕರ ಹಂದರವನ್ನು ಕಟ್ಟುವುದು 'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಕಾರ್ಯಕ್ರಮದ ಉದ್ದೇಶ.

'ಬೆಳ್ಳಿ ಸಿನಿಮಾ-ಬೆಳ್ಳಿ ಮಾತು' ಈ ವಾರದ ಕಾರ್ಯಕ್ರಮ ಬೆಂಗಳೂರು ಮಿಲ್ಲರ್ಸ್ ರಸ್ತೆಯ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಆಗಸ್ಟ್ 22 ರಂದು ಸಂಜೆ 4 ಗಂಟೆಗೆ ನಡೆಯಲಿದೆ. ['ಪ್ರಕೃತಿ' ಸಿನಿಮಾ ಜೊತೆ ಬೆಳ್ಳಿ ಸಿನಿಮಾ-ಬೆಳ್ಳಿ ಮಾತು]

2013ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿಯಲ್ಲಿ 'ಹಜ್' ಚಿತ್ರವು ಸೇರ್ಪಡೆಗೊಂಡಿತ್ತು. ಈ ಚಿತ್ರದ ನಟನೆಗಾಗಿ ನಟ-ನಿರ್ದೇಶಕ ನಿಖಿಲ್ ಮಂಜು ಅವರಿಗೆ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಲಭಿಸಿದೆ.

ಜೊತೆಗೆ 2013 ರ ಅತ್ಯುತ್ತಮ ಚಿತ್ರ ಎನ್ನುವ ಪ್ರಶಸ್ತಿಗೆ ಕೂಡ 'ಹಜ್' ಭಾಜನವಾಗಿದೆ. ಚಿತ್ರದ ನಿರ್ದೇಶಕ ನಿಖಿಲ್ ಮಂಜು ಅವರಿಗೆ ಹೆಚ್.ಎಲ್.ಎನ್.ಸಿಂಹ ಪ್ರಶಸ್ತಿ ಹಾಗೂ ಚಿತ್ರದ ನಿರ್ಮಾಪಕರಿಗೆ ಕೆ.ಸಿ.ಎನ್, ಗೌಡ ಪ್ರಶಸ್ತಿ ಲಭಿಸಿದೆ. [2013ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ]

ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಎಸ್ ವಿ ರಾಜೇಂದ್ರಸಿಂಗ್ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಹಿರಿಯ ಸಾಹಿತಿ ಹಾಗು ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ದೊಡ್ಡರಂಗೇಗೌಡ, 'ಹಜ್' ಚಿತ್ರದ ನಿರ್ಮಾಪಕ ರಾಜೀವ್ ಕೊಠಾರಿ ಹಾಗೂ ಪ್ರಜಾವಾಣಿ ದಿನಪತ್ರಿಕೆಯ ಮುಖ್ಯ ಉಪಸಂಪಾದಕರಾದ ಚ.ಹ ರಘುನಾಥ ಕಾರ್ಯಕ್ರಮದಲ್ಲಿ ಹಾಜರಿರುತ್ತಾರೆ ಎಂದು ಸಬ್ ರಿಜಿಸ್ಟ್ರಾರ್ ಹೆಚ್.ಬಿ ದಿನೇಶ್ ತಿಳಿಸಿದ್ದಾರೆ.

More from Filmibeat

English summary
'Hajj' Movie: 'Belli Cinema Belli Maathu' Movie shows and discussions by Karnataka Chalanachitra Academy is organised in Chamundeshwari Theater, Millers Road, Bengaluru on August 22nd, Saturday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X