For Quick Alerts
  ALLOW NOTIFICATIONS  
  For Daily Alerts

  'ಬೆಳ್ಳಿ ಹೆಜ್ಜೆ' ಸಂವಾದ ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ.!

  By Suneetha
  |

  ಕರ್ನಾಟಕ ಚಲನಚಿತ್ರ ಅಕಾಡೆಮಿಯು ನವೆಂಬರ್ 30 ರ ಸೋಮವಾರ ಸಂಜೆ 5 ಘಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಚಲನಚಿತ್ರ ರಂಗದ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರೊಂದಿಗೆ ಬೆಳ್ಳಿಹೆಜ್ಜೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

  ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅತೀ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ 'ಬೆಳ್ಳಿ ಹೆಜ್ಜೆ' ಹಿರಿಯರ, ಸಾಧಕರ, ನಟರ, ಗಾಯಕರ ಮಧುರ ನೆನಪುಗಳ ಮೆರವಣಿಗೆಯಾಗಿದೆ.[ಮೈಸೂರು: 'ಬೆಳ್ಳಿ ಸಿನಿಮಾ- ಬೆಳ್ಳಿ ಮಾತು' ಟಿ.ಎಸ್ ನಾಗಾಭರಣ ಅತಿಥಿ]

  ಸಮಾರಂಭದ ಮುಖ್ಯ ಅತಿಥಿಗಳಾಗಿ ಮೂಲ ಸೌಲಭ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಸಚಿವ ಆರ್. ರೋಷನ್ ಬೇಗ್, ಹಿರಿಯ ಚಲನಚಿತ್ರ ನಿರ್ಮಾಪಕಿ ಶ್ರೀಮತಿ ಪಾರ್ವತಮ್ಮ ರಾಜ್‌ಕುಮಾರ್, ಹಿರಿಯ ಚಲನಚಿತ್ರ ನಿರ್ಮಾಪಕ ದೊರೈ ಭಗವಾನ್, ಚಲನಚಿತ್ರ ಕಲಾವಿದೆ ಶ್ರೀಮತಿ ಸುಧಾರಾಣಿ ಭಾಗವಹಿಸಲಿದ್ದಾರೆ.[ಜುಲೈ 25 ರಂದು 'ಡಿಸೆಂಬರ್ 1' ಚಿತ್ರ ಪ್ರದರ್ಶನ ಸಂವಾದ]

  ಜೊತೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ. ರಾ. ಗೋವಿಂದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್. ಆರ್. ವಿಶುಕುಮಾರ್ ಅವರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಹೆಚ್.ಬಿ. ದಿನೇಶ್ ಅವರು ತಿಳಿಸಿದ್ದಾರೆ.

  English summary
  Belli - Hejje program organized by Karnataka Chalana Chitra Academy on 30th November 5 pm in Ravindra Kalakshethra Bengaluru. Kannada Actor Shivaraj Kumar will be guest.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X