ಎಲೆಕ್ಟ್ರಾನಿಕ್ ಸಿಟಿ ಬಳಿ ರೇವ್ ಪಾರ್ಟಿ; ತೆಲುಗು ನಟ-ನಟಿಯರು ಸಿಸಿಬಿ ವಶಕ್ಕೆ
ಬೆಂಗಳೂರಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ 50 ಜನರನ್ನು ವಶಕ್ಕೆ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ. ಆರ್ ಫಾರ್ಮ್‌ಹೌಸ್‌ನಲ್ಲಿ ಈ ಪಾರ್ಟಿ ನಡೆಯುತ್ತಿತ್ತು. ಬರ್ತ್‌ಡೇ ಪಾರ್ಟಿ ಹೆಸರಿನಲ್ಲಿ ರೇವ್ ಪಾರ್ಟಿ ಆಯೋಜನೆ ಆಗಿತ್ತು. ಇನ್ನು ಪಾರ್ಟಿಯಲ್ಲಿ ತೆಲುಗು ನಟ-ನಟಿಯರು ಭಾಗಿ ಆಗಿದ್ದರು ಎಂದು ವರದಿಯಾಗಿದೆ.
ಇನ್ನು ಮಧ್ಯರಾತ್ರಿಯೇ ಸಿಸಿಬಿ ಪೊಲೀಸರು ಫಾರ್ಮ್‌ಹೌಸ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಎಂಡಿಎಂಎ ಮಾತ್ರೆಗಳು ಹಾಗೂ ಕೊಕೇನ್ ಸಿಕ್ಕಿರುವುದಾಗಿ ಹೇಳಲಾಗುತ್ತಿದೆ. ಇನ್ನು ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯವತಿಯರು ಇದ್ದರು. ಬೆಂಗಳೂರು, ತೆಲಂಗಾಣ ಮೂಲಕ ಹಲವರು ಪಾರ್ಟಿಗೆ ಹಾಜರಾಗಿದ್ದರು. ಕಾರ್‌ವೊಂದರಲ್ಲಿ ಆಂಧ್ರ ಶಾಸಕ ಕಾಕನಿ ಗೋವರ್ಧನ ರೆಡ್ಡಿ ಹೆಸರಿನ ಪಾಸ್ ಕೂಡ ಪತ್ತೆ ಆಗಿದೆ.

ಹಲವು ಕಾರುಗಳು ಜನ ಬಂದು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ. ಇನ್ನು ಪಾರ್ಟಿಯಲ್ಲಿ ತೆಲುಗು ಪೋಷಕ ನಟಿ ಹೇಮಾ ಭಾಗಿ ಆಗಿದ್ದರು ಎನ್ನಲಾಗಿತ್ತು. ಆಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಆಕೆ ತಾನು ಹೈದರಾಬಾದ್‌ನಲ್ಲೇ ಇರುವುದಾಗಿ ಹೇಳಿದ್ದಾರೆ ಎಂದು ತೆಲುಗು ಮಾಧ್ಯಮಗಳಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಕೂಡ ಹಲವು ಕಡೆಗಳಲ್ಲಿ ರೇವ್ ಪಾರ್ಟಿಗಳು ನಡೆದಿವೆ. ಪೊಲೀಸರು ದಾಳಿ ನಡೆಸಿದ್ದಾರೆ.
ನಗರದ ಒಳಭಾಗದಲ್ಲಿ ಇಂತಹ ಪಾರ್ಟಿಗಳನ್ನು ನಡೆಸುವುದು ಕಷ್ಟ ಎಂದು ಇದೀಗ ಹೊರಭಾಗರದಲ್ಲಿ ಇಂತಹ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದೆ. ಸನ್‌ಸೆಟ್ ಟು ಸನ್‌ರೈಟ್ ಹೆಸರಿನಲ್ಲಿ ಈ ಪಾರ್ಟಿಯನ್ನು ಏರ್ಪಡಿಸಲಾಗಿತ್ತು. ಅಂದರೆ ಭಾನುವಾರ ಸಂಜೆ ಸೂರ್ಯ ಮುಳುಗಿದ ಬಳಿಕ ಶುರುವಾದ ಪಾರ್ಟಿ ಸೋಮವಾರ ಬೆಳಗ್ಗೆ ಸೂರ್ಯ ಹುಟ್ಟುವ ತನಕ ಸತತವಾಗಿ ನಡೆದಿರುವ ಪಾರ್ಟಿ.
ಸದ್ಯ ಪಾರ್ಟಿ ಆಯೋಜಕ ವಾಸು ಸೇರಿದಂತೆ 5 ಜನರನ್ನು ಕೂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪಾರ್ಟಿಯಲ್ಲಿದ್ದ ಮೂವರು ಡ್ರಗ್ ಪೆಡ್ಲರ್ಸ್ ಕೂಡ ಪೊಲೀಸರ ವಶದಲ್ಲಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್. ಪಿ ಮಲ್ಲಿಕಾರ್ಜುನ್ ಭೇಟಿ ನೀಡಿದ್ದಾರೆ. FSL ತಂಡ ಪಾರ್ಟಿ ನಡೆದ ಜಾಗದಲ್ಲಿ ಪರಿಶೀಲನೆ ನಡೆಸುತ್ತಿದೆ. ಮಾದಕ ವಸ್ತುಗಳು ಸೇರಿದಂತೆ ಪಾರ್ಟಿಯ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ. ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ಒಳಗಿದ್ದವರು ಫಾರ್ಮ್ ಹೌಸ್ ಬಾಗಿಲು ಬಂದ್ ಮಾಡಿಕೊಂಡಿದ್ದರು. ಮಾದಕ ವಸ್ತುಗಳನ್ನು ನಾಶ ಪಡಿಸುವ ಪ್ರಯತ್ನ ಮಾಡಿದ್ದರು ಎನ್ನಲಾಗ್ತಿದೆ. ಬಳಿಕ ಪೊಲೀಸರು ಬಲವಂತವಾಗಿ ಬಾಗಿಲು ತೆಗೆಸಿ ಒಳಗೆ ಹೋಗಿದ್ದಾರೆ. 30 ಜನ ಯುವತಿಯರು 71 ಮಂದಿ ಯುವಕರು, ಸೇರಿ 101 ಜನ ಪಾರ್ಟಿಯಲ್ಲಿ ಇದ್ದರು. ಎಲ್ಲರನ್ನು ವಶಕ್ಕೆ ಪಡೆಯಲಾಗಿದೆ. ಅಷ್ಟು ಜನರನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Click it and Unblock the Notifications











