ಕ್ರೇಜಿಸ್ಟಾರ್ ರವಿಚಂದ್ರನ್ ಇನ್ನು ಮುಂದೆ ಡಾಕ್ಟರ್ ರವಿಚಂದ್ರನ್: ಬೆಂಗಳೂರು ವಿವಿಯಿಂದ ಗೌರವ

ನಟ ರವಿಚಂದ್ರನ್ ಇನ್ನು ಮುಂದೆ ಕೇವಲ ಕ್ರೇಜಿಸ್ಟಾರ್ ರವಿಚಂದ್ರನ್ ಮಾತ್ರವೇ ಅಲ್ಲ ಬದಲಿಗೆ ಡಾ ರವಿಚಂದ್ರನ್.

ಹೌದು, ನಟ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಬೆಂಗಳೂರು ನಗರ ವಿಶ್ವವಿದ್ಯಾನಿಲಯವು ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ.

ಏಪ್ರಿಲ್ 11 ರಂದು ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು. ಸೆಂಟ್ರಲ್ ಕಾಲೇಜಿನ ಜ್ಞಾನಗಂಗೋತ್ರಿ ಆಡಿಟೋರಿಯಮ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರವಿಚಂದ್ರನ್‌ಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಿದ್ದಾರೆ.

ನಟ ರವಿಚಂದ್ರನ್ ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆ ದೊಡ್ಡದು. ರವಿಚಂದ್ರನ್ ಚಿತ್ರರಂಗ ಪ್ರವೇಶಿಸಿ 4 ದಶಕಗಳೇ ಆಗಿವೆ. ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ರವಿಚಂದ್ರನ್, ನಟನಾಗಿ, ನಿರ್ದೇಶಕರಾಗಿ, ನಿರ್ಮಾಪಕರಿಗೆ ಕನ್ನಡ ಚಿತ್ರರಂಗ ಬಹುಕಾಲ ನೆನಪುಳಿಯುವ ಸಿನಿಮಾಗಳನ್ನು ನೀಡಿದ್ದಾರೆ.

ನಾಲ್ಕು ದಶಕಗಳಿಂದಲೂ ಕನ್ನಡ ಸಿನಿಮಾ ಪ್ರೇಕ್ಷಕರನ್ನು ರಂಜಿಸುತ್ತಿರುವ ನಟ ರವಿಚಂದ್ರನ್ ಇನ್ನೂ ವಿರಾಮ ತೆಗೆದುಕೊಂಡಿಲ್ಲ. ಈಗಲೂ ಸತತವಾಗಿ ಸಿನಿಮಾಗಳಲ್ಲಿ ನಟಿಸುತ್ತಲೇ ಇದ್ದಾರೆ. ನಾಯಕ ನಟನಾಗಿ ಮಾತ್ರವೇ ಅಲ್ಲದೆ, ಬೇರೆ ನಟರೊಟ್ಟಿಗೆ ಬೆಂಬಲ ನೀಡುತ್ತಾ ಪೋಷಕ ನಟನಾಗಿಯೂ ರವಿಚಂದ್ರನ್ ನಟಿಸುತ್ತಿದ್ದಾರೆ. ಹೊಸಬರ ಸಿನಿಮಾಗಳಿಗೂ ರವಿಚಂದ್ರನ್ ಬೆಂಬಲ ನೀಡುತ್ತಿದ್ದಾರೆ. ಹಾಗಾಗಿಯೇ ರವಿಚಂದ್ರನ್ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದೆ.

Bengaluru University Announce Honorary doctorate to Actor Ravichandran

ಕನ್ನಡ ಚಿತ್ರರಂಗದಲ್ಲಿ ರಾಜ್‌ಕುಮಾರ್, ವಿಷ್ಣುವರ್ಧನ್ ಸೇರಿದಂತೆ ಹಲವು ಸಾಧಕರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಕೆಲವು ದಿನಗಳ ಹಿಂದಷ್ಟೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಲಾಯ್ತು. ಗೌರವವನ್ನು ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸ್ವೀಕರಿಸಿದರು. ಮೈಸೂರು ವಿವಿಯು ಪುನೀತ್ ಅವರಿಗೆ ಗೌರವ ಡಾಕ್ಟರೇಟ್ ನೀಡಿತು, ರಾಜ್‌ಕುಮಾರ್ ಅವರಿಗೂ ಇದೇ ವಿವಿ ಗೌರವ ಡಾಕ್ಟರೇಟ್ ನೀಡಿತ್ತು ಎಂಬುದು ವಿಶೇಷ.

More from Filmibeat

English summary
Bengaluru university announce honorary doctorate to actor Ravichandran. He has serving in Kannada movie industry from past 40 years.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X