ಓದುಗರು ಮೆಚ್ಚಿದ ಅರ್ಜುನ್ ಜನ್ಯಗೆ 'ಅತ್ಯುತ್ತಮ ಸಂಗೀತ ನಿರ್ದೇಶಕ' ಪ್ರಶಸ್ತಿ.!
2016ನೇ ಸಾಲಿನ 'ಅತ್ಯುತ್ತಮ ಸಂಗೀತ ನಿರ್ದೇಶಕ' ಸೇರಿದಂತೆ ಒಟ್ಟು ಒಂಬತ್ತು ವಿಭಾಗಗಳಲ್ಲಿ ನಿಮ್ಮ ಫಿಲ್ಮಿಬೀಟ್ ಕನ್ನಡ 'ಬೆಸ್ಟ್ ಆಫ್ ಸ್ಯಾಂಡಲ್ ವುಡ್-2016' ಪೋಲ್ ಆಯೋಜಿಸಿತ್ತು. ಆ ಮೂಲಕ ಆನ್ ಲೈನ್ ಮತಗಟ್ಟೆಯಲ್ಲಿ ತಮ್ಮ ನೆಚ್ಚಿನ ತಾರೆಯರಿಗೆ ಹಾಗೂ ಚಿತ್ರಗಳಿಗೆ ಮತ ಹಾಕುವಂತೆ ಓದುಗರಲ್ಲಿ 'ಫಿಲ್ಮಿಬೀಟ್ ಕನ್ನಡ' ಕೋರಿತ್ತು.
ತಮ್ಮ ನೆಚ್ಚಿನ ನಟ-ನಟಿ, ಚಿತ್ರವನ್ನ ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ತನ್ನ ಕೋಟ್ಯಾಂತರ ಓದುಗ ದೊರೆಗಳಿಗೆ 'ಫಿಲ್ಮಿಬೀಟ್ ಕನ್ನಡ' ನೀಡಿದ್ದರಿಂದ, ಬಹಳ ಬಿರುಸಿನಿಂದ ಈ ಮತದಾನ ಪ್ರಕ್ರಿಯೆ ನಡೆಯಿತು. ಸಾಮಾಜಿಕ ಜಾಲತಾಣಗಳಲ್ಲಿ ತಾರೆಯರು ಹಾಗೂ ತಾರೆಯರ ಫ್ಯಾನ್ ಕ್ಲಬ್ ಸ್ವಯಂ ಪ್ರೇರಿತವಾಗಿ 'ಬೆಸ್ಟ್ ಆಫ್ ಸ್ಯಾಂಡಲ್ ವುಡ್-2016' ಪೋಲ್ ಪೇಜ್ ನ ಶೇರ್ ಮಾಡಿಕೊಂಡು ವೋಟಿಂಗ್ ಪ್ರಕ್ರಿಯೆಗೆ ಉತ್ಸಾಹ ತುಂಬಿದರು.[ಓದುಗರ ಅಭಿಮತ: 2016ರ ಉದಯೋನ್ಮುಖ ನಟ 'ಗಡ್ಡಪ್ಪ']
ಸುಮಾರು ಒಂದು ತಿಂಗಳ ಕಾಲ ಈ ಮತದಾನ ಪ್ರಕ್ರಿಯೆ ನಡೆದು, ಈಗ ಅಂತಿಮ ಫಲಿತಾಂಶ ಹೊರ ಹಾಕುವ ಸಮಯ ಬಂದಿದೆ. ಓದುಗ ಪ್ರಭುಗಳ ಇಷ್ಟದ ಅನುಸಾರ, 2016ರ 'ಅತ್ಯುತ್ತಮ ಸಂಗೀತ ನಿರ್ದೇಶಕ' ಆಗಿ ಹೊರಹೊಮ್ಮಿರುವುದು ಅರ್ಜುನ್ ಜನ್ಯ.!

ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ
'ಒನ್ಇಂಡಿಯಾ/ಫಿಲ್ಮಿಬೀಟ್ ಕನ್ನಡ' ಓದುಗರ ಆಯ್ಕೆ ಪ್ರಕಾರ, 2016ರ 'ಅತ್ಯುತ್ತಮ ಸಂಗೀತ ನಿರ್ದೇಶಕ' ಅರ್ಜುನ್ ಜನ್ಯ.[ಸಿನಿಪ್ರಿಯರ ಜಡ್ಜ್ ಮೆಂಟ್: 2016ರ ಅತ್ಯುತ್ತಮ ಕಮರ್ಶಿಯಲ್ ಚಿತ್ರ 'ಜಗ್ಗುದಾದಾ'.!]

ಅತಿ ಹೆಚ್ಚು ಮತ ಪಡೆದ ಅರ್ಜುನ್ ಜನ್ಯ
ನಾಮನಿರ್ದೇಶನಗೊಂಡಿದ್ದ ಐವರು ಸಂಗೀತ ನಿರ್ದೇಶಕರ ಪೈಕಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ 55% ರಷ್ಟು ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.[ಓದುಗರ ಆಯ್ಕೆ: 2016 ರ 'ಅತ್ಯುತ್ತಮ ಹಾಸ್ಯನಟ' ಗರಿ ಸಾಧು ಕೋಕಿಲ ಮುಡಿಗೆ]

ಅರ್ಜುನ್ ಜನ್ಯ ರವರಿಗೆ ಸಿಕ್ಕ ಮತಗಳೆಷ್ಟು.?
ಬರೋಬ್ಬರಿ 14,114 ಜನರು 'ಅತ್ಯುತ್ತಮ ಸಂಗೀತ ನಿರ್ದೇಶಕ-2016' ಆಯ್ಕೆ ಮಾಡಲು ಮತ ಚಲಾಯಿಸಿದ್ದಾರೆ. ಇವರ ಪೈಕಿ ಒಟ್ಟು 7752 ಜನರು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪರ ವೋಟ್ ಮಾಡಿದ್ದಾರೆ.[ಓದುಗರ ನೆಚ್ಚಿನ ಶ್ರದ್ಧಾ ಶ್ರೀನಾಥ್ ಗೆ 'ಉದಯೋನ್ಮುಖ ನಟಿ-2016' ಪ್ರಶಸ್ತಿ]

ತೀವ್ರ ಪೈಪೋಟಿ ನೀಡಿದ ವಿ.ಹರಿಕೃಷ್ಣ
ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ರವರು 37% ರಷ್ಟು ಮತಗಳನ್ನು ತಮ್ಮದಾಗಿಸಿಕೊಂಡು ಎರಡನೇ ಸ್ಥಾನ ಪಡೆದಿದ್ದಾರೆ. ಒಟ್ಟು 5209 ಜನರು ವಿ.ಹರಿಕೃಷ್ಣ ಪರ ಮತ ಚಲಾವಣೆ ಮಾಡಿದ್ದಾರೆ.

ನಂತರದ ಸ್ಥಾನಗಳು
ಮೂರನೇ ಸ್ಥಾನ - ಅಜನೀಶ್ ಲೋಕನಾಥ್ - 562 ಮತಗಳು
ನಾಲ್ಕನೇ ಸ್ಥಾನ - ಅನೂಪ್ ಸೀಳಿನ್ - 370 ಮತಗಳು
ಐದನೇ ಸ್ಥಾನ - ಮಣಿಕಾಂತ್ ಕದ್ರಿ - 221 ಮತಗಳು

ಮತದಾನ ನಡೆದದ್ದು ಯಾವಾಗ.?
'ಒನ್ಇಂಡಿಯಾ/ಫಿಲ್ಮಿಬೀಟ್ ಕನ್ನಡ' ನಡೆಸಿದ 'ಬೆಸ್ಟ್ ಆಫ್ ಸ್ಯಾಂಡಲ್ ವುಡ್-2016' ಪೋಲ್ ಡಿಸೆಂಬರ್ ತಿಂಗಳಿನಲ್ಲಿ ಪ್ರಾರಂಭಗೊಂಡು ಜನವರಿ 15ಕ್ಕೆ ಮುಕ್ತಾಯವಾಗಿದೆ ಎಂಬುದನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ.

ಎಲ್ಲರಿಗೂ ಧನ್ಯವಾದಗಳು
ಈ ಆನ್ ಲೈನ್ ಮತದಾನದಲ್ಲಿ ಪಾಲ್ಗೊಂಡ ಎಲ್ಲಾ ಮತದಾರ ಬಂಧುಗಳಿಗೂ 'ಫಿಲ್ಮಿಬೀಟ್ ಕನ್ನಡ' ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತದೆ. ಇವರು ಗೆಲ್ಲಬೇಕಿತ್ತು, ಅವರು ಗೆಲ್ಲಬೇಕಿತ್ತು ಎಂದು ಬೇಸರಗೊಳ್ಳಬೇಡಿ... ಮುಂದೆ ಇದೇ ರೀತಿಯ ಸಾಕಷ್ಟು ಆನ್ ಲೈನ್ ಮತದಾನಗಳನ್ನು ಆಯೋಜಿಸಲಾಗುತ್ತದೆ. ಇದು ಮತದಾರರ ಅಂತಿಮ ತೀರ್ಮಾನವೇ ಹೊರತು 'ಫಿಲ್ಮಿಬೀಟ್ ಕನ್ನಡ'ದ ತೀರ್ಪಲ್ಲ ಎಂಬುದನ್ನು ಗಮನಿಸತಕ್ಕದ್ದು. ಮತದಾರರ ತೀರ್ಪನ್ನು 'ಫಿಲ್ಮಿಬೀಟ್ ಕನ್ನಡ' ಗೌರವಿಸುತ್ತದೆ.


Click it and Unblock the Notifications











