For Quick Alerts
  ALLOW NOTIFICATIONS  
  For Daily Alerts

  ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವ: 'ಅಮೃತಮತಿ'ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

  |

  ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ಅಮೃತಮತಿ' ಚಿತ್ರ ಲಾಸ್ ಏಂಜಲಿಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಗೆದ್ದಿದ್ದೆ. ಚಿತ್ರಕಥೆ ರಚನೆಗೆ ಬರಗೂರು ರಾಮಚಂದ್ರಪ್ಪ ಅವರು ವೈಯಕ್ತಿಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

  ಕಳೆದ ವರ್ಷ ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಮೃತಮತಿ ಸಿನಿಮಾ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಗೆದ್ದು ಬೀಗಿತ್ತು. 13ನೇ ಶತಮಾನದ ಜನ್ನ ಕವಿಯ ಯಶೋಧರ ಚರಿತೆ ಆಧರಿಸಿ ಮಾಡಿರುವ ಅಮೃತಮತಿ ಚಿತ್ರಕ್ಕೆ ಚಿತ್ರೋತ್ಸವಗಳಲ್ಲಿ ಭಾರಿ ಮೆಚ್ಚುಗೆ ಪಡೆಯುತ್ತಿದೆ.

  ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

  ಇಲ್ಲಿವರೆಗೂ ಅಮೃತಮತಿ ಸಿನಿಮಾ 10 ಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ. ಅಮೃತಮತಿಯಾಗಿ ನಟಿ ಹರಿಪ್ರಿಯಾ ಕಾಣಿಸಿಕೊಂಡಿದ್ದು, ಹರಿಪ್ರಿಯಾ ನಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಎರಡು ಚಿತ್ರೋತ್ಸವಗಳಲ್ಲಿ ನಟಿ ಹರಿಪ್ರಿಯಾ ಅತ್ಯುತ್ತಮ ನಟಿ ಪ್ರಶಸ್ತಿ ಗೆದ್ದಿದ್ದಾರೆ.

  ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬರಗೂರು ರಾಮಚಂದ್ರಪ್ಪ, 'ನಾನು ನಿರ್ದೇಶಿಸಿದ ಕೆಲವು ಚಿತ್ರಗಳು ಉತ್ತಮ ಪ್ರಶಸ್ತಿ ಪಡೆದಿವೆ. ಆದರೆ ಇಲ್ಲಿವರೆಗೆ ನಾನು ರಚಿಸಿದ ಚಿತ್ರಕಥೆಗೆ ಪ್ರಶಸ್ತಿ ಬಂದಿರಲಿಲ್ಲ. ಮೊದಲ ಬಾರಿಗೆ ಚಿತ್ರಕಥೆಗಾಗಿ ಪ್ರಶಸ್ತಿ ಬಂದಿರುವುದು ಸಂತೋಷವಾಗಿದೆ' ಎಂದಿದ್ದಾರೆ.

  ಚಿತ್ರದಲ್ಲಿ ಹರಿಪ್ರಿಯಾ ಮಾತ್ರವಲ್ಲದೆ ಬಹುಭಾಷಾ ನಟ ಕಿಶೋರ್, ಸುಂದರ್ ರಾಜ್, ಪ್ರವೀಳಾ ಜೋಷಾಯ್, ತಿಲಕ್, ಸುಪ್ರಿಯಾ ರಾವ್ ಸೇರಿದಂತೆ ಅನೇಕ ಕಲಾವಿದರು ಬಣ್ಣಹಚ್ಚಿದ್ದಾರೆ. ನಿರ್ದೇಶನದ ಜೊತೆಗೆ ಬರಗೂರರು ಚಿತ್ರಕಥೆ, ಸಂಭಾಷಣೆ ಮತ್ತು ಮೂರು ಹಾಡುಗಳನ್ನು ಬರೆದಿದ್ದು, ಎರಡು ಜನಪದ ಗೀತೆಗಳನ್ನು ಬಳಸಲಾಗಿದೆ.

  Recommended Video

  ಕೂಡಿಟ್ಟ ಹಣವನ್ನು ಒಳ್ಳೆ ರೀತಿ ಉಪಯೋಗಿಸಲು ಮುಂದಾದ ಸುದೀಪ್ | Filmibeat Kannada

  ನಿರ್ದೇಶನದ ಜೊತೆಗೆ ಬರಗೂರರು ಚಿತ್ರಕಥೆ, ಸಂಭಾಷಣೆ ಮತ್ತು ಮೂರು ಹಾಡುಗಳನ್ನು ಬರೆದಿದ್ದು, ಎರಡು ಜನಪದ ಗೀತೆಗಳನ್ನು ಬಳಸಲಾಗಿದೆ.

  English summary
  Best Script Award for Baraguru Ramachandrappa's Amruthamathi in Los Angeles sun film festival.
  Wednesday, May 26, 2021, 17:07
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X