Just In
Don't Miss!
- News
ದೆಹಲಿ: ಮಹಿಳೆಯರಲ್ಲಿ ಆರ್ಥಿಕ ಶಕ್ತಿ ತುಂಬಲು ಎಕ್ಸ್ಎಲ್ಆರ್ಐ ವಿಶೇಷ ಕೇಂದ್ರ!
- Sports
ಸೌತಾಂಪ್ಟನ್ನಲ್ಲಿ ಭಾರತ-ನ್ಯೂಜಿಲೆಂಡ್ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್
- Automobiles
ಐಷಾರಾಮಿ ಮರ್ಸಿಡಿಸ್ ಜಿ-ವ್ಯಾಗನ್ ಎಸ್ಯುವಿಯಲ್ಲಿ ಕಾಣಿಸಿಕೊಂಡ ಬಾಲಿವುಡ್ ಬೆಡಗಿ
- Finance
ಚಿನ್ನದ ಬೆಲೆ ಏರಿಕೆ: ಮಾರ್ಚ್ 08ರ ಬೆಲೆ ಹೀಗಿದೆ
- Lifestyle
ಹೀಗೆ ಆಯ್ಕೆ ಮಾಡಿದರೆ ನೀವು ಬಯಸಿದಂಥ ಸಂಗಾತಿಯೇ ಸಿಗುವರು
- Education
Indian Postal Circle Recruitment 2021: 1421 ಬಿಪಿಎಂ, ಅಬಿಪಿಎಂ ಮತ್ತು ದಖ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೆಗಾ ಸ್ಟಾರ್ ಚಿರಂಜೀವಿ 'ಆಚಾರ್ಯ' ಸಿನಿಮಾದಲ್ಲಿ ಕನ್ನಡದ ಖ್ಯಾತ ನಟ
ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಬಹು ನಿರೀಕ್ಷೆಯ ಆಚಾರ್ಯ ಸಿನಿಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಲಾಕ್ ಡೌನ್ ಬಳಿಕ ಅಂದರೆ ಡಿಸೆಂಬರ್ ನಿಂದ ಚಿತ್ರೀಕರಣ ಪ್ರಾರಂಭ ಮಾಡಿದ್ದು, ಚಿರಂಜೀವಿ ಸೇರಿದಂತೆ ಇಡೀ ಸಿನಿಮಾತಂಡ ಚಿತ್ರೀಕರಣದಲ್ಲಿ ಭಾಗಿಯಾಗಿದೆ.
ಚಿತ್ರದಲ್ಲಿ ಮೆಗಾ ಸ್ಟಾರ್ ಪುತ್ರ ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ರಾಮ್ ಚರಣ್ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದಾರೆ. ಇದೀಗ ಸಿನಿಮಾದಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಚಿರಂಜೀವಿ ಆಚಾರ್ಯ ಸಿನಿಮಾಗೆ ಕನ್ನಡ ಖ್ಯಾತ ನಟ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗಿದೆ. ಮುಂದೆ ಓದಿ..
ವಿಡಿಯೋ: ಅಬ್ಬಾ! ಎನಿಸುವಂತಿದೆ ಭಾರತದ ಅತಿ ದೊಡ್ಡ ಸಿನಿಮಾ ಸೆಟ್

ಆಚಾರ್ಯ ಸಿನಿಮಾದಲ್ಲಿ ಭಜರಂಗಿ ಲೋಕಿ
ಚಿರಂಜೀವಿ ಆಚಾರ್ಯ ಸಿನಿಮಾದಲ್ಲಿ ಕನ್ನಡ ಖ್ಯಾತ ನಟ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಹೌದು, ಮೂಲಗಳ ಪ್ರಕಾರ ಸ್ಯಾಂಡಲ್ ವುಡ್ ನಟ ಭಜರಂಗಿ ಲೋಕಿ ಎಂದೆ ಖ್ಯಾತಿಗಳಿಸಿರುವ ಸೌರವ್ ಲೋಕೇಶ್ ಬಣ್ಣ ಹಚ್ಚುತ್ತಿದ್ದಾರೆ ಎನ್ನಲಾಗುತ್ತಿದೆ.

ಈಗಾಗಲೇ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಲೋಕಿ
ಈ ಬಗ್ಗೆ ಎಲ್ಲೂ ಅಧಿಕೃತವಾಗಿ ಮಾಹಿತಿ ಬಹಿರಂಗ ಪಡಿಸಿಲ್ಲ. ಆದರೆ ಲೋಕಿ ಈಗಾಗಲೇ ಚಿತ್ರೀಕರಣದಲ್ಲಿ ಭಾಗಿಯಾಗಿ ತನ್ನ ಭಾಗದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ ಎನ್ನಲಾಗಿದೆ. ಮೊದಲ ಬಾರಿಗೆ ಲೋಕಿ ಟಾಲಿವುಡ್ ನ ಸ್ಟಾರ್ ನಟರಾದ ರಾಮ್ ಚರಣ್ ಮತ್ತು ಚಿರಂಜೀವಿ ಜೊತೆ ತೆರೆಹಂಚಿಕೊಂಡಿದ್ದಾರೆ. ಮೊದಲ ಬಾರಿಗೆ ಟಾಲಿವುಡ್ ಸ್ಟಾರ್ ನಟರ ಜೊತೆ ನಟಿಸುವಾಗ ಲೋಕಿ ಸಿಕ್ಕಾಪಟ್ಟೆ ಭಯಟ್ಟಿದ್ದರಂತೆ.

ವಿಲನ್ ಆಗಿ ಅಬ್ಬರಿಸಲಿದ್ದಾರೆ ಕನ್ನಡದ ನಟ
ಚಿತ್ರದಲ್ಲಿ ಲೋಕಿ ವಿಲನ್ ಆಗಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ನಟ ಸೋನು ಸೂದ್ ಕೂಡ ಖಳ ನಟನ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಚಿರಂಜೀವಿ ನಟನೆಯ 152ನೇ ಸಿನಿಮಾ ಆಚಾರ್ಯ ರಾಮ್ ಚರಣ್ ನಿರ್ಮಾಣದಲ್ಲಿ ಮೂಡಿಬರುತ್ತಿದೆ. ಚಿತ್ರದದಲ್ಲಿ ನಾಯಕಿಯಾಗಿ ಕಾಜಲ್ ಅಗರ್ ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ.

ಭಜರಂಗಿ ಸಿನಿಮಾ ಮೂಲಕ ಪ್ರಸಿದ್ಧಿ ಪಡೆದಿರುವ ನಟ
ಅಂದಹಾಗೆ ಲೋಕಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಹರ್ಷ ಕಾಂಬಿನೇಷನ್ ನಲ್ಲಿ ಮೂಡಿಬಂದ ಭಜರಂಗಿ ಸಿನಿಮಾ ಮೂಲಕ ಖ್ಯಾತಿಗಳಿಸಿದ್ದಾರೆ. ಈ ಸಿನಿಮಾ ಬಳಿಕ ಭಜರಂಗಿ ಲೋಕಿ ಎಂದೇ ಪ್ರಸಿದ್ಧಿ ಪಡೆದಿದ್ದಾರೆ.
ಸುಮಾರು 20 ಸಿನಿಮಾಗಳಲ್ಲಿ ಮಿಂಚಿರುವ ಲೋಕಿ ಆಚಾರ್ಯ ಮೂಲಕ ತೆಲುಗು ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮೊದಲ ಬಾರಿಗೆ ಟಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿರುವ ಲೋಕಿಗೆ ಟಾಲಿವುಡ್ ಪ್ರೇಕ್ಷಕರು ಹೇಗೆ ಸ್ವಾಗತ ಮಾಡಲಿದ್ದಾರೆ ಎಂದು ಕಾಯುತ್ತಿದ್ದಾರೆ. ಇನ್ನೂ ಲೋಕಿ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಸಿನಿಮಾದಲ್ಲೂ ನಟಿಸಿದ್ದು, ರಿಲೀಸ್ ಗೆ ಎದುರು ನೋಡುತ್ತಿದ್ದಾರೆ.