'ಬಿಚ್ಚುಗತ್ತಿ' ಹಿಡಿದು ಬಂದ ಡಿಂಗ್ರಿ ನಾಗರಾಜ್ ಪುತ್ರ

'ಬಿಚ್ಚುಗತ್ತಿ' ಸಿನಿಮಾ ಈಗಾಗಲೇ ಸ್ಯಾಂಡಲ್ ವುಡ್ ಸಿನಿಮಾಭಿಮಾನಿಗಳ ಗಮನ ಸೆಳೆದಿದೆ. ಇದೀಗ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದಾರೆ.

'ಬಿಚ್ಚುಗತ್ತಿ' ಒಂದು ಐತಿಹಾಸಿಕ ಸಿನಿಮಾ. ಬಿ ಎಲ್‌ ವೇಣು ಅವರು ಬರೆದಿರುವ ರಾಜಾ ಬಿಚ್ಚುಗತ್ತಿ ಭರಮಣ್ಣ ನಾಯಕ ಕಾದಂಬರಿ ಆಧಾರಿತವಾಗಿ ಚಿತ್ರ ಇದಾಗಿದೆ. 'ವಿಕ್ಟರಿ 2' ಬಳಿಕ ಹರಿ ಸಂತೋಷ್ ಈ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಬಾರಿಗೆ ಅವರು ಐತಿಹಾಸಿಕ ಚಿತ್ರಕ್ಕೆ ಕೈ ಹಾಕಿದ್ದಾರೆ.

ಹಿರಿಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ ಚಿತ್ರದ ನಾಯಕನಾಗಿದ್ದಾರೆ. ಚಿತ್ರದ ಫಸ್ಟ್ ಲುಕ್ ನಲ್ಲಿ ಅವರು ತುಂಬ ಚೆನ್ನಾಗಿ ಕಾಣಿಸಿಕೊಂಡಿದ್ದಾರೆ. ಐತಿಹಾಸಿಕ ಪಾತ್ರದ ಮೂಲಕ ದೊಡ್ಡ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ.

 bichhugathii kannada movie first look released

ಹರಿಪ್ರಿಯಾ ಚಿತ್ರದ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಬೇರೆ ಬೇರೆ ರೀತಿಯ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಹರಿಪ್ರಿಯಾ ಇಲ್ಲಿಯೂ ಮಿಂಚಲು ಸಜ್ಜಾಗಿದ್ದಾರೆ.

ಈ ಸಿನಿಮಾ ಎರಡು ಪಾರ್ಟ್ ಗಳಲ್ಲಿ ಬರಲಿದೆ. ಚಾಪ್ಟರ್ 1 ದಳವಾಯಿ ದಂಗೆಯ ಕಥೆ ಹೇಳುತ್ತದೆ. ಹಂಸಲೇಖ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

More from Filmibeat

English summary
Bichhugathii kannada movie first look released.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X