Just In
Don't Miss!
- News
ಅಕ್ರಮ ಆಸ್ತಿ ಪ್ರಕರಣ: ಶಶಿಕಲಾ ಜೈಲು ಶಿಕ್ಷೆ ಇಂದಿಗೆ ಅಂತ್ಯ, ಆಸ್ಪತ್ರೆಯಿಂದಲೇ ಬಿಡುಗಡೆ ಸಾಧ್ಯತೆ
- Lifestyle
ಬುಧವಾರದ ರಾಶಿಫಲ: ಈ ದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ
- Sports
ಸಯ್ಯದ್ ಮುಷ್ತಾಕ್ ಅಲಿ: ಹಿಮಾಚಲ ಪ್ರದೇಶ ಮಣಿಸಿದ ತಮಿಳುನಾಡು
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Automobiles
ವಿನೂತನ ಫೀಚರ್ಸ್ಗಳೊಂದಿಗೆ ನ್ಯೂ ಜನರೇಷನ್ ಟಾಟಾ ಸಫಾರಿ ಎಸ್ಯುವಿ ಅನಾವರಣ
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದರ್ಶನ್ 'ರಾಬರ್ಟ್' ಸಿನಿಮಾದ ಹಿಂದಿ ಡಬ್ಬಿಂಗ್ ರೈಟ್ಸ್ ಗೆ ಹೆಚ್ಚಿದ ಬೇಡಿಕೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇದೆ. ಈಗಾಗಲೇ ರಿಲೀಸ್ ಗೆ ಸಿದ್ಧವಾಗಿರುವ ರಾಬರ್ಟ್ ಯಾವಾಗ ಬರುತ್ತೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಚಿತ್ರದಲ್ಲಿ ದರ್ಶನ್ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
3 ಶೇಡ್ ನಲ್ಲಿ ದರ್ಶನ್ ಮಿಂಚಿದ್ದಾರೆ ಎಂದು ಹೇಳಲಾಗುತ್ತಿದೆ. ಡಿ ಬಾಸ್ ಅಭಿಮಾನಿಗಳು ಉಸಿರು ಬಿಗಿ ಹಿಡಿದು ಕಾಯುತ್ತಿರುವ ರಾಬರ್ಟ್ ಸಿನಿಮಾದ ಹಿಂದಿ ಡಬ್ಬಿಂಗ್ ರೈಟ್ಸ್ ಗೆ ಬೇಡಿಕೆ ಹೆಚ್ಚಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ. ರಾಬರ್ಟ್ ಸಿನಿಮಾದ ಡಬ್ಬಿಂಗ್ ರೈಟ್ಸ್ ಖರೀದಿಸಲು ಹಿಂದಿಯಲ್ಲಿ ಅನೇಕ ನಿರ್ಮಾಣ ಸಂಸ್ಥೆ ಮುಂದೆ ಬಂದಿದೆ ಎನ್ನುವ ಮಾತು ಕೇಳಿಬರುತ್ತಿದೆ. ಮುಂದೆ ಓದಿ...
'ರಾಬರ್ಟ್' ಸಿನಿಮಾದ ಬಿಗ್ ಅಪ್ ಡೇಟ್; ಡಿಸೆಂಬರ್ 3ಕ್ಕೆ ಅಭಿಮಾನಿಗಳಿಗೆ ಕಾದಿದೆ ಸರ್ಪ್ರೈಸ್

ಹಿಂದಿಯಲ್ಲಿ ದರ್ಶನ್ ಸಿನಿಮಾಗೆ ಹೆಚ್ಚಿದ ಬೇಡಿಕೆ
ಹಿಂದಿ ಮಾರುಕಟ್ಟೆಯಲ್ಲಿ ದರ್ಶನ್ ಸಿನಿಮಾಗೆ ಬೇಡಿಕೆ ಹೆಚ್ಚಿದೆ. ಇದೀಗ ಡಿ ಬಾಸ್ ಅಭಿನಯದ ರಾಬರ್ಟ್ ಸಿನಿಮಾವನ್ನು ದಾಖಲೆ ಮೊತ್ತಕ್ಕೆ ಕೇಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಸಿನಿಮಾದ ಡಬ್ಬಿಂಗ್ ರೈಟ್ಸ್ ಮಾರಾಟವಾಗಿಲ್ಲ. ಸಂಪೂರ್ಣ ವ್ಯವಹಾರ ಮುಗಿದ ಬಳಿಕ ನಿರ್ಮಾಪಕ ಉಮಾಪತಿ ಹೆಚ್ಚಿನ ಮಾಹಿತಿ ನೀಡುವ ಸಾಧ್ಯತೆ ಇದೆ.

ಡಿಸೆಂಬರ್ 3ಕ್ಕೆ ವಿನೋದ್ ಪ್ರಭಾಕರ್ ಲುಕ್ ರಿಲೀಸ್
ಡಿಸೆಂಬರ್ 3ಕ್ಕೆ ನಟ ವಿನೋದ್ ಪ್ರಭಾಕರ್ ಹುಟ್ಟುಹಬ್ಬ. ವಿಶೇಷ ದಿನದೊಂದು ವಿನೋದ್ ಪ್ರಭಾಕರ್ ಅವರ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಗಿಫ್ಟ್ ನೀಡುತ್ತಿದ್ದಾರೆ. ಈ ಬಗ್ಗೆ ಸಿನಿಮಾತಂಡ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದೆ.

ರಾಬರ್ಟ್ ರಿಲೀಸ್ ಯಾವಾಗ?
ರಾಬರ್ಟ್ ಸಿನಿಮಾದ ರಿಲೀಸ್ ಡೇಟ್ ಮೇಲೆ ಕುತೂಹಲ ಹೆಚ್ಚಾಗಿದೆ. ರಾಬರ್ಟ್ ಕ್ರಿಸ್ಮಸ್ ಗೆ ಬರ್ತಿದೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೆ ಈ ಬಗ್ಗೆ ಸಿನಿಮಾತಂಡ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಇನ್ನೂ ಸಂಕ್ರಾಂತಿಗೆ ಎಂದು ಹೇಳಲಾಗುತ್ತಿದೆ. ಆದರೆ ರಿಲೀಸ್ ಡೇಟ್ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ ಸಿನಿಮಾತಂಡ.

ತೆಲುಗಿನಲ್ಲೂ ಬರ್ತಿದೆ ರಾಬರ್ಟ್
ರಾಬರ್ಟ್ ಸಿನಿಮಾ ಕನ್ನಡ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಈ ಬಗ್ಗೆ ಈ ಹಿಂದೆ ಮಾತನಾಡಿದ್ದ ನಿರ್ದೇಶಕ ನಂದಕಿಶೋರ್ ತೆಲುಗು ಟೈಟಲ್ ಪೋಸ್ಟರ್ ಘೋಷಣೆಗೆ ವಿಶೇಷ ತಯಾರಿ ನಡೆಯುತ್ತಿದೆ ಎಂದು ಹೇಳಿದ್ದರು. ಚಿತ್ರದಲ್ಲಿ ದರ್ಶನ್ ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ಜಗಪತಿಬಾಬು ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಉಮಾಪತಿ ಶ್ರೀನಿವಾಸ್ ನಿರ್ಮಾಣದಲ್ಲಿ ಸಿನಿಮಾ ಮೂಡಿಬಂದಿದೆ.