ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು; ಸಾಯಿ ಸಂಧ್ಯಾ ಜೊತೆ ಹೊಸ ಜೀವನ ಆರಂಭ.. ಹರಸಲು ಬಂದವರಾರು?

ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 'ಉಗ್ರಂ' ಸಿನಿಮಾದ ಮೂಲಕ ಚಿತ್ರರಂಗದಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸಿದ ಮಂಜು ಕಳೆದ ಕೆಲವು ದಿನಗಳಿಂದ ಮದುವೆ ಸಂಭ್ರಮದಲ್ಲಿ ಇದ್ದರು. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಬಿಗ್ ಬಾಸ್ ಸೀಸನ್ 12ರಲ್ಲೂ ವಿಶೇಷ ಅತಿಥಿಯಾಗಿ ಎಂಟ್ರಿ ಕೊಟ್ಟು ಗಮನ ಸೆಳೆದಿದ್ದರು.

ಬಿಗ್ ಬಾಸ್ ಮುಗಿಸಿ ಹೊರ ಬರುತ್ತಿದ್ದಂತೆ ಮಂಜು ಮದುವೆ ಆಗುವ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದರು. ತಂದೆ-ತಾಯಿ ಕೂಡ ಮಗನಿಗೆ ಮದುವೆ ಆಗುವಂತೆ ಒತ್ತಡ ಹಾಕಿದ್ದರು. ಇದನ್ನು ಬಿಗ್ ಬಾಸ್ ವೇದಿಕೆ ಮೇಲೆ ಕಿಚ್ಚ ಸುದೀಪ್ ಮುಂದೆ ಬೇಡಿಕೆ ಇಟ್ಟಿದ್ದರು. ಬಿಗ್ ಬಾಸ್‌ ಮನೆಯೊಳಗೆ ಎಂಟ್ರಿ ಕೊಡುವುದಕ್ಕೂ ಮುನ್ನ ಕಿಚ್ಚನ ಮಾತು ಕೊಟ್ಟಂತೆ ಉಗ್ರಂ ಮಂಜು, ಸಾಯಿ ಸಂಧ್ಯಾ ಅವರೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದರು.

Bigg Boss Kannada 11 contestant actor Ugramm Manju tie the knot with Sai Sandhya in Dharmasthala

ಅದೇ 12ನೇ ಸೀಸನ್‌ನಲ್ಲಿ ವಿಶೇಷ ಅತಿಥಿಯಾಗಿ ಮನೆಯೊಳಗೆ ಎಂಟ್ರಿ ಕೊಟ್ಟಿದ್ದ ಮಂಜು ಅಲ್ಲಿಯೇ ಬ್ಯಾಚುಲರ್ ಪಾರ್ಟಿಯನ್ನು ಆಚರಿಸಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಮದುವೆ ಸಂಭ್ರಮಗಳು ಜೋರಾಗಿ ನಡೆಯುತ್ತಿತ್ತು. ಮೂಲತ: ಕೋಲಾರದವರಾದ ಉಗ್ರಂ ಮಂಜು ಮನೆಯಲ್ಲಿ ಅರಿಶಿಣ ಶಾಸ್ತ್ರ ಕೂಡ ನೆರೆವೇರಿತ್ತು. ಆ ಕಾರ್ಯಕ್ರಮ ಫೋಟೊ ಹಾಗೂ ವಿಡಿಯೋಗಳು ವೈರಲ್ ಆಗಿದ್ದವು. ಇಂದು (ಜನವರಿ 23) ಸಾಯಿ ಸಂಧ್ಯಾ ಅವರೊಂದಿಗೆ ಸಪ್ತಪದಿಯನ್ನು ತುಳಿದಿದ್ದಾರೆ.

ಇಂದು (ಜನವರಿ 23) ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಉಗ್ರಂ ಮಂಜು ಹಾಗೂ ಸಾಯಿ ಸಂಧ್ಯಾ ತಮ್ಮ ಕುಟುಂಬಸ್ಥರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಇವರ ಮದುವೆ ಧರ್ಮಸ್ಥಳದಲ್ಲಿ ನಡೆದಿದ್ದರಿಂದ ಕೇವಲ ಆತ್ಮೀಯರಿಗಷ್ಟೇ ಆಹ್ವಾನ ನೀಡಲಾಗಿತ್ತು. ಬಿಗ್ ಬಾಸ್‌ನಲ್ಲಿ ಸಹ ಸ್ಪರ್ಧಿಯಾಗಿದ್ದ ಮೋಕ್ಷಿತಾ ಪೈ, ಬಿಗ್ ಬಾಸ್ ಕನ್ನಡ ಸೀಸನ್ 10ರ ವಿನ್ನರ್ ಕಾರ್ತಿಕ್ ಮಹೇಶ್ ಸೇರಿದಂತೆ ಆತ್ಮೀಯರು ಮದುವೆ ಸಮಾರಂಭಕ್ಕೆ ಆಗಮಿಸಿ ಶುಭಕೋರಿದ್ದಾರೆ.

ಉಗ್ರಂ ಮಂಜು ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಸಾಯಿ ಸಂಧ್ಯಾ ಅವರದ್ದು ಕೆಲವೇ ದಿನ ಭೇಟಿ. ಇಬ್ಬರೂ ಒಬ್ಬರನ್ನೊಬ್ಬರು ಭೇಟಿ ಆಗಿದ್ದೇಗೆ? ಸಾಯಿ ಸಂಧ್ಯಾಗೆ ಉಗ್ರಂ ಮಂಜು ಪ್ರಪೋಸ್ ಮಾಡಿದ್ದೇಗೆ? ಅನ್ನೋದನ್ನು ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಅತಿಥಿಯಾಗಿ ಬಂದಿದ್ದಾಗ ಹೇಳಿಕೊಂಡಿದ್ದರು. ಸ್ನೇಹಿತರ ಜೊತೆ ಲಾಂಗ್ ಡ್ರೈವ್ ಹೋಗಿದ್ದರು. ಮಂಗಳೂರಿನ ಸಮೀಪದ ದೇವಸ್ಥಾನಕ್ಕೆ ಭೇಟಿ ಕೊಟ್ಟು ಹಿಂತಿರುಗುವಾಗ ಮದುವೆ ಆಗುವಂತೆ ಕೇಳಿಕೊಂಡಿದ್ದೆ ಎಂದು ಹೇಳಿದ್ದರು.

ಇನ್ನು ಸಾಯಿ ಸಂಧ್ಯಾ ಉತ್ತಮ ವೃತ್ತಿಯಲ್ಲಿದ್ದಾರೆ. ಸ್ಪರ್ಶ್ ಆಸ್ಪತ್ರೆಯಲ್ಲಿ ಸಂಧ್ಯಾ ಅವರು ಟ್ರಾನ್ಸ್‌ಪ್ಲಾಂಟ್ ಕೋ-ಆರ್ಡಿನೇಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಈಗ ಉಗ್ರಂ ಮಂಜು ಅವರನ್ನು ವಿವಾಹವಾಗಿದ್ದು, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಗ್ರಂ ಮಂಜು ಹಾಗೂ ಸಾಯಿ ಸಂಧ್ಯಾ ಅವರ ವಿವಾಹದ ವಿಡಿಯೋ ಹಾಗೂ ಫೋಟೊಗಳು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.

ಉಗ್ರಂ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುವುದಕ್ಕೂ ಮುನ್ನ ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಸಿನಿಮಾದಲ್ಲಿ ನಟಿಸಿದ್ದರು. ಬಿಗ್ ಬಾಸ್ ಮುಗಿದ ಬಳಿಕವೂ ಹಲವು ಪ್ರಾಜೆಕ್ಟ್‌ಗಳಲ್ಲಿ ನಟಿಸುತ್ತಿದ್ದು, ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದರು. ಮದುವೆ ಸಂಭ್ರಮ ಮುಗಿಯುತ್ತಿದ್ದಂತೆ ಉಗ್ರಂ ಮಂಜು ಇನ್ನೂ ಹೆಚ್ಚು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. iಸದ್ಯ ಮದುವೆ ಸಂಭ್ರಮದಲ್ಲಿದ್ದಾರೆ.

More from Filmibeat

English summary
Bigg Boss Kannada 11 contestant actor Ugramm Manju tie the knot with Sai Sandhya in Dharmasthala.
Read more about: bigg boss kannada wedding
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X