For Quick Alerts
  ALLOW NOTIFICATIONS  
  For Daily Alerts

  ಬಿಗ್‌ಬಾಸ್ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ಆತ್ಮಹತ್ಯೆ

  |

  ಮಾಜಿ ಬಿಗ್‌ಬಾಸ್ ಸ್ಪರ್ಧಿ, ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

  ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ಇನ್ನಿಲ್ಲಾ | Filmibeat Kannada

  ಬಿಗ್‌ಬಾಸ್ ಸೀಸನ್ ಮೂರರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಜಯಶ್ರೀ ಅವರು ಈ ಹಿಂದೆ ಎರಡು ಬಾರಿ ಆತ್ಮಹತ್ಯೆ ಪ್ರಯತ್ನ ಮಾಡಿದ್ದರು. ಆಗ ಸೂಕ್ತ ಚಿಕಿತ್ಸೆ ಪಡೆದು ಸಾವಿನಿಂದ ಪಾರಾಗಿದ್ದರು.

  ಜಯಶ್ರೀ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಫೇಸ್‌ಬುಕ್ ಲೈವ್‌ ನಲ್ಲಿ ಒಮ್ಮೆ ತಮಗೆ ದಯಾಮರಣ ಪ್ರಾಪ್ತಿ ಮಾಡಿ,' ನನಗೆ ಬದುಕಿ ಇರಲು ಇಷ್ಟವಿಲ್ಲ. ನಾನು ಒಳ್ಳೆಯ ಹುಡುಗಿ ಅಲ್ಲ' ಎಂದು ಮಾತನಾಡಿದ್ದರು.

  ಜಯಶ್ರೀ ಕುಟುಂಬದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜಗಳ ನಡೆದಿತ್ತು. ಜಯಶ್ರೀ ಅವರು ತಮ್ಮ ಮಾವನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 2019 ರ ಸೆಪ್ಟೆಂಬರ್ ನಲ್ಲಿ ಒನ್‌ ಇಂಡಿಯಾದೊಂದಿಗೆ ಮಾತನಾಡಿದ್ದ ಜಯಶ್ರೀ, 'ನಮ್ಮ ಮಾವ ನನ್ನನ್ನು ಹಾಗೂ ತಾಯಿಯನ್ನು ಮನೆಯಿಂದ ಹೊರಗೆ ಹಾಕಿದ್ದಾರೆ, ಆಸ್ತಿ ವಿಷಯವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ' ಎಂದು ಅವಲತ್ತುಕೊಂಡಿದ್ದರು.

  ಮಾರನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿಗಳು ಹೊರಬರಬೇಕಿದೆ.

  English summary
  Bigg Boss Kannada Fame Jayashree Ramaiah Commits Suicide in Bengaluru. She attempted for suicide twice.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X