»   » ಒಳ್ಳೆ ಹುಡುಗ ಪ್ರಥಮ್ ಆತ್ಮಹತ್ಯೆಗೆ ಯತ್ನ!

ಒಳ್ಳೆ ಹುಡುಗ ಪ್ರಥಮ್ ಆತ್ಮಹತ್ಯೆಗೆ ಯತ್ನ!

Posted By:
Subscribe to Filmibeat Kannada

'ಬಿಗ್ ಬಾಸ್ ಕನ್ನಡ 4' ವಿಜೇತ ಒಳ್ಳೆ ಹುಡುಗ ಪ್ರಥಮ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ರೆ ಮಾತ್ರೆ ಸೇವಿಸಿ ಪ್ರಥಮ್ ಆತ್ಮಹತ್ಯೆಗೆ ಮಾಡಿಕೊಳ್ಳಲು ಮುಂದಾಗಿದ್ದರು ಎನ್ನಲಾಗುತ್ತಿದೆ.['ಬಿಗ್ ಬಾಸ್' ಹಣದ ವಿಚಾರದಲ್ಲಿ ಸಿಡಿದೆದ್ದ 'ಒಳ್ಳೆ ಹುಡುಗ ಪ್ರಥಮ್']

ಇಂದು ಬೆಳಿಗ್ಗೆ ಸುಮಾರು 4 ಗಂಟೆಗೆ ಫೇಸ್ ಬುಕ್ ನಲ್ಲಿ ಲೈವ್ ಗೆ ಬಂದಿದ್ದ ಪ್ರಥಮ್, ತಮಗೆ ವೈಯಕ್ತಿಕವಾಗಿ ಮತ್ತು ಮಾನಸಿಕವಾಗಿ ಕೆಲವರು ಹಿಂಸೆ ಮಾಡುತ್ತಿದ್ದಾರೆ ಎಂದು ಹೇಳಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.[ಪ್ರಥಮ್ ಆತ್ಮಹತ್ಯೆ ಯತ್ನ ಬಳಿಕ ಲೋಕೇಶ್ ಬಿಚ್ಚಿಟ್ಟ ಸ್ಪೋಟಕ ಸುದ್ದಿ!]

Biggboss Winner Pratham Attempt to Suicide

ಈ ವೇಳೆ ಲೋಕಿ ಎಂಬುವವರ ಹೆಸರನ್ನ ಪ್ರಸ್ತಾಪಿಸಿರುವ ಪ್ರಥಮ್, ತನ್ನ ನೋವಿಗೆ, ಅವರೇ ಕಾರಣ ಎಂಬುದನ್ನ ಕೂಡ ಹೇಳಿಕೊಂಡಿದ್ದಾರೆ. ಇನ್ನು 'ಬಿಗ್ ಬಾಸ್'ನಲ್ಲಿ ಗೆದ್ದ ಹಣಕ್ಕೆ ಸಂಬಂಧಪಟ್ಟಂತೆ ಲೋಕಿ ಮತ್ತು ಕೆಲವು ಚಾನಲ್ ಅವರು ಮಾನಸಿಕವಾಗಿ ಹಿಂಸೆ ಮಾಡುತ್ತಿದ್ದಾರೆ, ಬದುಕುವುದಕ್ಕೆ ಬಿಡುತ್ತಿಲ್ಲ ಎಂದು ಪ್ರಥಮ್ ಫೇಸ್ ಬುಕ್ ನಲ್ಲಿ ಲೈವ್ ನಲ್ಲಿ ಹೇಳಿಕೊಂಡಿದ್ದಾರೆ.[ಅಂತೂ ಇಂತೂ 'ಪ್ರಥಮ್' ಕೈಗೆ ಅರ್ಧಕೋಟಿ ಹಣ ಬಂತು!]

ಪ್ರಥಮ್ ಆತ್ಮಹತ್ಯೆ ಯತ್ನಕ್ಕೂ ಮುನ್ನ ಫೇಸ್ ಬುಕ್ ನಲ್ಲಿ ಮಾತನಾಡಿರುವ ವಿಡಿಯೋ ಇಲ್ಲಿದೆ ನೋಡಿ.....

ಕಳೆದ ಹಲವು ದಿನಗಳ ಹಿಂದೆ, ಲೋಕೇಶ್ ಮತ್ತು ಪ್ರಥಮ್ ಇಬ್ಬರ ಮಧ್ಯೆ ಜಗಳವಾಗಿತ್ತು. ಇದಾದ ಬಳಿಕ ಪ್ರಥಮ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದರು ಎಂದು ಲೋಕೇಶ್ ಅವರು ಬಸವೇಶ್ವರ ನಗರ ಪೋಲೀಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದರು. ಅಷ್ಟೇ ಅಲ್ಲದೇ ಪ್ರಥಮ್ ಮತ್ತು ಲೋಕೇಶ್ ನಡುವಿನ ಫೋನ್ ಸಂಭಾಷಣೆಯನ್ನ ಲೋಕೇಶ್ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಈ ಸಂಬಂಧ ಇಬ್ಬರ ನಡುವೆ ರಾತ್ರಿ ಜಗಳವಾಗಿದ್ದು, ಬಳಿಕ ಪ್ರಥಮ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಪ್ರಥಮ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತಿಳಿದುಕೊಳ್ಳಲು ಮುಂದೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ....[ನಿದ್ರೆ ಮಾತ್ರೆ ಸೇವಿಸಿದ್ಯಾಕೆ.? 'ಕೊನೆಯ' ಲೈವ್ ನಲ್ಲಿ ಪ್ರಥಮ್ ಬಾಯ್ಬಿಟ್ಟ ಸತ್ಯವೇನು.?]

English summary
Biggboss Winner Pratham Attempt to Suicide
Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada