ರಕ್ಷಿತ್ ಶೆಟ್ಟಿಯಿಂದ ಬಿಗ್ ಅನೌನ್ಸ್ ಮೆಂಟ್; '777 ಚಾರ್ಲಿ'ಗೆ ಎಂಟ್ರಿ ಕೊಟ್ಟ ತಮಿಳು ಸಿಂಹ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನವೆಂಬರ್ 6 ಶುಕ್ರವಾರ ಬಿಗ್ ಅನೌನ್ಸ್ ಮೆಂಟ್ ಮಾಡುವುದಾಗಿ ಹೇಳಿದ್ದರು. ನವೆಂಬರ್ 6 ಬೆಳಗ್ಗೆವರೆಗೂ ಕಾಯುತ್ತೀರಿ ದೊಡ್ಡ ಸರ್ಪ್ರೈಸ್ ಇದೆ ಎಂದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದರು. ಶೆಟ್ಟರ ಕಡೆಯಿಂದ ಏನು ಸರ್ಪ್ರೈಸ್ ಕಾದಿದೆ ಎಂದು ಅಭಿಮಾನಿಗಳು ಸಹ ಕಾತರರಾಗಿದ್ದರು.
Recommended Video
ಆದರೀಗ ಈ ಕುತೂಹಲಕ್ಕೆ ತೆರೆ ಬಿದ್ದಿದೆ. ಹೌದು, ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷೆಯ 777 ಚಾರ್ಲಿ ಚಿತ್ರಕ್ಕೆ ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟ ಎಂಟ್ರಿ ಕೊಟ್ಟಿದ್ದಾರೆ. ತಮಿಳು ನಟ ಬಾಬಿ ಸಿಂಹ 777 ಚಾರ್ಲಿ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಬಾಬಿ ಸಿಂಹ ಮೊದಲ ಬಾರಿಗೆ ಕನ್ನಡ ಸಿನಿಮಾ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ.
ಬಾಬಿ ಸಿಂಹ ಎಂಟ್ರಿ ಬಗ್ಗೆ ಬಹಿರಂಗಪಡಿಸುವ ಜೊತೆಗೆ ಚಿತ್ರದ ಪೋಸ್ಟರ್ ಅನ್ನು ರಿವೀಲ್ ಮಾಡಿದ್ದಾರೆ. ಇಂದು ಬಾಬಿ ಸಿಂಹಗೆ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡುವ ಮೂಲಕ ರಕ್ಷಿತ್ ಶೆಟ್ಟಿ ಮತ್ತು ತಂಡ ಶುಭಹಾರೈಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ರಕ್ಷಿತ್,

'ಸಂತೋಷ ಮತ್ತು ಉತ್ಸುಕತೆಯಿಂದ ಈ ವಿಶೇಷ ದಿನದಂದೆ ಬಾಬಿ ಸಿಂಹ ಅವರನ್ನು ಸ್ವಾಗತ ಮಾಡುತ್ತಿದ್ದೇವೆ. ಹುಟ್ಟುಹಬ್ಬದ ಶುಭಾಶಯಗಳು. ನಮ್ಮ ಸಿನಿಮಾ ಪಯಣದಲ್ಲಿ ನೀವು ಭಾಗಿಯಾಗಿರುವುದು ತುಂಬಾ ಸಂತೋಷವಾಗುತ್ತೆ' ಎಂದು ಟ್ವೀಟ್ ಮಾಡಿದ್ದಾರೆ.
ಹೈದರಾಬಾದ್ ಮೂಲಕ ನಟ ಬಾಬಿ ಸಿಂಹ ಖ್ಯಾತಿ ಗಳಿಸಿದ್ದು ತಮಿಳು ಸಿನಿಮಾರಂಗದಲ್ಲಿ. ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಬಾಬಿ ಸಿಂಹ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಬಣ್ಣಹಚ್ಚುತ್ತಿದ್ದಾರೆ. ಸದ್ಯ ಬಾಬಿ ಸಿಂಹ ಕಮಲ್ ಹಾಸನ್ ಅಭಿನಯದ ಇಂಡಿಯನ್-2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಜೊತೆಗೆ ಇನ್ನೂ ನಾಲ್ಕೈದು ತಮಿಳು ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಕನ್ನಡ ಸಿನಿಮಾರಂಗಕ್ಕೂ ಎಂಟ್ರಿ ಕೊಟ್ಟಿದ್ದಾರೆ.
777 ಚಾರ್ಲಿ ಸಿನಿಮಾದ ಚಿತ್ರೀಕರಣ ಈಗಾಗಲೇ ಬಹುತೇಕ ಮುಕ್ತಾಯವಾಗಿದೆ. ಈ ಚಿತ್ರ ಪರಮ್ವಾ ಸ್ಟುಡಿಯೋಸ್ ಮತ್ತು ಪುಷ್ಕರ್ ಫಿಲ್ಮ್ ಬ್ಯಾನರ್ ನಲ್ಲಿ ಸಿದ್ಧವಾಗುತ್ತಿದೆ. ಚಿತ್ರಕ್ಕೆ ಕಿರಣ್ ರಾಜ್ ಆಕ್ಷನ್ ಹೇಳುತ್ತಿದ್ದಾರೆ. ಈಗಾಗಲೇ ಪೋಸ್ಟರ್ ಗಳ ಮೂಲಕ ಅಭಿಮಾನಿಗಳ ಗಮನ ಸೆಳೆದಿರುವ ಈ ಸಿನಿಮಾದ ಮೇಲೆ ನಿರೀಕ್ಷೆ ತುಸು ಜಾಸ್ತಿನೇ ಇದೆ.


Click it and Unblock the Notifications











