Just In
Don't Miss!
- News
ರಾಜ್ಯ ಬಜೆಟ್ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದೇನು?
- Automobiles
ಸ್ಪ್ಲೆಂಡರ್ ಬೈಕುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ ಹೀರೋ ಮೋಟೊಕಾರ್ಪ್
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Finance
30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಕ್ಯಾಪ್ಜೆಮಿನಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೈಸೂರು: ಪೊಗರು ಸಿನಿಮಾ ವಿರುದ್ಧ ಬ್ರಾಹ್ಮಣ ಸಮುದಾಯ ಪ್ರತಿಭಟನೆ
ಮೈಸೂರಿನ ವಿವಿಧ ಬ್ರಾಹ್ಮಣ ಸಂಘಟನೆಗಳ ನೇತೃತ್ವದಲ್ಲಿ ಸೆನ್ಸಾರ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ದೃವಸರ್ಜಾ ಅಭಿನಯದ ಪೊಗರು ಸಿನಿಮಾದಲ್ಲಿ ಬ್ರಾಹ್ಮಣರಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸೆನ್ಸಾರ್ ಮಂಡಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹಿಸಿದರು.
ಡಿಸಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ವಿವಧ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯವನ್ನ ಟಾರ್ಗೆಟ್ ಮಾಡಲಾಗ್ತಿದೆ . ಪೊಗರು ಸಿನಿಮಾದಲ್ಲಂತೂ ಬ್ರಾಹ್ಮಣ ಸಮುದಾಯಕ್ಕೆ ತೀರ ಅವಮಾನ ಮಾಡಲಾಗಿದೆ. ಬ್ರಾಹ್ಮಣರ ಸ್ವಾಭಿಮಾನವನ್ನ ಕೆಣಕಲಾಗುತ್ತಿದೆ. ಸೆನ್ಸಾರ್ ಮಂಡಳಿ ಚಿತ್ರವನ್ನ ಸೆನ್ಸಾರ್ ಮಾಡುವಾಗ ಈ ಎಲ್ಲ ಅಂಶಗಳನ್ನ ಗಮನಿಸಬೇಕು . ಯಾವುದೇ ಒಂದು ಸಮಾಜದ ಭಾವನೆಗೆ ಧಕ್ಕೆಯಾಗುವಂತ ಸೀನ್ ಗಳಿಗೆ ಕತ್ತರಿ ಹಾಕಬೇಕು ಅಂಟ್ ಪ್ರತಿಭಟನಾಕಾರರು ಒತ್ತಾಯಿಸಿದರು.
ಸಿನಿಮಾದಲ್ಲಿ ಪುರೋಹಿತಶಾಹಿ ವರ್ಗಕ್ಕೆ ತುಂಬಾ ಅವಮಾನಿಸಲಾಗಿದೆ. ಈ ಹಿಂದೆಯೂ ಸಹ ಅನೇಕ ಚಿತ್ರಗಳಲ್ಲಿ ಬ್ರಾಹ್ಮಣರಿಗೆ ಅವಮಾನ ಮಾಡೋ ದೃಶ್ಯಗಳನ್ನ ಬಲವಂತವಾಗಿ ಸೃಷ್ಟಿಸಲಾಗಿದೆ . ಕಥೆಗೆ ಬೇಡದೇ ಇದ್ರೂ ಹ ಸಮುದಾಯದ ಅನಗತ್ಯ ಟೀಕೆಗಳನ್ನ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಪೊಗರು ಸಿನಿಮಾ ದೃಶ್ಯದಲ್ಲಿ ಬ್ರಾಹ್ಮಣ ರಿಗೆ ಅವಮಾನ ಮಾಡೋ ಸೀನ್ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ನಿರ್ದೇಶಕ ನಂದಕಿಶೋರ್ ಕೂಡ ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾರೆ. ಅಲ್ಲದೆ ಆಕ್ರೋಶಕ್ಕೆ ಗುರಿಯಾಗಿರುವ ಆ ದೃಶ್ಯಕ್ಕೆ ಕತ್ತರಿ ಹಾಕುವ ಭರವಸೆ ನೀಡಿದ್ದಾರೆ.
ಪದೇಪದೇ ಈ ರೀತಿಯ ಘಟನೆಗಳು ಮರುಕಳಿಸುತ್ತಿವೆ. ಇದಕ್ಕೆ ಸೆನ್ಸಾರ್ ಮಂಡಳಿ ಅಧಿಕಾರಿಗಳೇ ನೇರ ಹೊಣೆ ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಲಿ ಅಂತ ಪ್ರತಿಭಟನಾಕಾರರು ಅಗ್ರಹಿಸಿದರು.