For Quick Alerts
  ALLOW NOTIFICATIONS  
  For Daily Alerts

  BIG BREAKING: ಹಾಸ್ಯ ನಟ ಬುಲೆಟ್ ಪ್ರಕಾಶ್ ವಿಧಿವಶ

  |

  ಕನ್ನಡದ ಪ್ರಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ಅನಾರೋಗ್ಯದ ಕಾರಣದಿಂದ ಸೋಮವಾರದಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

  ದೇಹದ ತೂಕ ಇಳಿಸಿಕೊಳ್ಳಲು ಮಾಡಿಸಿಕೊಂಡ ಶಸ್ತ್ರಚಿಕಿತ್ಸೆಯೇ ಜೀವಕ್ಕೆ ಮುಳುವಾಯ್ತಾ??| Bullet Prakash No More

  ಕಿಡ್ನಿ ಸಮಸ್ಯೆಯಿಂದ ಬಳಲಸುತ್ತಿದ್ದ ಅವರು ಕೆಲವು ದಿನಗಳ ಹಿಂದೆ ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು.

  ಸತತ ಚಿಕಿತ್ಸೆಯ ಬಳಿಕ ಸೋಮವಾರ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿತ್ತು, ಅವರನ್ನು ವೆಂಟಿಲೇಟರ್‌ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಸೋಮವಾರ ಮಧ್ಯಾಹ್ನನದ ವೇಳೆಗೆ ಸಾವನ್ನಪ್ಪಿದ್ದಾರೆ.

  ಇಬ್ಬರು ಮಕ್ಕಳನ್ನು ಅಗಲಿರುವ ಬುಲೆಟ್

  ಇಬ್ಬರು ಮಕ್ಕಳನ್ನು ಅಗಲಿರುವ ಬುಲೆಟ್

  ಬುಲೆಟ್ ಪ್ರಕಾಶ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಹಾಗೂ ಅಸಂಖ್ಯ ಅಭಿಮಾನಿಗಳನ್ನು ಅಗಲಿದ್ದಾರೆ. ದುನಿಯಾ ವಿಜಯ್, ದರ್ಶನ್, ಶಿವರಾಜ್ ಕುಮಾರ್ ಅವರೊಂದಿಗೆ ಆತ್ಮೀಯ ಸಂಬಂಧವನ್ನು ಬುಲೆಟ್ ಪ್ರಕಾಶ್ ಹೊಂದಿದ್ದರು.

  ದುನಿಯಾ ವಿಜಯ್ ಸೇರಿದಂತೆ ಹಲವು ನಟರು

  ದುನಿಯಾ ವಿಜಯ್ ಸೇರಿದಂತೆ ಹಲವು ನಟರು

  ಬುಲೆಟ್ ಪ್ರಕಾಶ್ ಅವರನ್ನು ಕಾಣಲು ಆಸ್ಪತ್ರೆಗೆ ದುನಿಯಾ ವಿಜಯ್ ಸೇರಿದಂತೆ ಹಲವು ಖ್ಯಾತ ನಟರು ಆಗಮಿಸಿದ್ದರು. ಬುಲೆಟ್ ಪ್ರಕಾಶ್ ಅವರ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯ ಮಾಡಿದರು.

  ತೂಕ ಇಳಿಸಿಕೊಳ್ಳುವ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು

  ತೂಕ ಇಳಿಸಿಕೊಳ್ಳುವ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು

  ಬುಲೆಟ್ ಪ್ರಕಾಶ್ ಅವರು ಕೆಲ ತಿಂಗಳುಗಳ ಹಿಂದೆ ತೂಕ ಕಳೆದುಕೊಳ್ಳಲು ಶಸ್ತ್ರಚಿಕಿತ್ಸೆಗೆ ಒಳಗಾದರು. ಆಗಿನಿಂದಲೂ ಖಾಯಿಲೆಗಳು ಅವರ ಬೆನ್ನು ಬಿದ್ದವು. ಈ ಹಿಂದೆಯೂ ಅವರು ಆಸ್ಪತ್ರೆಗೆ ದಾಖಲಾಗಿ, ಸಾವು-ಬದುಕಿನ ನಡುವೆ ಹೋರಾಡಿ ಚೇತರಿಸಿಕೊಂಡು ಹೊರಬಂದಿದ್ದರು.

  ಶಾಂತಿ ಕ್ರಾಂತಿ ಸಿನಿಮಾದ ಮೂಲಕ ಸಿನಿಮಾ ಪ್ರವೇಶ

  ಶಾಂತಿ ಕ್ರಾಂತಿ ಸಿನಿಮಾದ ಮೂಲಕ ಸಿನಿಮಾ ಪ್ರವೇಶ

  ಶಾಂತಿ ಕ್ರಾಂತಿ ಸಿನಿಮಾದ ಮೂಲಕ ಸಿನಿಮಾರಂಗ ಪ್ರವೇಶಿಸಿದ ಅವರು ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ದರ್ಶನ್ ಸಿನಿಮಾಗಳಲ್ಲಿ ಅವರು ಖಾಯಂ ಹಾಸ್ಯ ಕಲಾವಿದರಾಗಿದ್ದರು.

  English summary
  Kannada comedy actor Bullet Prakash died in private hospital on Monday. He was suffering from kidney problem.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X